ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ರಾಹುಲ್ ಗಾಂಧಿ ಮೇಲಿನ ಎಫ್‌ಐಆರ್ ಘನಘೋರ ಅನ್ಯಾಯ, ಅಸ್ಪೃಶ್ಯತೆ ಪ್ರಶ್ನಿಸಿದವರ ಮೇಲೆಯೇ ಕೇಸು ಹಾಕುವುದು ಸಂವಿಧಾನ ವಿರೋಧಿ’: ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಆಕ್ರೋಶ

PPeepal Media

Peepal Media ರಾಜ್ಯ

• 1 ನಿಮಿಷದ ಓದು

‘ರಾಹುಲ್ ಗಾಂಧಿ ಮೇಲಿನ ಎಫ್‌ಐಆರ್ ಘನಘೋರ ಅನ್ಯಾಯ, ಅಸ್ಪೃಶ್ಯತೆ ಪ್ರಶ್ನಿಸಿದವರ ಮೇಲೆಯೇ ಕೇಸು ಹಾಕುವುದು ಸಂವಿಧಾನ ವಿರೋಧಿ’: ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಜಾಗವನ್ನು ಶುದ್ಧೀಕರಣಗೊಳಿಸಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡ ಪೊಲೀಸರು ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿ ಯಾವ ತಪ್ಪನ್ನೂ ಮಾಡದಿದ್ದರೂ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವುದು ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ ಹಾಗೂ ಘನಘೋರ ಅನ್ಯಾಯ ಎಂದು ಕಿಡಿಕಾರಿದರು.

ಭಾಷಣ ಮಾಡಿದ ಜಾಗವನ್ನು ಗಂಜಲ ಅಥವಾ ನೀರಿನಿಂದ ಶುದ್ಧೀಕರಿಸುವುದು ಅಸ್ಪೃಶ್ಯತೆಯ ಪರಮಾವಧಿ ಹಾಗೂ ಸಂವಿಧಾನಕ್ಕೆ ಮಾಡಿದ ಅಪಚಾರ ಎಂದ ಸಿದ್ದರಾಮಯ್ಯ, “ಸಂವಿಧಾನದಲ್ಲಿ ಅಸ್ಪೃಶ್ಯತೆಯ ಆಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾರು ಅಸ್ಪೃಶ್ಯತೆಯನ್ನು ಆಚರಿಸಿದ್ದಾರೋ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿತ್ತು. ಆದರೆ, ಇಂತಹ ಅಸಂವಿಧಾನಿಕ ಕೃತ್ಯವನ್ನು ಪ್ರಶ್ನಿಸಿದ ರಾಹುಲ್ ಗಾಂಧಿಯವರ ಮೇಲೆಯೇ ದಲಿತ ದೌರ್ಜನ್ಯದ ಹೆಸರಿನಲ್ಲಿ ಪ್ರಕರಣ ದಾಖಲಿಸಿರುವುದು ಅತ್ಯಂತ ಖೇದಕರ ಮತ್ತು ವಿಪರ್ಯಾಸದ ಸಂಗತಿ. ಇದು ಖರ್ಗೆ ಅವರಿಗೆ ಮಾತ್ರವಲ್ಲ, ದೇಶದ ಪ್ರಮುಖ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರಿಗೂ ಮಾಡಿದ ಅಪಮಾನ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೆಯೂ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸಿದಾಗ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ರದ್ದುಪಡಿಸಿ ಬಾಯಿ ಮುಚ್ಚಿಸಲು ಯತ್ನಿಸಲಾಗಿತ್ತು, ಕೊನೆಗೆ ನ್ಯಾಯಾಲಯವೇ ಅವರಿಗೆ ನ್ಯಾಯ ಒದಗಿಸಿತ್ತು ಎಂದು ನೆನಪಿಸಿದ ಅವರು, ಮನುವಾದಿ ಧೋರಣೆಯುಳ್ಳ ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆಯಿಲ್ಲ ಎಂದು ವಾಗ್ದಾಳಿ ನಡೆಸಿದರು.

ಅಧಿಕಾರದಲ್ಲಿ ಮುಂದುವರಿಯಲು ಬಿಜೆಪಿ ಸರ್ವಥಾ ನಾಲಾಯಕ್ ಎಂದು ಹೇಳಿದ ಅವರು, ಈ ದ್ವೇಷದ ರಾಜಕಾರಣದ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆಗಳು ನಡೆಯಲಿದ್ದು, ಪಕ್ಷವು ರಾಹುಲ್ ಗಾಂಧಿಯವರ ಬೆಂಬಲಕ್ಕೆ ದೃಢವಾಗಿ ನಿಲ್ಲಲಿದೆ ಎಂದರು. ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ರಾಜ್ಯ ಸರ್ಕಾರದ ಹಾಲಿ ಹಾಗೂ ಮಾಜಿ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ಸೇರಿದಂತೆ ನೂರಾರು ಮುಖಂಡರು ಉಪಸ್ಥಿತರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು