ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ನಿಮ್ಮದು ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ: ಬಿಜೆಪಿ, ಆರ್‌ ಅಶೋಕ್ ವಿರುದ್ಧ ಮುಖ್ಯಮಂತ್ರಿ ಕಿಡಿ

PPeepal Media

Peepal Media ರಾಜ್ಯ

• 2 ನಿಮಿಷದ ಓದು

ನಿಮ್ಮದು ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ: ಬಿಜೆಪಿ, ಆರ್‌ ಅಶೋಕ್ ವಿರುದ್ಧ ಮುಖ್ಯಮಂತ್ರಿ ಕಿಡಿ

ಸಾರಿಗೆ ನೌಕರರು ಮೊದಲ ಬಾರಿ ವೇತನ‌ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ‌ ಸುದೀರ್ಘ ಮುಷ್ಕರ ನಡೆದಾಗಲೂ ಸಾರಿಗೆ ಸಚಿವರಾಗಿ ಕೈಕಟ್ಟಿ ಕೂತು ತಮ್ಮ ಅಸಾಮರ್ಥ್ಯ ಪ್ರದರ್ಶಿಸಿದ್ದೂ ನೀವೇ ಅಲ್ಲವೇ? ಎಂದು ಸಿದ್ದರಾಮಯ್ಯ ಆರ್‌ ಅಶೋಕ ಅವರನ್ನು ಪ್ರಶ್ನಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, “ತಮ್ಮ ಪಕ್ಷದ ಅಧಿಕಾರದ ಅವಧಿಯಲ್ಲಿ ಸಾರಿಗೆ ನೌಕರರ ತಿಂಗಳ ವೇತನ ಹೇಗೆ ಪಾವತಿಯಾಗುತ್ತಿತ್ತು ಎಂದು ಮಾಹಿತಿ ಪಡೆದು ತಿಳಿಸುವಿರಾ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿ ಸಾರಿಗೆ ನೌಕರರಿಗೆ ಅರ್ಧ ಸಂಬಳ, ಈ ತಿಂಗಳ ಸಂಬಳ ಮುಂದಿನ ತಿಂಗಳು ನೀಡುತ್ತಿದ್ದಾಗ ಅಧಿಕಾರದಲ್ಲಿದ್ದದ್ದು ನಿಮ್ಮದೇ ಪಕ್ಷ ಅಲ್ಲವೇ?” ಎಂದು ಕೇಳಿದ್ದಾರೆ

ನಮ್ಮ ಸರ್ಕಾರದ ಅವಧಿಯಲ್ಲಿ 2012-2016 ರವರೆಗೆ ವೇತನ ಹೆಚ್ಚಳ ಮಾಡಿ ಅದನ್ನು 2012 ರಿಂದಲೇ ಪೂರ್ವಾನ್ವಯ ಆಗುವಂತೆ ಜಾರಿಗೊಳಿಸಿದ್ದೆವು. 2016-2020 ರವರೆಗೆ ವೇತನ ಹೆಚ್ಚಳ ಮಾಡಿದಾಗ 2016 ರಿಂದ ಜಾರಿ ಮಾಡಿದ್ದೆವು.
ಆದರೆ ತಮ್ಮ‌ ಪಕ್ಷದ ಆಡಳಿತದ ಅವಧಿಯಲ್ಲಿ ಸಾರಿಗೆ ನೌಕರರು 2020ರಿಂದಲೇ ವೇತನ ಹೆಚ್ಚಳ ಮಾಡಬೇಕೆಂದು ಬೇಡಿಕೆ ಸಲ್ಲಿಸಿದ್ದರೂ 01-03-2023ರಿಂದ ಜಾರಿಗೊಳಿಸಿ ( ಸರ್ಕಾರದ ಆದೇಶ ಸಂಖ್ಯೆ: ಟಿಡಿ 12 ಟಿಸಿಬಿ 2023, ಬೆಂಗಳೂರು ನೌಕರರಿಗೆ ಅನ್ಯಾಯ ಮಾಡಿದ್ದು ನೀವೇ ಅಲ್ಲವೇ?

ತಮ್ಮ‌ ಪಕ್ಷದ ಅವಧಿಯಲ್ಲಿ ನೇಮಕಾತಿ ಮತ್ತು ಹೊಸ ಬಸ್ ಸೇರ್ಪಡೆ ಸ್ಥಗಿತಗೊಂಡಿತ್ತು, ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್ ಹಣ ಪಾವತಿ, ಇತರೆ ಹೊಣೆಗಾರಿಕೆ ಹೀಗೆ ರೂ.5,900 ಕೋಟಿ ಬಾಕಿ ಇತ್ತು ಎಂಬುದರ‌ ಬಗ್ಗೆ ನಿಮಗೆ ಮಾಹಿತಿಯಿದೆಯೇ?

ನಿಮ್ಮ ಪಕ್ಷದ ಅಧಿಕಾರವಾಧಿಯಲ್ಲಿ ಸಂಪೂರ್ಣ ಸ್ಥಗಿತಗೊಂಡಿದ್ದ ನೇಮಕಾತಿಗೆ‌ ಚಾಲನೆ ನೀಡಿದವರು ನಾವು. 10,000 ಹೊಸ‌ ನೇಮಕಾತಿ ಮಾಡಿದ್ದೆವು. ಇದರಲ್ಲಿ 8 ವರ್ಷಗಳಿಂದ ಅನುಕಂಪದ ಆಧಾರದ ನೌಕರಿ ನೀಡದಿರುವ 1,000 ಮೃತರ ಅವಲಂಬಿತರು ಇದ್ದಾರೆ. 5,200 ಹೊಸ ಬಸ್ಸುಗಳ ಸೇರ್ಪಡೆ ಮಾಡಿದ್ದೇವೆ. ಕನಿಷ್ಠ ಈ ಮಾಹಿತಿಯಾದರೂ ನಿಮಗೆ ತಿಳಿದಿಯೇ?

ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್‌ ಮೊತ್ತ ಪಾವತಿ ಬಾಕಿ ಪಾವತಿಗಾಗಿ ರೂ.2,000 ಕೋಟಿ ಹಣವನ್ನು ಬ್ಯಾಂಕ್ ಗಳಿಂದ ಸಾಲ‌ ಪಡೆದವರು ನೀವು. ಅದರ ಅಸಲು ಮತ್ತು ಬಡ್ಡಿಯನ್ನು ಮರುಪಾವತಿ ಮಾಡುತ್ತಿರುವವರು ನಾವು. ಇದೇನಾ ನಿಮ್ಮ ಕಾಲದ ಸರ್ಕಾರದ ಸಾಧನೆ?

ನಾನು ಖುದ್ದಾಗಿ ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜೊತೆ ಮಾತುಕತೆ ನಡೆಸಿದ್ದೆ. ಇದಕ್ಕಿಂತ ಮೊದಲು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರೂ ಸಂಧಾನದ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಆರ್ .ಅಶೋಕರ್ ಅವರೇ, ನಿಮ್ಮ ಪಕ್ಷದ ಅಧಿಕಾರಾವಧಿಯಲ್ಲಿ ರಚಿಸಿದ್ದ ಏಕಸದಸ್ಯ ಸಮಿತಿ ರೂ.718 ಕೋಟಿ ‌ವೇತನ‌ಪರಿಷ್ಕರಣೆ ಬಾಕಿ ನೀಡಲು ಶಿಫಾರಸು ಮಾಡಿತ್ತು. ಆದರೆ ನಿಮ್ಮ ಸರ್ಕಾರ ವೇತನ ಪರಿಷ್ಕರಣೆ ಬಾಕಿಯನ್ನು ಪಾವತಿ ಮಾಡಿರಲಿಲ್ಲ. ಆ ವೇತನ ಪರಿಷ್ಕರಣೆ ಬಾಕಿಯನ್ನು ಪಾವತಿ ಮಾಡಲು ನಮ್ಮ ಸರ್ಕಾರ ಬದ್ದವಾಗಿದೆ. ನಮ್ಮ ಸರ್ಕಾರದ ಈ ನಿಲುವನ್ನು ಸಾರಿಗೆ ನೌಕರರಿಗೆ ತಿಳಿಸಿ ಮುಷ್ಕರ ಕೈಬಿಟ್ಟು ಮುಂದಿನ ದಿನಗಳಲ್ಲಿ ಮಾತುಕತೆ ಮುಂದುವರಿಸಬಹುದು ಎಂದು ಮನವಿ ಮಾಡಿದ್ದರೂ ನೌಕರರ ಸಂಘಟನೆಗಳು ಮುಷ್ಕರ ಹೂಡಿದ್ದಾರೆ.

ನಮ್ಮದು ಕಾರ್ಮಿಕರ ಪರ ಸರ್ಕಾರ, ಅವರ ಹಿತಾಸಕ್ತಿ ಕಾಪಾಡಲು ನಾವು ಬದ್ಧರಾಗಿದ್ದೇವೆ. ಭಾರತೀಯ ಜನತಾ ಪಕ್ಷ ರೈತರು ಮತ್ತು ಕಾರ್ಮಿಕರ ವಿರೋಧಿ ಎನ್ನುವುದಕ್ಕೆ ಇತಿಹಾಸವೇ ಸಾಕ್ಷಿ.

ನಿಮ್ಮ ಮರೆಗುಳಿತನಕ್ಕೆ ನನ್ನ ಅನುಕಂಪ ಇದೆ. ನನ್ನ ಮತ್ತು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡುವ ಮೊದಲು, ಸಾರಿಗೆ ಸಚಿವರಾಗಿ ನೀವು ಮತ್ತು ನಿಮ್ಮ ಸರ್ಕಾರ ರಾಜ್ಯ ರಸ್ತೆ ಸಾರಿಗೆ ನೌಕರರಿಗೆ ಮಾಡಿರುವ ಮೋಸ ಮತ್ತು ದ್ರೋಹದ ಇತಿಹಾಸವನ್ನು ನೆನಪು ಮಾಡಿಕೊಳ್ಳಿ ಹಿಂದಿನ ಸರ್ಕಾರದ ಕುರಿತು ನೆನಪು ಮಾಡಿಸಿದ್ದಾರೆ

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು