ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶಾಲಾ ನಿರ್ವಹಣೆಗೆ ವಿದ್ಯಾರ್ಥಿಗಳ ಪೋಷಕರಿಂದ ಶುಲ್ಕ ವಸೂಲಿ: AAP ವಿರೋಧ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಶಾಲಾ ನಿರ್ವಹಣೆಗೆ ವಿದ್ಯಾರ್ಥಿಗಳ ಪೋಷಕರಿಂದ ಶುಲ್ಕ ವಸೂಲಿ: AAP ವಿರೋಧ

ಬೆಂಗಳೂರು : ಮುಖ್ಯಮಂತ್ರಿ ಹಾಗೂ ಸಚಿವರ 40% ಕಮಿಷನ್‌ ದಂದೆಯಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸ ಬರಿದಾಗಿರುವುದರಿಂದ, ಶಿಕ್ಷಣ ಇಲಾಖೆಯು ಶಾಲಾ ಮಕ್ಕಳ ಪೋಷಕರಿಂದ ತಿಂಗಳಿಗೆ 100 ರೂಪಾಯಿ ಪಡೆಯುವ ಹಂತಕ್ಕೆ ತಲುಪಿದೆ ಎಂದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ  ಇಂದಿನ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋಹನ್ ದಾಸರಿ, ʼದಾನಿಗಳಿಂದ ದೇಣಿಗೆ ಸಂಗ್ರಹಿಸಿ ಶೂಗಳನ್ನು ಖರೀದಿಸುವಂತೆ ರಾಜ್ಯ ಸರ್ಕಾರವು ಶಾಲೆಗಳಿಗೆ ಈ ಹಿಂದೆ ಆದೇಶ ಹೊರಡಿಸಿತ್ತು. ಈಗ ಡೆಸ್ಕ್‌, ವಿದ್ಯುತ್‌ ಬಿಲ್‌ ಇನ್ನಿತರ ಖರ್ಚುಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಪ್ರತಿ ತಿಂಗಳು 100 ರೂಪಾಯಿ ಶುಲ್ಕ ಪಡೆಯುವಂತೆ ರಾಜ್ಯ ಶಿಕ್ಷಣ ಇಲಾಖೆಯು ಶಾಲೆಗಳ ಆಡಳಿತ ಮಂಡಳಿಗಳಿಗೆ ಸುತ್ತೋಲೆ ಹೊರಡಿಸಿದೆ. ಬಿಜೆಪಿ ಆಡಳಿತದಲ್ಲಿ ಮಿತಿಮೀರಿದ ಭ್ರಷ್ಟಾಚಾರದಿಂದ ಸರ್ಕಾರ ದಿವಾಳಿಯಾಗಿರುವುದು ಇದರಿಂದ ಸ್ಪಷ್ಟವಾಗುತ್ತದೆʼ ಎಂದು ಹೇಳಿದರು.

ʼಖಾಸಗಿ ಶಾಲೆಗಳಿಗೆ ಹೋಗಲು ಸಾಧ್ಯವಾಗದ ಹಾಗೂ ಸರ್ಕಾರಿ ಶಾಲೆಯಲ್ಲಿ ಓದಬೇಕೆಂದು ಬಯಸುವ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು ರಾಜ್ಯ ಸರ್ಕಾರಗಳ ಹೊಣೆ ಎಂದು ಸಂವಿಧಾನದ 21 ಎ ವಿಧಿಯು ಸ್ಪಷ್ಟವಾಗಿ ಹೇಳಿದೆ. ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್‌ 3ರ ಪ್ರಕಾರ ಎಂಟನೇ ತರಗತಿ ತನಕ ಯಾವುದೇ ಅಡ್ಡಿಯಿಲ್ಲದೇ ಸರ್ಕಾರವು ಶಿಕ್ಷಣ ನೀಡಬೇಕಿದೆ. ಆದರೆ ರಾಜ್ಯ ಸರ್ಕಾರವು ಈ ಎರಡೂ ಕಾನೂನಿನ ಉದ್ದೇಶವನ್ನು ಗಾಳಿಗೆ ತೂರಿ, ಪೋಷಕರಿಂದ ಹಣ ವಸೂಲಿ ಮಾಡಲು ಮುಂದಾಗಿದೆ. ಹಣ ಪಾವತಿಸಲು ಸಾಧ್ಯಗುವ ಪೋಷಕರ ಮಕ್ಕಳಿಗೆ ಮಾತ್ರ ಶಿಕ್ಷಣ ನೀಡಲು ಸರ್ಕಾರ ನಿರ್ಧರಿಸಿದಂತಿದೆʼ  ಎಂದು ಮೋಹನ್ ದಾಸರಿ  ಹೇಳಿದರು.

ʼದೆಹಲಿಯ ಸಿಎಂ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕಾಗಿ ಸುಮಾರು ಶೇ. 25ರಷ್ಟು ಅನುದಾನವನ್ನು ಮೀಸಲಿಡುತ್ತಿದೆ. ಅಲ್ಲಿನ ಶಾಲೆಗಳಿಗೆ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಎಎಪಿ ಸರ್ಕಾರ ಒದಗಿಸುತ್ತಿದೆ. ಆದರೆ ಕರ್ನಾಟಕದ ಬಿಜೆಪಿ ಸರ್ಕಾರವು ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡುವ ಬದಲು ಪೋಷಕರಿಂದ ಹಣ ವಸೂಲಿ ಮಾಡಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಈವರೆಗೆ ವಿವಿಧ ತೆರಿಗೆಗಳನ್ನು ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದ ಬಿಜೆಪಿ ಸರ್ಕಾರವು ಈಗ ಪೋಷಕರಿಂದ ಹಣ ಪಡೆಯುವ ಮೂಲಕ ಹಗಲು ದರೋಡೆಗೆ ಇಳಿದಿದೆʼ ಎಂದು  ಪಕ್ಷದ ನೀತಿ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಪ್ರಕಾಶ್ ನೆಡುಂಗಡಿಯವರು ಮಾತನಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಬೆಂಗಳೂರು  ನಗರ ಸಂಘಟನಾ ಕಾರ್ಯದರ್ಶಿ ಸುರೇಶ್ ರಾಥೋಡ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು̤

https://www.youtube.com/watch?v=JiKZ0haXRnk
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು