ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎಸ್.ಎಂ ಕೃಷ್ಣ ಅವರೊಬ್ಬ ದೂರದೃಷ್ಟಿ ಇದ್ದ, ಮುತ್ಸದ್ದಿ ರಾಜಕಾರಣಿ:ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಎಸ್.ಎಂ ಕೃಷ್ಣ ಅವರೊಬ್ಬ ದೂರದೃಷ್ಟಿ ಇದ್ದ, ಮುತ್ಸದ್ದಿ ರಾಜಕಾರಣಿ:ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಡಿಸೆಂಬರ್ 10: ಎಸ್.ಎಂ ಕೃಷ್ಣ ಅವರೊಬ್ಬ ದೂರದೃಷ್ಟಿಯುಳ್ಳ ಮುತ್ಸದ್ದಿ ರಾಜಕಾರಣಿ. ಕರ್ನಾಟಕ ಮತ್ತು ದೇಶದ ರಾಜಕಾರಣದಲ್ಲಿ ದೀರ್ಘ ಕಾಲ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸದಾಶಿವನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ವಿದೇಶಾoಗ ಸಚಿವರಾಗಿದ್ದ ಎಸ್.ಎಂ ಕೃಷ್ಣ ರವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಬೆಂಗಳೂರನ್ನು ಸಿಂಗಾಪುರ ಮಾಡಬೇಕೆಂಬ ಕನಸು

ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿದ್ದ ಅವರು, ಸಮರ್ಥ ಆಡಳಿಗಾರರು. ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ರಾಜ್ಯಸಭೆಗಳಲ್ಲಿ ಸದಸ್ಯರಾಗಿದ್ದ ಕೆಲವೇ ರಾಜಕಾರಣಿಗಳಲ್ಲಿ ಇವರೂ ಒಬ್ಬರು. ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ವಿಧಾನಸಭೆಯ ಅಧ್ಯಕ್ಷರೂ ಆಗಿದ್ದರು. ಐದು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಬೆಂಗಳೂರನ್ನು ಸಿಂಗಾಪುರ ಮಾಡಬೇಕೆಂಬ ಕನಸು ಕಂಡಿದ್ದರು. ಅವರ ಕನಸು ನನಸಾಗಲಿಲ್ಲ. ನಾಲ್ಕೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಐ. ಟಿ ಬೆಳವಣಿಗೆಗೆ ಅಪಾರ ಕೊಡುಗೆಯನ್ನು ಕೊಟ್ಟಿದ್ದಾರೆ. ಬೆಂಗಳೂರು ನಗರ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿ ಕೊಂಡಿದ್ದರೆ ಅದಕ್ಕೆ ಎಸ್.ಎಂ.ಕೃಷ್ಣ ಅವರು ಕಾರಣ. ಬೆಂಗಳೂರು ನಗರ ಭಾರತದ ಸಿಲಿಕಾನ್ ವ್ಯಾಲಿ ಆಗಬೇಕಾದರೆ ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರವಾಗಿದೆ ಎಂದರು.

ಸವಾಲುಗಳನ್ನು ಜಾಣ್ಮೆಯಿಂದ ನಿರ್ವಹಿಸಿದ್ದರು


ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅನೇಕ ಸವಾಲು ಗಳನ್ನು ಎದುರಿಸಬೇಕಾಗಿತು. ಬರಗಾಲವಿತ್ತು, ಡಾ: ರಾಜ್ ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದ್ದ ಪ್ರಕರಣ ಹಾಗೂ ಕಾವೇರಿ ವಿವಾದಗಳಲ್ಲಿ ಜಾಣ್ಮೆಯಿಂದ ವ್ಯವಹರಿಸಿದ್ದರು. ಮಹಾರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು.ಆ ಸಂದರ್ಭದಲ್ಲಿ ಕಾಂಗ್ರೆಸ್ ಸೇರುವ ಬಗ್ಗೆ ತಿಳಿಸಲೆಂದು ಮಹಾರಾಷ್ಟ್ರಕ್ಕೆ ಹೋಗಿ ಭೇಟಿಯಾದಾಗ ನೀವು ಕಾಂಗ್ರೆಸ್ ಸೇರುವುದು ‘ಐತಿಹಾಸಿಕ ಅಗತ್ಯ’ ಎಂದಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಸೌಮ್ಯ ಸ್ವಭಾವದ ಸಜ್ಜನ ರಾಜಕಾರಣಿ


ಕೃಷ್ಣ ಅವರು ಸೌಮ್ಯ ಸ್ವಭಾವದ ಸಜ್ಜನ ರಾಜಕಾರಣಿ. ಎಂದಿಗೂ ಸೇಡಿನ, ದ್ವೇಷದ ರಾಜಕಾರಣ ಮಾಡಿರಲಿಲ್ಲ. ದೀರ್ಘ ಕಾಲ ಕರ್ನಾಟಕದ, ದೇಶದ ಜನರ ಸೇವೆಯನ್ನು ಮಾಡಿದ್ದಾರೆ. ಅವರ ಸಾವಿನಿಂದ ಒಬ್ಬ ಉತ್ತಮ ವಾಗ್ಮಿ, ಹಾಗೂ ಸಂಸದೀಯಪಟುವನ್ನು ಕಳೆದುಕೊಂಡಂತಾಗಿದೆ. ರಾಜಕೀಯವಾಗಿ ದೊಡ್ಡ ನಷ್ಟಗುಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಆಶಿಸುತ್ತೇನೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು