ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶಾಲಾ ಮಕ್ಕಳ ರಕ್ತ ಹೀರುವ ದರಿದ್ರ ಸರ್ಕಾರ: ರಾಮಲಿಂಗಾರೆಡ್ಡಿ ಆಕ್ರೋಶ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಶಾಲಾ ಮಕ್ಕಳ ರಕ್ತ ಹೀರುವ ದರಿದ್ರ ಸರ್ಕಾರ: ರಾಮಲಿಂಗಾರೆಡ್ಡಿ ಆಕ್ರೋಶ

ಬೆಂಗಳೂರು: ಸರ್ಕಾರದ ಜನವಿರೋಧಿ ನಿರ್ಧಾರದ ವಿರುದ್ಧ ರಾಮಲಿಂಗಾರೆಡ್ಡಿ ಅವರು ಮಾಧ್ಯಮ ಪ್ರಕಟಣೆ ಮೂಲಕ ಶನಿವಾರ ತಮ್ಮ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜನ ಸಾಮಾನ್ಯರ ರಕ್ತ ಹೀರುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಈಗ ಸರಕಾರಿ ಶಾಲೆ ವಿದ್ಯಾರ್ಥಿಗಳ ಪೋಷಕರಿಂದ ತಿಂಗಳಿಗೆ 100 ರೂ. ದೇಣಿಗೆ ವಸೂಲಿಗೆ ಮುಂದಾಗಿದೆ. ಈ ಸರಕಾರ ಅದೆಷ್ಟು ದರಿದ್ರಗೇಡಿ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ. 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಿಕ್ಷಣದಿಂದ ವಿಮುಖರಾಗಿದ್ದಾರೆ. ಇದು ಸರಕಾರದ ಶಿಕ್ಷಣ ವಿರೋಧಿನೀತಿ ಅಲ್ಲದೆ ಮತ್ತೇನು ಎಂದು ರಾಮಲಿಂಗಾರೆಡ್ಡಿ ಅವರು ಕಿಡಿ ಕಾರಿದ್ದಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದ ಅವಧಿ ಅರ್ಧದಷ್ಟು ಮುಕ್ತಾಯವಾಗಿದ್ದು, ಇನ್ನೂ ಹಲವೆಡೆ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್ ವಿತರಣೆ ಆಗಿಲ್ಲ. ಪಠ್ಯ ಪರಿಕರಗಳನ್ನು ಪೂರೈಸದಿದ್ದರೆ ಮಕ್ಕಳು ಕಲಿಯುವುದಾದರೂ ಹೇಗೆ? ಬಹುಶಃ ಸರಕಾರ 40 % ಕಮಿಷನ್ ಬೆನ್ನು ಬಿದ್ದಿರುವುದರಿಂದ ಈ ವಿಳಂಬ ಆಗಿರಬಹುದು ಎಂದು ಅವರು ಛೇಡಿಸಿದ್ದಾರೆ.

ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಬಹುತೇಕ ವಿದ್ಯಾರ್ಥಿಗಳು ಬಡ ಹಾಗೂ ಕೆಳಮಧ್ಯಮ ಕುಟುಂಬಗಳಿಗೆ ಸೇರಿದವರು. ಈಗ ಅವರಿಂದಲೂ ಹಣ ವಸೂಲಿಗೆ ಇಳಿದಿರುವುದು ಖಂಡನೀಯ. ಇದರ ಹಿಂದೆ ಅವರನ್ನು ಶಿಕ್ಷಣ ವಂಚಿತರನ್ನಾಗಿ ಮಾಡುವ ಹುನ್ನಾರವಿದೆ. ಈ ಸರ್ಕಾರದ ಬೇಜವಾಬ್ದಾರಿತನ, ನಿರ್ಲಕ್ಷ್ಯದಿಂದ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ ಎಂದು ರಾಮಲಿಂಗಾರೆಡ್ಡಿ ಅವರು ಆರೋಪಿಸಿದ್ದಾರೆ.

ಹಿಂದೆ ಕಾಂಗ್ರೆಸ್ ಸರಕಾರ ವಿದ್ಯಾರ್ಥಿಗಳಿಗೆಂದು ಜಾರಿಗೆ ತಂದಿದ್ದ ಮಧ್ಯಾಹ್ನದ ಬಿಸಿಯೂಟ, ಹಾಲು, ಸಮವಸ್ತ್ರ, ಶೂ-ಸಾಕ್ಸ್ ವಿತರಣೆ, ವಿದ್ಯಾಸಿರಿ, ಹಾಸ್ಟೆಲ್, ವಿದೇಶ ವ್ಯಾಸಂಗಕ್ಕೆ ಸಾಲ ಸೌಲಭ್ಯ ಮತ್ತಿತರ ಯೋಜನೆಗಳನ್ನು ಈಗಿನ ಬಡಜನ ವಿರೋಧಿ ಬಿಜೆಪಿ ಸರಕಾರ ಒಂದೊಂದಾಗಿ ಕಿತ್ತುಕೊಳ್ಳುತ್ತಿದೆ. ಈಗ ಅದರ ಜತೆಗೆ ಬಡ ವಿದ್ಯಾರ್ಥಿಗಳಿಂದ ವಸೂಲಿಗೆ ಮುಂದಾಗಿದೆ. ಇದು ಸರ್ಕಾರದಿಂದ ಬಡ ಜನರಿಗೆ ಆಗುತ್ತಿರುವ ಅನ್ಯಾಯದ ಪರಮಾವಧಿ. ಈ ಸರ್ಕಾರಕ್ಕೆ ಸರ್ಕಾರಿ ಶಾಲೆ ನಡೆಸುವ ಯೋಗ್ಯತೆಯೂ ಇಲ್ಲವಾಗಿದೆ ಎಂದು ರಾಮಲಿಂಗಾರೆಡ್ಡಿ ಅವರು ಹೇಳಿಕೆಯಲ್ಲಿ ಟೀಕಿಸಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು