ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಸತಿ ಸಚಿವ ಜಮೀರ್ ಅಹಮದ್ ಮುಂದೆ ಕಣ್ಣೇರು ಹಾಕಿದ ಗುಡಿಸಲು ವಾಸಿಗಳು: ಮನೆ ಕಟ್ಟಿಸಿ ಕೊಡುವಂತೆ ಮನವಿ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ವಸತಿ ಸಚಿವ ಜಮೀರ್ ಅಹಮದ್ ಮುಂದೆ ಕಣ್ಣೇರು ಹಾಕಿದ ಗುಡಿಸಲು ವಾಸಿಗಳು: ಮನೆ ಕಟ್ಟಿಸಿ ಕೊಡುವಂತೆ ಮನವಿ

ಬೆಂಗಳೂರು: ಸೂರು ಕಲ್ಪಿಸಲು ವಸತಿ ಸಚಿವರ ಮುಂದೆ ಕಣ್ಣೇರು ಹಾಕಿದ ಮಹಿಳೆಯರು, ಅಧಿಕಾರಿಗಳಿಗೆ ಕೈಮುಗಿದು ಗೋ ಗೆರೆದ ಹಿರಿಯ ನಾಗರಿಕರು, ಶೆಡ್ ಗಳಲ್ಲಿ ಇಲಿ -ಹೆಗ್ಗಣ ಕಾಟದ ನಡುವೆ ರಾತ್ರಿ ಇಡೀ ಜಾಗರಣೆ ಮಾಡುವಂತಾಗಿದೆ ಎಂದು ಅವಲತ್ತುಕೊಂಡ ಮಕ್ಕಳು.

ಇದು ಹೆಬ್ಬಾಳದ ಕುಂತಿ ನಗರದಲ್ಲಿ ಶುಕ್ರವಾರ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅಧಿಕಾರಿಗಳ ಜತೆ ಭೇಟಿ ನೀಡಿದಾಗ ಕಂಡು ಬಂದ ದೃಶ್ಯ.


ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ರೂಪಿಸಿರುವ ಪ್ರಧಾನ ಮಂತ್ರಿ ಅವಾಸ್ ವಸತಿ ಯೋಜನೆ ಎರಡು ವರ್ಷ ಆದರೂ ಪೂರ್ಣ ಗೊಂಡಿಲ್ಲ. ಗುಣಮಟ್ಟದ ಮನೆ ಕಟ್ಟಿಕೊಡುತ್ತಿದ್ದಾರೆ. ಕೂಲಿ ಮಾಡಿ ಜೀವನ ಮಾಡುತ್ತಿದ್ದೇವೆ. ಜೀವನ ನಡೆಸಲು ಊಟ ತಿಂಡಿಗೆ ಕಷ್ಟ ಆಗುತ್ತಿದೆ. ಫಲಾನುಭವಿ ವಂತಿಗೆ ಮೂರೂವರೆಯಿಂದ ನಾಲ್ಕು ಲಕ್ಷ ವರೆಗೆ ಪಾವತಿ ಮಾಡಲು ಆಗುತ್ತಿಲ್ಲ. ನಮಗೆ ದಯವಿಟ್ಟು ಮನೆ ಕಟ್ಟಿಕೊಡಿ ಎಂದು ಮನವಿ ಮಾಡಿಕೊಂಡರು.


ಸ್ಥಳೀಯ ನಿವಾಸಿಗಳಾದ ನೇತ್ರ, ಅಣ್ಣಿ ಯಮ್ಮ, ಮುತ್ಯಾಲಮ್ಮ, ವೆಂಕಟೇಶ್ ಅವರು ನಮ್ಮ ಬದುಕು ರಸ್ತೆಗೆ ಬಂದಿದೆ. ಮಕ್ಕಳಿಗೆ ವಿದ್ಯೆ ಕಲಿಸಲು ಆಗುತ್ತಿಲ್ಲ. ಆರೋಗ್ಯ ಸಮಸ್ಯೆ ಎಂದರೆ ಚಿಕಿತ್ಸೆ ಗೆ ಹಣ ಇಲ್ಲದಂತಾಗಿದೆ ಎಂದು ಕಣ್ಣೀರು ಹಾಕಿದರು.


ಪೇಪರ್ ಆಯುವುದು, ಮನೆ ಕೆಲಸ, ರಸ್ತೆ ಬದಿ ಚಪ್ಪಲಿ ಹೊಲೆದು ಜೀವನ ಸಾಗಿಸುತ್ತಿದ್ದೇವೆ ಎಂದು ಹೇಳಿದರು.
ಸಚಿವರು ಇದೇ ವೇಳೆ ಸರ್ವಜ್ಞ ಕ್ಷೇತ್ರದ ಚಟ್ಟಪ್ಪ ಗಾರ್ಡನ್, ಬಸವನ ಗುಡಿಯ ಚಾಮುಂಡಿ ನಗರ ಕೊಳೆಗೇರಿಗೂ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಬಿ. ವೆಂಕಟೇಶ್, ಪ್ರಧಾನ ಅಭಿಯಂತರ ಬಾಲರಾಜು ಉಪಸ್ಥಿತರಿದ್ದರು.

ಕುಂತಿ ನಗರ ಕೊಳೆಗೇರಿಯಲ್ಲಿ 402 ಮನೆಗಳನ್ನು 31 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು ಪ್ರತಿ ಮನೆಗೆ 7 ಲಕ್ಷ ರೂ. ವೆಚ್ಚ ಆಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಎಸ್ ಸಿ ಎಸ್ ಟಿ ವರ್ಗಕ್ಕೆ 3.50 ಲಕ್ಷ ರೂ., ಸಾಮಾನ್ಯ ವರ್ಗಕ್ಕೆ 2.70 ಲಕ್ಷ ರೂ. ಸಬ್ಸಿಡಿ ಸಿಗುತ್ತಿದ್ದು ಉಳಿದದ್ದು ಫಲಾನುಭವಿ ಕಟ್ಟಬೇಕು. ಆದರೆ ವಂತಿಗೆ ಪಾವತಿ ಆಗದೆ ಮನೆ ಅರ್ಧ ಕ್ಕೆ ನಿಂತಿವೆ.

ವಿಷಯಗಳು: #kannada #news #peepal #peepalmedia #politics
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು