ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

‘ನನಗೆ ಬೇಸರವಿಲ್ಲ, ನಾನು ಸಮಚಿತ್ತದಿಂದ ಇರುತ್ತೇನೆ’: ರಾಜಣ್ಣ ವಜಾ ಪ್ರಕರಣದ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

PPeepal Media

Peepal Media ರಾಜ್ಯ

• 1 ನಿಮಿಷದ ಓದು

‘ನನಗೆ ಬೇಸರವಿಲ್ಲ, ನಾನು ಸಮಚಿತ್ತದಿಂದ ಇರುತ್ತೇನೆ’: ರಾಜಣ್ಣ ವಜಾ ಪ್ರಕರಣದ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: “ನನಗೆ ಬೇಸರವಿಲ್ಲ, ನಾನು ಯಾವುದಕ್ಕೂ ಬೇಸರ ಮಾಡಿಕೊಳ್ಳುವುದಿಲ್ಲ. ನಾನು ಯಾವಾಗಲೂ ಸಮಚಿತ್ತದಿಂದ ಇರುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜಣ್ಣ ವಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸದಸ್ಯರು ವಿಧಾನಸಭೆಯಲ್ಲಿ ಕಾಲೆಳೆದಾಗ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಆರ್‌ಸಿಬಿ ಕಾಲ್ತುಳಿತ ಪ್ರಕರಣದ ಚರ್ಚೆಯ ಸಂದರ್ಭದಲ್ಲಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸಿದ್ದರಾಮಯ್ಯನವರನ್ನು ಕೆಣಕಿದರು. “ನೀವು ಹಳೆಯ ಸಿದ್ದರಾಮಯ್ಯ ಅಲ್ಲ. ಆ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ. ಹಿಂದೆ ನೀವು ನಡೆದಿದ್ದೇ ದಾರಿಯಾಗಿತ್ತು, ಆದರೆ ಈಗ ಎರಡು ಶಕ್ತಿ ಕೇಂದ್ರಗಳಿವೆ. ಹಿಂದಿನ ಸಿದ್ದರಾಮಯ್ಯ ಆಗಿದ್ದರೆ ನಿಮ್ಮ ಪರಮಾಪ್ತ, ನಿಮ್ಮ ಬಲಗೈ ಬಂಟ ರಾಜಣ್ಣ ಅವರನ್ನು ವಜಾ ಮಾಡುವುದಕ್ಕೆ ಬಿಡುತ್ತಿರಲಿಲ್ಲ” ಎಂದು ಅಶೋಕ್ ಹೇಳಿದರು.

ಇದಕ್ಕೆ ಧ್ವನಿಗೂಡಿಸಿದ ಶಾಸಕ ಸತೀಶ್ ರೆಡ್ಡಿ, “ನಿಮ್ಮ ಮುಖದಲ್ಲಿ ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಟ್ಟ ಬೇಸರ ಎದ್ದು ಕಾಣುತ್ತಿದೆ” ಎಂದು ಹೇಳಿದಾಗ, ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಈ ಸ್ಪಷ್ಟನೆ ನೀಡಿದರು.

ಇದೇ ವೇಳೆ, ವಿಪಕ್ಷ ನಾಯಕ ಆರ್. ಅಶೋಕ್‌ರನ್ನು ಟೀಕಿಸಿದ ಸಿದ್ದರಾಮಯ್ಯ, “ಅಶೋಕ್, ನೀನು ವಿಪಕ್ಷ ನಾಯಕನಾಗಿರುವುದು ಸರಿಯಿಲ್ಲ ಎಂದು ನಿಮ್ಮ ಪಕ್ಷದವರೇ ಹೇಳುತ್ತಿದ್ದಾರೆ. ನೋಡು ನಾನು ಹೀಗೆ ಹೇಳಿದರೂ ನಿನ್ನ ಬೆಂಬಲಕ್ಕೆ ಮೂವರು ಮಾತ್ರ ಎದ್ದು ನಿಂತಿದ್ದಾರೆ” ಎಂದು ವ್ಯಂಗ್ಯವಾಡಿದರು.

ಆಗ ಅಶೋಕ್, “ನಾನು ಮೊದಲ ಬಾರಿಗೆ ವಿಪಕ್ಷ ನಾಯಕನಾಗಿದ್ದೇನೆ. ಇನ್ನೂ ಕಲಿಯುತ್ತಿದ್ದೇನೆ” ಎಂದು ತಿರುಗೇಟು ನೀಡಿದರು. ಇದಕ್ಕೆ ಸಿದ್ದರಾಮಯ್ಯ, “ಜೀವನದಲ್ಲಿ ಕಲಿಕೆ ನಿರಂತರ. ಸಾಯುವವರೆಗೂ ಕಲಿಯುತ್ತಲೇ ಇರಬೇಕು. ಯಾರೂ ಬೃಹಸ್ಪತಿಗಳಲ್ಲ” ಎಂದು ಹೇಳುವ ಮೂಲಕ ಚರ್ಚೆಯನ್ನು ಮುಕ್ತಾಯಗೊಳಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು