ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ವಿದ್ಯಾರ್ಥಿ-ಯುವಜನರ ಗೆಲುವು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ವಿದ್ಯಾರ್ಥಿ-ಯುವಜನರ ಗೆಲುವು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯು ದೇಶದ ಎಚ್ಚೆತ್ತ ವಿದ್ಯಾರ್ಥಿ ಹಾಗೂ ಯುವಜನರ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ದೆಹಲಿಯಲ್ಲಿ ಪೊಲೀಸರ ದೌರ್ಜನ್ಯ ಮತ್ತು ಕಠಿಣ ಪರಿಸ್ಥಿತಿಗಳನ್ನು ಎದುರಿಸಿ ಶಾಂತಿಯುತ ಹೋರಾಟ ನಡೆಸಿದ ಲಕ್ಷಾಂತರ ವಿದ್ಯಾರ್ಥಿ-ಯುವಜನರಿಗೆ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಸಿಕ್ಕ ವಿಜಯವಾಗಿದೆ ಎಂದಿರುವ ಅವರು, ಬಿಸಿಲು, ಮಳೆ, ಹಸಿವು ಹಾಗೂ ಆರೋಗ್ಯವನ್ನು ಲೆಕ್ಕಿಸದೆ ದೆಹಲಿಯಲ್ಲಿ ಬೀಡುಬಿಟ್ಟು ಹೋರಾಡಿದ ಯುವಜನರು ದೇಶದಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದಾರೆ. ಕಾಲದ ಕರೆಗೆ ಓಗೊಟ್ಟು ಕಾಂಗ್ರೆಸ್ ಪಕ್ಷವು ಜವಾಬ್ದಾರಿಯುತ ವಿರೋಧ ಪಕ್ಷದ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದೆ ಹಾಗೂ ರಾಹುಲ್ ಗಾಂಧಿ ಅವರು ಸಕಾಲದಲ್ಲಿ ದೃಢಚಿತ್ತದ ನಾಯಕತ್ವ ನೀಡಿ ಹೋರಾಟವನ್ನು ಮುನ್ನಡೆಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಶಿಕ್ಷಣ ಸಚಿವರ ರಾಜೀನಾಮೆಯಿಂದಲೇ ಶಿಕ್ಷಣ ಕ್ಷೇತ್ರದ ಎಲ್ಲಾ ಸಮಸ್ಯೆಗಳು ಪರಿಹಾರವಾಗುವುದಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ, ಸರ್ವಾಧಿಕಾರ ಮತ್ತು ದುರಾಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಗಮಿಸುವವರೆಗೆ ಶಿಕ್ಷಣ ವ್ಯವಸ್ಥೆ ಸುಧಾರಣೆಯಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಜಕೀಯದಿಂದ ಶಿಕ್ಷಣದವರೆಗೆ ಎಲ್ಲವನ್ನೂ ವ್ಯಾಪಾರೀಕರಣಗೊಳಿಸಿರುವ ಅಸಮರ್ಥ ಮತ್ತು ಭ್ರಷ್ಟ ಸರ್ಕಾರವನ್ನು ಕೇಂದ್ರದಿಂದ ಕಿತ್ತೊಗೆಯುವವರೆಗೆ ವಿದ್ಯಾರ್ಥಿಗಳು ಹಾಗೂ ಯುವಜನರು ವಿರಮಿಸಬಾರದು ಎಂದು ಅವರು ಕರೆ ನೀಡಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷವು ಸದಾ ಜನರ ಜೊತೆಗೆ ಇರಲಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು