ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿದ್ದರಾಮಯ್ಯ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ : ಬಿಜೆಪಿ ಮುಖಂಡರಿಗೆ ಸಿದ್ದು ಸವಾಲು

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಸಿದ್ದರಾಮಯ್ಯ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ : ಬಿಜೆಪಿ ಮುಖಂಡರಿಗೆ ಸಿದ್ದು ಸವಾಲು

ಬೆಂಗಳೂರು: ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ ಮತ್ತು ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ.

ಈ ಕುರಿತು ತಮ್ಮ ಟ್ವಿಟ್‌ ಮಾಡಿರುವ ಅವರು, ಬಸವರಾಜ ಬೊಮ್ಮಾಯಿ ಅವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಯಡಿಯೂರಪ್ಪ ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ ಯಡಿಯೂರಪ್ಪನವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ.

ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ, ಬೊಮ್ಮಾಯಿ ಅವರೊಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ ʼಪೇ ಸಿಎಂʼ ಹೈಕಮಾಂಡ್ ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ ಎಂದಿದ್ದಾರೆ.

ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ ಯಡಿಯೂರಪ್ಪ ಅವರೇ, ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ

ಪಾಪ, ಯಡಿಯೂರಪ್ಪನವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ ಬಿಜೆಪಿಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಹೀಗಾಘಿ ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು