ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಡ್ಡಾ ಅವ್ರೇ ದಮ್ಮು ತಾಕತ್ತು ಇದ್ದರೆ, ಬಿಜೆಪಿ ನಾಯಕರ ಮೇಲಿನ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಿ : ಸಿದ್ದರಾಮಯ್ಯ ಸವಾಲು

P

Peepal Media Desk • ರಾಜ್ಯ

• 2 ನಿಮಿಷದ ಓದು

ನಡ್ಡಾ ಅವ್ರೇ ದಮ್ಮು ತಾಕತ್ತು ಇದ್ದರೆ, ಬಿಜೆಪಿ ನಾಯಕರ ಮೇಲಿನ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಿ : ಸಿದ್ದರಾಮಯ್ಯ ಸವಾಲು

ಬೆಂಗಳೂರು: ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ವಿರುದ್ದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ನೆಡೆಸಿದ ವಾಗ್ದಾಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ.

ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಸಾಲುಸಾಲು ದೌರ್ಜನ್ಯದ ಪ್ರಕರಣಗಳು ನಡೆಯುತ್ತಿದ್ದಾಗ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಕಣ್ಣು ಮುಚ್ಚಿ ಕೂತಿದ್ದರು. ಆದರೆ ಇತ್ತೀಚೆಗೆ ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ನಡೆದಿರುವ ದೌರ್ಜನ್ಯ ಮಾತ್ರ ಅವರ ಕಣ್ಣಿಗೆ ಕಂಡಿದ್ದು ಅದರಲ್ಲೂ ರಾಜಕೀಯ ಬೇಳೆ ಬೇಯಿಸಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜೆ.ಪಿ.ನಡ್ದಾ ಮೇಲೆ ಹರಿಹಾಯ್ದಿದ್ದಾರೆ.

ಬೆಳಗಾವಿಯಲ್ಲಿ ಮಹಿಳೆ ಮತ್ತು ಅವರ ಕುಟುಂಬದ ಸದಸ್ಯರ ಮೇಲೆ ನಡೆದಿರುವ ದೌರ್ಜನ್ಯ ಅತ್ಯಂತ ಖಂಡನೀಯ. ಮನುಷ್ಯರೆಲ್ಲರೂ ತಲೆತಗ್ಗಿಸುವಂತಹ ಆ ಘಟನೆಯನ್ನು ಬಳಸಿಕೊಂಡು ರಾಜಕೀಯ ಮಾಡಲು ಹೊರಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ದಾ ಅವರ ಕೀಳು ಮನಸ್ಥಿತಿ ಇನ್ನೂ ಖಂಡನೀಯ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಬೆಳಗಾವಿಯ ಘಟನೆ ಗೊತ್ತಾದ ತಕ್ಷಣವೇ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಂತ್ರಸ್ತೆಯ ಮನೆಗೆ ಭೇಟಿಕೊಟ್ಟು ಸಾಂತ್ವನ ನೀಡಿದ್ದು ಮಾತ್ರವಲ್ಲ ಪರಿಹಾರವನ್ನೂ ನೀಡಿದ್ದಾರೆ. ಪೊಲೀಸರು ಇಪ್ಪತ್ತನಾಲ್ಕು ಗಂಟೆಗೊಳಗೆ ದೌರ್ಜನ್ಯ ನಡೆಸಿದ ದುಷ್ಕರ್ಮಿಗಳ ಹೆಡೆಮುರಿ ಕಟ್ಟಿ ಜೈಲಿಗೆ ತಳ್ಳಿದ್ದಾರೆ. ನಾನೇ ಖುದ್ದಾಗಿ ಈ ಪ್ರಕರಣದ ತನಿಖೆಯ ಮೇಲೆ ನಿಗಾ ಇಟ್ಟಿದ್ದೇನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಇಂತಹ ಅಮಾನುಷ ಕೃತ್ಯಗಳು ನಡೆಯದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ರಾಜ್ಯ ಸರ್ಕಾರ ಕೈಗೊಂಡ ಕ್ರಮದಿಂದ ರಾಜ್ಯದ ಬಿಜೆಪಿ ನಾಯಕರಿಗೂ ಸಮಾಧಾನವಾಗಿದೆ ಹೀಗಿರುವಾಗ ಘಟನೆ ನಡೆದು ನಾಲ್ಕು ದಿನಗಳನಂತರ ಇದ್ದಕ್ಕಿದ್ದ ಹಾಗೆ ಜೆ.ಪಿ. ನಡ್ಡಾ ಅವರು ಎಚ್ಚೆತ್ತುಕೊಂಡು ಈ ಪ್ರಕರಣವನ್ನು ಕೆದಕಲು ಹೊರಟಿರುವುದಕ್ಕೆ ರಾಜಕೀಯ ದುರುದ್ದೇಶ ಕಾರಣವೇ ಹೊರತು ಮಹಿಳೆಯರ ಮೇಲಿನ ಕಾಳಜಿಯಿಂದ ಖಂಡಿತ ಅಲ್ಲ ಎಂದು ದೂರಿದ್ದಾರೆ.

ನಡ್ಡಾ ಅವರು ಮಹಿಳೆಯರ ಮೇಲೆ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಮಹಿಳೆಯರ ರಕ್ಷಣೆಯಲ್ಲಿ ವಿಫಲವಾಗಿದ್ದ ಹಿಂದಿನ ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧವೇ ಕ್ರಮ ಕೈಗೊಳ್ಳಬೇಕಾಗಿತ್ತು. ಕೇಂದ್ರ ಸರ್ಕಾರದ ಅಧೀನದಲ್ಲಿರುವ ನ್ಯಾಷನಲ್ ಕ್ರೈಮ್ ಬ್ಯುರೋ ವರದಿ ಪ್ರಕಾರ, ಕಳೆದ ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಕರ್ನಾಟಕದಲ್ಲಿ 17,813 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಅದರ ಹಿಂದಿನ ವರ್ಷ 2021ರಲ್ಲಿ 14,468 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿತ್ತು. ಆಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ. ಪಿ. ನಡ್ಡಾ ಏನು ಮಾಡುತ್ತಿದ್ದರು? ವನವಾಸದಲ್ಲಿದ್ದರಾ? ಅವರದ್ದೇ ಸರ್ಕಾರದ ಮೂಗಿನಡಿಯಲ್ಲಿ ವರ್ಷದಿಂದ ವರ್ಷಕ್ಕೆ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿದ್ದದ್ದು ಗಮನಕ್ಕೆ ಬಂದಿರಲಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಣಿಪುರದಿಂದ ಗುಜರಾತ್ ವರೆಗೆ, ಉತ್ತರಪ್ರದೇಶದಿಂದ ಮಧ್ಯಪ್ರದೇಶದ ವರೆಗೆ ಎಲ್ಲೆಲ್ಲಿ ಬಿಜೆಪಿ ಅಧಿಕಾರದಲ್ಲಿದೆಯೋ ಅಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ನ್ಯಾಷನಲ್ ಕ್ರೈಮ್ ಬ್ಯುರೋ ವರದಿಗಳೇ ಹೇಳುತ್ತಿವೆ. ಬಿಜೆಪಿ ಸ್ವಭಾವತ: ಮಹಿಳಾ ವಿರೋಧಿ ಎನ್ನುವುದನ್ನು ಈ ಪ್ರಕರಣಗಳು ಸಾಬೀತು ಪಡಿಸಿವೆ ಎಂದಿದ್ದಾರೆ.

ರಾಜ್ಯ ಬಿಜೆಪಿಯೊಳಗಿನ ಒಳಜಗಳ ತಾರಕಕ್ಕೇರಿದ್ದು ಪಕ್ಷದ ಮಾನಮರ್ಯಾದೆ ಬೀದಿಬೀದಿಗಳಲ್ಲಿ ಹರಾಜಾಗುತ್ತಿದೆ. ಪಕ್ಷದ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರ ವಿರುದ್ಧ ಪಕ್ಷದ ಹಿರಿಯ ನಾಯಕರೇ ಗಂಭೀರ ಸ್ವರೂಪದ ಆರೋಪಗಳನ್ನು ಮಾಡುತ್ತಿದ್ದಾರೆ. ಜೆ.ಪಿ.ನಡ್ಡಾ ಅವರಿಗೆ ದಮ್ಮು ತಾಖತ್ ಇದ್ದರೆ ಈ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ ಎಂದು ಸವಾಲು ಹಾಕಿದ್ದಾರೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version