ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ರಾಜ್ಯದ ಜನರ ಸರ್ವಾಂಗೀಣ ಏಳಿಗ್ಗೆಗೆ ಪೂರಕವಾದ ಬಜೆಟ್: ಶೆಟ್ಟರ್

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ರಾಜ್ಯದ ಜನರ ಸರ್ವಾಂಗೀಣ ಏಳಿಗ್ಗೆಗೆ ಪೂರಕವಾದ ಬಜೆಟ್: ಶೆಟ್ಟರ್

ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಪ್ರತಿಕ್ರಿಯೆ

ಹುಬ್ಬಳ್ಳಿ ಜು.7: ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯದ ಜನರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು ರೂ.3 ಲಕ್ಷ 28 ಸಾವಿರ ಕೋಟಿ ಮೊತ್ತದ ಬಜೆಟ್ ಮಂಡನೆ ಮಾಡಲಾಗಿದೆ. ಆ ಮೂಲಕ ರಾಜ್ಯದ ಎಲ್ಲ ವರ್ಗದ ಜನರ ಸರ್ವಾಂಗೀಣ ಏಳಿಗೆಗೆ ಪೂರಕವಾದ ಬಜೆಟ್ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯರಾದ ಜಗದೀಶ ಶೆಟ್ಟರ್ ಹೇಳಿದ್ದಾರೆ.

ರಾಜ್ಯದ ಜನರಿಗೆ ನೀಡಿದ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸರ್ಕಾರ ಬದ್ಧವಾಗಿದೆ. ಆ ಹಿನ್ನೆಲೆಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ, ಅನ್ನಭಾಗ್ಯ ಹಾಗೂ ಶಕ್ತಿ ಯೋಜನೆಗಳನ್ನು ಜಾರಿ ಮಾಡಲಾಗುವುದು. ಇವುಗಳ ಜಾರಿಗೆ ರೂ.52 ಸಾವಿರ ಕೋಟಿ ಅಗತ್ಯವಿದ್ದು, ರಾಜ್ಯದ 1 ಕೋಟಿಗೂ ಅಧಿಕ ಜನಸಾಮಾನ್ಯರಿಗೆ ಮಾಸಿಕ 4 ರಿಂದ 5 ಸಾವಿರ ನೀಡಲಾಗುವುದು. ಅಲ್ಲದೇ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಸಹ ಕೈಬಿಡಲಾಗುವುದು. ರೈತರಿಗೆ ನೀಡಲಾಗುತ್ತಿರುವ ಶೂನ್ಯ ಬಡ್ಡಿದರದಲ್ಲಿ ಅಲ್ಪಾವಧಿ ಸಾಲ ರೂ. 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಹಾಗೂ ದೀರ್ಘಾವಧಿ ಸಾಲ ರೂ. 10 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಳ ಮಾಡಲಾಗುತ್ತಿದೆ. 100 ರೈತ ಉತ್ಪಾದನಾ ಕಂಪನಿಗಳಿಗೆ ಶೇ.4 ಬಡ್ಡಿದರದಲ್ಲಿ ಸಹಾಯಧನ ಒದಗಿಸಲಾಗುವುದು. ಕೃಷಿ ಭಾಗ್ಯ ಯೋಜನೆಯಡಿ ನರೇಗಾ ಯೋಜನೆಗೆ ರೂ.10 ಕೋಟಿ ಅನುದಾನ, ಇಂದಿರಾ ಕ್ಯಾಂಟೀನ್ ಗೆ ರೂ. 100 ಕೋಟಿ ಅನುದಾನ ಮೀಸಲಿಡಲಾಗುತ್ತಿದೆ. ದೇಶದಲ್ಲೇ ಮೊದಲ ಅಂಗಾAಗ ಜೋಡಣೆ ಆಸ್ಪತ್ರೆ ಸ್ಥಾಪಿಸಲಾಗುವುದು. ಅಲ್ಲದೇ ರಾಮನಗರದಲ್ಲಿ ಅತಿದೊಡ್ಡ ರೈಷ್ಮೆ ಮಾರುಕಟ್ಟೆಯನ್ನು ರೂ. 75 ಕೋಟಿ ವೆಚ್ಚದಲ್ಲಿ ಆರಂಭಿಸಲಾಗುತ್ತಿದೆ. ಹುಬ್ಬಳ್ಳಿಯ ಗುರುದ್ವಾರ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತಿದೆ. ಸಮಾಜದ ಕೆಳ, ಮಧ್ಯಮ ವರ್ಗದ ಜನರ ಸರ್ವತೋಮುಖ ಏಳಿಗ್ಗೆಗೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಅರ್ಥ ವ್ಯವಸ್ಥೆಯು ಹಿಂದಿನ ಸರ್ಕಾರ ಅವಧಿಯಲ್ಲಿ ಹದಗೆಟ್ಟಿತ್ತು. ಕೃಷಿ, ಕೈಗಾರಿಕೆ ಹಾಗೂ ಸೇವಾ ವಲಯಗಳಲ್ಲಿ ಕುಂಠಿತ ಬೆಳವಣಿಗೆಯನ್ನು ಕಂಡಿತ್ತು. ರಾಜ್ಯದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಹಿಂದಿನ ಸರ್ಕಾರ ವಿಫಲವಾಗಿದೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಹಾಗೂ ತೈಲ ಬೆಲೆ ಏರಿಕೆಯನ್ನು ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ವಿದೇಶಿ ಬಂಡವಾಳ ಸೆಳೆಯಲು ಸರ್ಕಾರ ಮುಂದಾಗಲಿದೆ. ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ನೀರಾವರಿ, ಆರೋಗ್ಯ, ಶಿಕ್ಷಣ ಸೇರಿದಂತೆ ಎಲ್ಲ ವಲಯಗಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಿರುವುದು ಸ್ವಾಗತಾರ್ಹವಾದದ್ದು ಎಂದು ಜಗದೀಶ ಶೆಟ್ಟರ್ ಅವರು ಬಣ್ಣಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು