ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕರಾವಳಿ ಭಾಗದ ಸಾಮಾಜಿಕ ಕಾರ್ಯಕರ್ತರಿಂದ ಬಿ ಕೆ ಹರಿಪ್ರಸಾದ್ ಭೇಟಿ, ಕರಾವಳಿಯ ಮತೀಯ ರಾಜಾಕರಣದ ಕುರಿತು ಚರ್ಚೆ

P

Peepal Media Desk • ರಾಜ್ಯ

• 2 ನಿಮಿಷದ ಓದು

ಕರಾವಳಿ ಭಾಗದ ಸಾಮಾಜಿಕ ಕಾರ್ಯಕರ್ತರಿಂದ ಬಿ ಕೆ ಹರಿಪ್ರಸಾದ್ ಭೇಟಿ, ಕರಾವಳಿಯ ಮತೀಯ ರಾಜಾಕರಣದ ಕುರಿತು ಚರ್ಚೆ

ಕರಾವಳಿ ಜಿಲ್ಲೆಗಳಲ್ಲಿ ಭುಗಿಲೆದ್ದಿರುವ ಮತೀಯ ಹಿಂಸಾಚಾರ, ದ್ವೇಷ ಭಾಷಣ, ಪ್ರತೀಕಾರದ ಹತ್ಯೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಮಂಗಳೂರಿಗೆ ಆಗಮಿಸಿರುವ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಸದಸ್ಯ ಬಿ ಕೆ ಹರಿಪ್ರಸಾದ್ ಅವರನ್ನು ದ.ಕ‌. ಉಡುಪಿ ಜಿಲ್ಲೆಯ ಪ್ರಮುಖ ಚಿಂತಕರು, ಬರಹಗಾರರು, ರಂಗಕರ್ಮಿಗಳು, ಸಾಮಾಜಿಕ ಕಾರ್ಯಕರ್ತರು, ವಿವಿಧ ಚಳವಳಿಗಳ ಪ್ರಮುಖರು ಭೇಟಿಯಾದರು.

ಹೆಚ್ಚುತ್ತಿರುವ ಕೋಮು ಸಂಘರ್ಷ, ಆಳಗೊಳ್ಳುತ್ತಿರುವ ಮತೀಯ ಧ್ರುವೀಕರಣದ ಕುರಿತು ಕಳವಳ ವ್ಯಕ್ತ ಪಡಿಸಿದರು. ಶಾಂತಿ, ಸಾಮರಸ್ಯ ಮರಳಿ ನೆಲೆಗೊಳಿಸಲು ಸರಕಾರ ಕೈಗೊಳ್ಳಬೇಕಾದ ಕೆಲಸಗಳ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು, ಸಲಹೆಗಳನ್ನು ನೀಡಿದರು. ಸುಮಾರು ಎರಡು ತಾಸುಗಳ ಕಾಲ ಸಭೆ ನಡೆಯಿತು.

ಮೂರು ದಶಕಗಳಿಗಿಂತೂ ದೀರ್ಘ ಅವಧಿಯಲ್ಲಿ ವ್ಯವಸ್ಥಿತವಾಗಿ ಕೋಮುವಾದಿ ಸಿದ್ದಾಂತವನ್ನು ಕರಾವಳಿ ಜಿಲ್ಲೆಯಲ್ಲಿ ಹರಡಲಾಗಿದೆ. ಸರಿಯಾದ ಪ್ರತಿರೋಧ ಒಡ್ಡದಿರುವುದರಿಂದ ಇಂದು ಕೋಮುವಾದ ಯಾರ ಅಂಕೆಗೂ ಸಿಗದಷ್ಟು ರಾಕ್ಷಸೀ ರೂಪ ತಾಳಿದೆ. ಈ ಅವಧಿಯಲ್ಲಿ ಅಧಿಕಾರಕ್ಕೆ ಬಂದ  ಕಾಂಗ್ರೆಸ್ ಸರಕಾರ ಈ ಕುರಿತು ಸ್ಪಷ್ಟ ಧೋರಣೆ ಹೊಂದದಿರುವುದರಿಂದ ಬಿಜೆಪಿ ಸರಕಾರದ ಪತನದ ಹೊರತಾಗಿಯು ಸಂಘ ಪರಿವಾರದ ಶಕ್ತಿಗಳ ಚಟುವಟಿಕೆ ತಡೆ ಇಲ್ಲದೆ ಮುಂದುವರಿದಿದೆ. ದ್ವೇಷ ಭಾಷಣಗಳು ತಡೆ ರಹಿತವಾಗಿ ನಡೆಯುತ್ತಿದೆ. ಇದು ಭೀಕರ ಹತ್ಯೆಗಳಿಗೂ ಸಾಕ್ಷಿ ಆಗುತ್ತಿರುವುದು ಭೀತಿಗೆ ಕಾರಣವಾಗಿದೆ ಎಂದು ಚಿಂತಕರು ಮತ್ತು ಸಾಮಾಜಿಕ ಹೋರಾಟಗಾರರ ತಂಡ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರ ಗಮನ ಸೆಳೆಯಿತು.

ರಾಜ್ಯದ ಸಿದ್ದರಾಮಯ್ಯ ಸರಕಾರ ಕೋಮು ಶಕ್ತಿಗಳ ನಿಗ್ರಹಕ್ಕೆ ಈಗಲಾದರು ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚಿಂತಕರು ಅಭಿಪ್ರಾಯ ಪಟ್ಟರು. ಶಿಕ್ಷಣ ಸಂಸ್ಥೆಗಳು, ಸಾಂಸ್ಕೃತಿಕ ವಲಯಗಳಲ್ಲಿ ಸೌಹಾರ್ದತೆಯನ್ನು ಉದ್ದೀಪನಗೊಳಿಸುವ ಕಾರ್ಯಕ್ರಮಗಳು ನಡೆಯಬೇಕು, ದ.ಕ‌. ಉಡುಪಿ ಜಿಲ್ಲೆಗಳಲ್ಲಿ ದಂಧೆಗಳ ಲೋಕ, ಹಾಗೂ ಮತೀಯ ಗೂಂಡಾಗಳ ಲೋಕ ಒಂದಕ್ಕೊಂದು ಬೆಸೆದುಕೊಂಡಿದ್ದು, ಇವುಗಳನ್ನು ಮುಲಾಜಿಲ್ಲದೆ ಮಟ್ಟ ಹಾಕಬೇಕು. ದ್ವೇಷ ಭಾಷಣ, ಮಾಬ್ ಲಿಂಚಿಂಗ್, ಹತ್ಯಾ ಪ್ರಕರಣಗಳಲ್ಲಿ ಜಾಮೀನು ದೊರಕದಂತೆ ಕಾನೂನಾತ್ಮಕ ದೃಢ ಕ್ರಮಗಳನ್ನು ಕೈಗೊಳ್ಳಬೇಕು, ಜಿಲ್ಲಾಡಳಿತದ ಎಲ್ಲಾ ವಿಭಾಗಗಳು, ಪೊಲೀಸ್ ಇಲಾಖೆ, ವಿ ವಿ ಸೇರಿದಂತೆ ಆಯಕಟ್ಟಿನ ವಿಭಾಗಳಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತರಬೇಕು ಎಂದು ಹೋರಾಟಗಾರರು ಒತ್ತಾಯಿಸಿದ್ದಾರೆ.

ಮಾನವೀಯತೆ, ಸಂವಿಧಾನದ ಮೌಲ್ಯಗಳನ್ನು ಜನತೆಗೆ ತಲುಪಿಸುವ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸರಕಾರ ವ್ಯಾಪಕವಾಗಿ ನಡೆಸಬೇಕು, ಸಾಮಾಜಿಕ ಚಳವಳಿಗಳು ನಡೆಸುವ ಸೌಹಾರ್ದ ಕಾರ್ಯಕ್ರಮಗಳಿಗೆ ಬೆಂಬಲ ನೀಡಬೇಕು, ಸಾಮರಸ್ಯ, ಸಹಬಾಳ್ವೆಯ ಕರೆ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಭಿಪ್ರಾಯಿಸಿದರು.

ಇದರ ಜೊತೆಗೆ ಹಲವು ಮಹತ್ವದ  ಅಂಶಗಳ ಮೇಲೆ ಗಂಭೀರ ಚರ್ಚೆ ನಡೆಯಿತು. ಚಿಂತಕರ ನಿಯೋಗದ ಅಭಿಪ್ರಾಯಗಳನ್ನು ಆಲಿಸಿದ ಬಿ ಕೆ ಹರಿಪ್ರಸಾದ್ ಈ ಕುರಿತು ಜಾತ್ಯಾತೀತ ಶಕ್ತಿಗಳ ಜೊತೆಗಿರುವುದಾಗಿ ಭರವಸೆ ನೀಡಿದರು, ಮುಖ್ಯಮಂತ್ರಿಗಳ ಜೊತೆಗೆ ಕರಾವಳಿಯ ಚಿಂತಕರು, ಬರಹಗಾರರು, ಸಂಘಟನೆಗಳ ಪ್ರಮುಖರ ಸಭೆ ಏರ್ಪಡಿಸುವುದಾಗಿ ತಿಳಿಸಿದರು.

ಸಮಾನ ಮನಸ್ಕ ಸಂಘಟನೆ ಗಳ ಒಕ್ಕೂಟದ ಸಂಚಾಲಕರಾದ ಮುನೀರ್ ಕಾಟಿಪಳ್ಳ ಸ್ವಾಗತಿಸಿ ಸಭೆಯ ಉದ್ದೇಶವನ್ನು ವಿವರಿಸಿದರು. ಖ್ಯಾತ ವೈದ್ಯ ಡಾ.ಶ್ರೀನಿವಾಸ ಕಕ್ಕಿಲ್ಲಾಯ, ಖ್ಯಾತ ವಿಚಾರವಾದಿ ಪ್ರೊ.ನರೇಂದ್ರ ನಾಯಕ್, ಜನಪದ ವಿದ್ವಾಂಸ ಡಾ‌.ಗಣನಾಥ ಶೆಟ್ಟಿ ಎಕ್ಕಾರು, ನಿವೃತ್ತ ಪ್ರಾಂಶುಪಾಲರು, ಲೇಖಕರು ಆದ ಡಾ.ಉದಯ ಇರ್ವತ್ತೂರು, ನಿವೃತ್ತ ಪ್ರಾಧ್ಯಾಪಕ ಡಾ ಶಿವರಾಮ ಶೆಟ್ಟಿ, ನಿವೃತ್ತ ಪ್ರಾಂಶುಪಾಲ ಡಾ ಎನ್ ಇಸ್ಮಾಯಿಲ್, ಡಾ‌.ಅಮರಶ್ರೀ ಮೂಡಬಿದ್ರೆ, ವಾಸುದೇವ ಉಚ್ಚಿಲ್, ಸಹಬಾಳ್ವೆ ಉಡುಪಿಯ ಅಮೃತ್ ಶೆಣೈ, ರಥಬೀದಿ ಗೆಳೆಯರು, ಉಡುಪಿ ಇದರ ನಾಗೇಶ್ ಉದ್ಯಾವರ, ಕೀರ್ತಿ ಶೆಟ್ಟಿ ಅಂಬಲಪಾಡಿ,  ಸಿಪಿಎಂ ಮುಖಂಡರಾದ ಕೆ ಯಾದವ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಹಿರಿಯ ನ್ಯಾಯವಾದಿಗಳಾದ ದಿನೇಶ್ ಹೆಗ್ಡೆ ಉಳೆಪ್ಪಾಡಿ, ಯಶವಂತ ಮರೋಳಿ,ದಲಿತ ಚಳವಳಿಯ ನಾಯಕರಾದ ಎಂ ದೇವದಾಸ್,ಕ್ರಷ್ಣಾನಂದ ಬಜ್ಪೆ ,ಸದಾಶಿವ ಪಡುಬಿದ್ರೆ, ರಘು ಎಕ್ಕಾರು ,ಮಾಜಿ ಮೇಯರ್ ಕೆ ಅಶ್ರಫ್, ಸಾಮಾಜಿಕ ಹೋರಾಟಗಾರರಾದ ಮಂಜುಳಾ ನಾಯಕ್, ಬಿ ಎನ್ ದೇವಾಡಿಗ, ಟಿ ಆರ್ ಭಟ್, ಸ್ವರ್ಣಾ ಭಟ್, ದಿಲ್ ರಾಜ್ ಆಳ್ವ, ಸಮರ್ಥ್ ಭಟ್,ಕಾರ್ಮಿಕ ಮುಖಂಡರಾದ ಸುನಿಲ್ ಕುಮಾರ್ ಬಜಾಲ್, ಸೀತಾರಾಮ ಬೇರಿಂಜ,ಕರುಣಾಕರ್ ಮಾರಿಪಳ್ಳ, ಸಿಪಿಐ ನ.ವಿ ಕುಕ್ಯಾನ್, ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ರೋಯ್ ಕ್ಯಾಸ್ಟಲಿನೋ,ಪ್ಲೇವಿಕ್ರಾಸ್ತಾ ಅತ್ತಾವರ, ಡೋಲ್ಪಿ ಡಿಸೋಜ, ರಚನಾ ಸಂಸ್ಥೆಯ ಜೋನ್ ಮುಂತೇರೋ,ಕೆಥೋಲಿಕ್ ಸಭಾದ ಸಂತೋಷ್ ಡಿಸೋಜ,ಡಿವೈಎಫ್ಐ ನ ನ‌ ಬಿಕೆ ಇಮ್ತಿಯಾಜ್, ಮಹಿಳಾ ಸಂಘಟನೆ ಯ ಅಸುಂತ ಡಿಸೋಜ, ಪ್ರಮೀಳಾ ಶಕ್ತಿನಗರ,ಸಾಂಸ್ಕೃತಿಕ ರಂಗದ ಸಂತೋಷ್ ಶೆಟ್ಟಿ ಹಿರಿಯಡ್ಕ, ವಿದ್ದು ಉಚ್ಚಿಲ್, ಹರೀಶ್ ಪೇಜಾವರ, ಶ್ಯಾಮಸುಂದರ್ ರಾವ್, ಚಿತ್ತರಂಜನ್ ಶೆಟ್ಟಿ ಬೊಂಡಾಲ ಮುಂತಾದವರು ಹಾಜರಿದ್ದರು

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version