ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ

ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ಘೋಷಣೆ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಕರ್ನಾಟಕದ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ,  ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಘೋಷಿಸಿದ್ದಾರೆ. ಕರ್ನಾಟಕದ ಜನರ ಆಶೀರ್ವಾದಿಂದ ನಮ್ಮ ಸರ್ಕಾರ ಬಂದಿದೆ. ರಾಹುಲ್, ಖರ್ಗೆ, ಪ್ರಿಯಾಂಕಾ ಸೇರಿ ಅನೇಕರು ಪ್ರಚಾರ ಮಾಡಿದ್ದರು. ಕಾಂಗ್ರೆಸ್​ ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದ. ಸಾಹಿತಿಗಳು, ಚಿಂತಕರು, ಸಂಘಟನೆಗಳಿಗೂ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಜಯ ರಾಜ್ಯದ ಜನರಿಗೆ ಸಿಕ್ಕಿರುವ ಗೆಲುವು. ಜನರ ಆಶೀರ್ವಾದದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ರಾಜ್ಯದಲ್ಲಿ ಪ್ರಚಾರ ಆರಂಭವಾಗಿದ್ದು, ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ ಮೂಲಕ. ಇದರ ಜತೆಗೆ ರಾಹುಲ್ ಗಾಂಧಿ, ಖರ್ಗೆ, ಪ್ರಿಯಾಂಕಾ ಗಾಂಧಿ ಹಾಗೂ ಅನೇಕ ನಾಯಕರು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದು ಎಲ್ಲರಿಗೂ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಇದರ ಜತೆಗೆ ಸಾಹಿತಿಗಳು, ಚಿಂತಕರು, ಸಂಘಟನೆ ನಾಯಕರುಗಳು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದು, ಧನ್ಯವಾದ ಅರ್ಪಿಸುತ್ತೇನೆ. ರಾಜ್ಯದ ಯುವಕರು, ರೈತರು, ಕಾರ್ಮಿಕರು, ಮಹಿಳೆಯರಿಗೂ ಧನ್ಯವಾದ ತಿಳಿಸುತ್ತೇನೆ.

ಈ ಕಾರ್ಯಕ್ರಮಕ್ಕೆ ಬಂದು ನಮಗೆ ಶುಭ ಕೋರಿ ಆಶೀರ್ವಾದ ಮಾಡಲು ಬಂದಿರುವ ಎಲ್ಲಾ ಪ್ರಮುಖ ನಾಯಕರು ಹಾಗೂ ಗಣ್ಯರಿಗೆ ಧನ್ಯವಾದ ತಿಳಿಸುತ್ತೇನೆ. ನಾವು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ. ಜನ ಬದಲಾವಣೆ ಬಯಸಿದ್ದು, ನಾವು ಜನರಿಗೆ ಕೊಟ್ಟಿರುವ ಭರವಸೆ, ಗ್ಯಾರಂಟಿ ಯೋಜನೆಗಳನ್ನು ಇವತ್ತೇ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿ ಆದೇಶ ಹೊರಡಿಸಿ ಜಾರಿಗೆ ತರುತ್ತೇವೆ. ಇದು ಕನ್ನಡನಾಡಿನ ಜನತೆಗೆ ನೂತನ ಸರ್ಕಾರದ ಕೊಡುಗೆಯಾಗಿದೆ. ನಮ್ಮ ಪ್ರಮಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಕಾರ್ಯಕ್ರಮಗಳನ್ನು ಮುಂದಿನ ಐದು ವರ್ಷಗಳಲ್ಲಿ ಈಡೇರಿಸುತ್ತೇವೆ.  

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಪುದುಚೆರಿ ಮುಖ್ಯಮಂತ್ರಿ ಎನ್‌. ರಂಗಸ್ವಾಮಿ ಸೇರಿದಂತೆ ಹಲವು ಭಾಗವಹಿಸಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು