ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಶೋಭಾ ಕರಂದ್ಲಾಜೆ ಅವರು ಐದು ವರ್ಷಗಳ ಕಾಲ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಒಂದೇ ಒಂದು ದಿನವೂ ದ್ವನಿ ಎತ್ತಲಿಲ್ಲ: ಸಿಎಂ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಶೋಭಾ ಕರಂದ್ಲಾಜೆ ಅವರು ಐದು ವರ್ಷಗಳ ಕಾಲ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಒಂದೇ ಒಂದು ದಿನವೂ ದ್ವನಿ ಎತ್ತಲಿಲ್ಲ: ಸಿಎಂ

ಬೆಂಗಳೂರು ಏ 7: ಪ್ರೊ.ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ. ಇವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದೇ ಗೆಲ್ಲುವ ಅವಕಾಶಗಳಿವೆ ಎಂದು ಸಿ.ಎಂ.ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಸಮಾವೇಶ ಮತ್ತು ಬೂತ್ ಮುಖಂಡರುಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಶೋಭಾ ಕರಂದ್ಲಾಜೆ ಅವರಿಗೆ ಇಲ್ಲಿ ಟಿಕೆಟ್ ಕೊಟ್ಟಿದ್ದಾರೆ. ಉತ್ತರ ಲೋಕಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಶೋಭಾ ಅವರಿಗೆ ಇಲ್ಲಿಂದಲೂ ನೀವು ವಾಪಾಸ್ ಕಳಿಸಿ ಎಂದು ಕರೆ ನೀಡಿದರು.

ಶೋಭಾ ಕರಂದ್ಲಾಜೆ ಅವರು ಐದು ವರ್ಷಗಳ ಕಾಲ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಒಂದೇ ಒಂದು ದಿನವೂ ದ್ವನಿ ಎತ್ತಲಿಲ್ಲ. ಇಂಥವರಿಂದ ನಿಮ್ಮ ಮತಕ್ಕೆ ಬೆಲೆ ಬರುತ್ತದಾ? ನೀತಿ ಆಯೋಗದ ಉಪಾಧ್ಯಕ್ಷರಾಗಿ, ಉನ್ನತ ಶೈಕ್ಷಣಿಕ ಅರ್ಹತೆ ಮತ್ತು ತಿಳಿವಳಿಕೆ ಹೊಂದಿ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ನಿರಂತರವಾಗಿ ಧ್ವನಿ ಎತ್ತುವ ರಾಜೀವ್ ಗೌಡರಿಂದ ನಿಮ್ಮ ಮತಕ್ಕೆ ಉತ್ತಮ ಘನತೆ ಬರುತ್ತದೆ. ಆದ್ದರಿಂದ ಪ್ರಜ್ಞಾವಂತರಾಗಿ ಇವರನ್ನು ಗೆಲ್ಲಿಸಿ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ಮೋದಿ ಅವರು ಕಳೆದ ಹತ್ತು ವರ್ಷಗಳಲ್ಲಿ ಹೇಳಿದ ಯಾವುದನ್ನೂ ಜಾರಿ ಮಾಡಲೇ ಇಲ್ಲ. ಕಪ್ಪು ಹಣ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ ಕಾಳು ಯಾವುದರ ಬೆಲೆಯನ್ನೂ ಇಳಿಸಲಿಲ್ಲ. ಬರೀ ಬಾಯಲ್ಲಿ ಅಚ್ಛೇ ದಿನ್ ಆಯೆಗಾ ಎಂದು ಭಾಷಣ ಭಾರಿಸಿದ್ದು ಬಿಟ್ಟರೆ ಭಾರತೀಯರ ಬದುಕಿಗೆ ಅಚ್ಛೆ ದಿನ್ ಬರಲೇ ಇಲ್ಲ ಎಂದರು.

ಕೇಂದ್ರ ಸರ್ಕಾರದ ಬೆಲೆ ಏರಿಕೆಗಳಿಂದ ಹೈರಾಣಾಗಿದ್ದ ನಮ್ಮ ನಾಡಿನ ಜನತೆಯ ಕಷ್ಟಕ್ಕೆ ಸ್ಪಂದಿಸುವ ಉದ್ದೇಶದಿಂದಲೇ ಐದು ಗ್ಯಾರಂಟಿಗಳ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 5-6 ಸಾವಿರ ಉಳಿತಾಯ ಆಗುವ ಕಾರ್ಯಕ್ರಮ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಭದ್ರ ಆಗಿರುವವರೆಗೂ ಈ ಅನುಕೂಲ ಪ್ರತಿ ತಿಂಗಳೂ ಜನರ ಮನೆ ಬಾಗಿಲಿಗೆ ಬರುತ್ತಲೇ ಇರುತ್ತದೆ ಎಂದರು.

ಮೋದಿಯವರು ಮತ್ತೆ ಪ್ರಧಾನಿಯಾದರೆ ಭಾರತ ತೊರೆಯುವುದಾಗಿ ಹೇಳಿದ್ದ ದೇವೇಗೌಡರು ಈಗ ಮೋದಿಯವರ ಜತೆಗೇ ಸೇರಿದ್ದಾರೆ. ಇದ್ದದ್ದು ಇದ್ದಂಗೆ ಹೇಳಿದರೆ ದೇವೇಗೌಡರಿಗೆ ಸಿಟ್ಟು ಎಂದು ವ್ಯಂಗ್ಯವಾಡಿದರು.

ನಾಡಿನ ಜನತೆಯ ತೆರಿಗೆ ಹಣದ ಪಾಲಿನಲ್ಲಿ ರಾಜ್ಯಕ್ಕೆ ವಿಪರೀತ ಅನ್ಯಾಯ ಮಾಡಿದರು. ರಾಜ್ಯದ ಜನತೆ ಪ್ರವಾಹದಿಂದ, ಬರಗಾಲದಲ್ಲಿ ನರಳುವಾಗ ಮೋದಿ, ಅಮಿತ್ ಶಾ ನೆಪಕ್ಕೂ ರಾಜ್ಯಕ್ಕೆ ಕಾಲಿಡಲಿಲ್ಲ. ರಾಜ್ಯದ ಪಾಲಿನ ಬರ ಪರಿಹಾರದ ಹಣವನ್ನು ಇವತ್ತಿನವರೆಗೂ ಒಂದೇ ಒಂದು ರೂಪಾಯಿ ನೀಡಲಿಲ್ಲ. ಹೀಗೆ ನಿರಂತರವಾಗಿ ರಾಜ್ಯದ ಜನತೆಗೆ ಮಹಾದ್ರೋಹ ಎಸಗಿದ ಬಿಜೆಪಿ ಯನ್ನು ಸೋಲಿಸಿ 7 ಕೋಟಿ ಕನ್ನಡಿಗರು ಸ್ವಾಭಿಮಾನ ಮೆರೆಯಬೇಕು ಎಂದು ಕರೆ ನೀಡಿದರು.

ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರೊ.ರಾಜೀವ್ ಗೌಡ ಮತ್ತು 400 ಕ್ಕೂ ಅಧಿಕ ಮಂದಿ ಬೂತ್ ಮಟ್ಟದ ಮಹಿಳಾ ಮುಖಂಡರು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು