ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಖಿ-ಒನ್ ಸ್ಟಾಪ್ ಸೆಂಟರ್‌ನಲ್ಲಿ ಸಂಕಷ್ಟಕ್ಕೊಳಗಾದ ಮಹಿಳೆಯರ ನೆರವಿಗೆ ವಾಹನ ವ್ಯವಸ್ಥೆ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಸಖಿ-ಒನ್ ಸ್ಟಾಪ್ ಸೆಂಟರ್‌ನಲ್ಲಿ ಸಂಕಷ್ಟಕ್ಕೊಳಗಾದ ಮಹಿಳೆಯರ ನೆರವಿಗೆ ವಾಹನ ವ್ಯವಸ್ಥೆ

ಜಿಲ್ಲೆಯಲ್ಲಿ ಸಂಕಷ್ಟಕ್ಕೊಳಪಟ್ಟ ಮಹಿಳೆಯರ ರಕ್ಷಣೆಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಉಚಿತ ವಾಹನ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು ನ.01 ರಂದು ಸದರಿ ವಾಹನಕ್ಕೆ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಚಾಲನೆ ನೀಡಿದರು.


ಶಾಸಕರು, ಸಖಿ ಒನ್ ಸ್ಟಾಪ್ ಸೆಂಟರ್, ಮಹಿಳಾ ತ್ತ ಮಕ್ಕಳ ಅಭಿವೃದ್ದಿ ಇಲಾಖೆಗಳ ಸಂಕೀರ್ಣ ಆವರಣ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಇಲ್ಲಿ ನ.01 ರಂದು ವಾಹನಕ್ಕೆ ಚಾಲನೆ ನೀಡಿದರು.


ಈ ವೇಳೆ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಜಿ.ಪಂ ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ, ಇತರೆ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.


ಕುಟುಂಬ, ಸಮುದಾಯ ಕೆಲಸದ ಸ್ಥಳಗಳು ಖಾಸಗಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೌರ್ಜನ್ಯಕ್ಕೆ ಒಳಗಾಗಿ ಹಿಂಸೆಯನ್ನು ಅನುಭವಿಸುತ್ತಿರುವ ಮಹಿಳೆಯರಿಗೆ ಸಕಾಲಿಕ ನೆರವನ್ನು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ನಿರ್ಭಯ ಯೋಜನೆಯಡಿ ದೇಶಾದ್ಯಂತ 24/7 ರಂತೆ ಸಖಿ ಒನ್ ಸ್ಟಾಪ್ ಸೆಂಟರ್‌ಗಳನ್ನು ದೇಶದ ಪ್ರತಿ ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿದೆ.


ಸಖಿ-ಒನ್ ಸ್ಟಾಪ್ ಸೆಂಟರ್ ಕೇಂದ್ರವನ್ನು ಜಿಲ್ಲೆಯಲ್ಲಿ ಶಿವಮೊಗ್ಗ ಮತ್ತು ಸಾಗರ ತಾಲ್ಲೂಕಿನಲ್ಲಿ ಪ್ರಾರಂಭಿಸಲಾಗಿದೆ. ಶಿವಮೊಗ್ಗದಲ್ಲಿ ದಿ: 06-11-2020 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸಂಕೀರ್ಣ ಆವರಣ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಇಲ್ಲಿ ಸ್ವಂತ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಾಗರ ತಾಲ್ಲೂಕಿನಲ್ಲಿ ದಿ: 28-05-2024 ರಿಂದ ಕಾರ್ಯಾರಂಭಗೊಂಡು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಅವರಣ, ಲೋಕೋಪಯೋಗಿ ಕಟ್ಟಡ, ಬಿ.ಹೆಚ್.ರಸ್ತೆ, ಸಾಗರ ಇಲ್ಲಿ ಕೆಲಸ ನಿರ್ವಹಿಸುತ್ತಿದೆ.


ಸಖಿ ಕೇಂದ್ರದಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರಿಗೆ 5 ಉಚಿತ ಸೇವೆಗಳಾದ ಆಪ್ತ ಸಮಾಲೋಚನೆ, ಪೊಲೀಸ್ ನೆರವು, ಕಾನೂನು ನೆರವು, ವೈದ್ಯಕೀಯ ನೆರವು ಮತ್ತು ತಾತ್ಕಾಲಿಕ ಆಶ್ರಯವನ್ನು 24/7 ಒದಗಿಸಲಾಗುತ್ತಿದೆ.
ಶಿವಮೊಗ್ಗ ಸಖಿ ಕೇಂದ್ರದಲ್ಲಿ ಒಟ್ಟು 2095 ಪ್ರಕರಣಗಳು ದಾಖಲಾಗಿದ್ದು, 1846 ಪ್ರಕರಣಗಳಿಗೆ ಕೇಂದ್ರದ ಸೇವೆಗಳನ್ನು ಒದಗಿಸಿ ಮುಕ್ತಾಯಗೊಳಿಸಲಾಗಿರುತ್ತದೆ.


ಜಿಲ್ಲೆಯಲ್ಲಿ ಸಂಕಷ್ಟಕ್ಕೊಳಪಟ್ಟ ಮಹಿಳೆಯರ ರಕ್ಷಣೆಗಾಗಿ ಉಚಿತ ವಾಹನ ಸೌಲಭ್ಯ ಒದಗಿಸಲಾಗಿದ್ದು ನೊಂದ ಮಹಿಳೆಯರು ಸಖಿ ಕೇಂದ್ರಕ್ಕಾಗಲಿ ಅಥವಾ ಮಹಿಳಾ ಸಹಾಯವಾಣಿ ಸಂ: 181 ಕ್ಕೆ ಕರೆ ಮಾಡಿ ಪ್ರಯೋಜನ ಪಡೆಯಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು