ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಗುರುವಾರ ಸಂಪುಟ ಸಭೆಯ ಕೆಲವು ಪ್ರಮುಖ ನಿರ್ಧಾರಗಳು

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ಗುರುವಾರ ಸಂಪುಟ ಸಭೆಯ ಕೆಲವು ಪ್ರಮುಖ ನಿರ್ಧಾರಗಳು

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಈ ಸಭೆಯಲ್ಲಿ ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವುದು, ಗೃಹ ಜ್ಯೋತಿ ಯೋಜನೆಯಲ್ಲಿ ಶೇ.10ರ ಬದಲಿಗೆ 10 ಯೂನಿಟ್ ಅರ್ಹತಾ ಯೂನಿಟ್ ಪರಿಗಣಿಸುವುದು, ಉಡುಪಿ ನ್ಯಾಯಾಲಯದಲ್ಲಿ ಅನೆಕ್ಸ್ ನ್ಯಾಯಾಲಯ ಕಟ್ಟಡ, ‘ಅಲ್ಲಮ ಪ್ರಭು ಉದ್ಯಾನವನ’ ನಾಮಕರಣ ಸೇರಿದಂತೆ ಅನೇಕ ಪ್ರಮುಖ ನಿರ್ಣಯಗಳಿಗೆ ಸಚಿವ ಸಂಪುಟವು ತನ್ನ ಒಪ್ಪಿಗೆ ನೀಡಿದೆ.

ಗೃಹ ಜ್ಯೋತಿ ಯೋಜನೆಯ ಅನುಷ್ಠಾನ ಕುರಿತು ದಿನಾಂಕ 5.6.2023 ರಂದು ಹೊರಡಿಸಿರುವ ಸರ್ಕಾರಿ ಆದೇಶವನ್ನು ಮಾರ್ಪಡಿಸಿ ಮಾಸಿಕ 48 ಯೂನಿಟ್ ಗಳಿಗಿಂತ ಕಡಿಮೆ ಬಳಸುವ LT 2 ಗ್ರಾಹಕರಿಗೆ ಹೆಚ್ವರಿ 10 % ಬದಲಿಗೆ ಹೆಚ್ಚುವರಿ 10 ಯೂನಿಟ್ ಅರ್ಹತಾ ಯೂನಿಟ್ ಗಳನ್ನು ಒದಗಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ಷೇರು ಬಂಡವಾಳವನ್ನು ರೂ.600 ಕೋಟಿ ರೂ.ಗಳಿಂದ 1200 ಕೋಟಿ ರೂ.ಗಳಿಗೆ ಹೆಚ್ಚಿಸಲು ಸಚಿವ ಸಂಪುಟ ಅನುಮೋದಿಸಿದೆ.

ಉಡುಪಿ ನ್ಯಾಯಾಲಯದ ಆವರಣದಲ್ಲಿ ವಕೀಲರ ಭವನ ಮತ್ತು ಎ.ಡಿ.ಆರ್ ಸಂಕೀರ್ಣ ವನ್ನೊಳಗೊಂಡ ಅನೆಕ್ಸ್ ನ್ಯಾಯಾಲಯದ ಕಟ್ಟಡ ನಿರ್ಮಾಣ ಕಾಮಗಾರಿ ( ಪ್ರಥಮ ಹಂತ) ರೂ.15.14 ಕೋಟಿಗಳ ಅಂದಾಜುಪಟ್ಟಿಗೆ ನ್ಯಾಯಾಲಯ ಕಟ್ಟಡಗಳ ನಿರ್ಮಾಣಕ್ಕೆ ಸಚಿವ ಸಂಪುಟದ ಒಪ್ಪಿಗೆ

ವಿಜಯನಗರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ನಂದಿಹಾಳ ಪಿ.ಹೆಚ್ ಗ್ರಾಮದ ಹೆಸರನ್ನು ಆರೂಢ ನಂದಿಹಾಳ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ

ಚಿಕ್ಕಮಗಳೂರು ಜಿಲ್ಲೆಯ ಐ.ಡಿ.ಪೀಠದ ಶ್ರೀ ಗುರುದತ್ತಾತ್ರೆಯ ಬಾಬಾ ಬುಡನ್ ಸ್ವಾಮಿ ದರ್ಗಾ ಅಧಿಸೂಚಿತ ಸಂಸ್ಥೆಗೆ ಶ್ರೀ ಸೈಯದ್ಗೌಸ್ ಮೊಹಿಯುದ್ದೀನ್ ಶಾಖಾದ್ರಿ ಇವರು ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಎಸ್ ಎಲ್ ಪಿ ಪ್ರಕರಣದಲ್ಲಿ ಸರ್ಕಾರದ ನಿಲುವನ್ನು ವ್ಯಕ್ತಪಡಿಸಲು, ಪ್ರಕರಣದ ಸಮಗ್ರ ಪರಿಶೀಲನೆ ನಡೆಸಿ ಶಿಫಾರಸ್ಸು ನೀಡಲು ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಗೃಹ ಸಚಿವರು, ಸದಸ್ಯರಾಗಿ ಕಾನೂನು ಸಚಿವರು, ಸಾರಿಗೆ ಸಚಿವರು , ಕಂದಾಯ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸುವ ನಿರ್ಣಯ ಕೈಗೊಳ್ಳಲಾಗಿದೆ.

ಶಿವಮೊಗ್ಗ ನಗರದ ಹಳೆಜೈಲು ಆವರಣದ ಸ.ನಂ.75ರಲ್ಲಿನ ಒಟ್ಟು 46.32 ಎಕರೆ -ಗುಂಟೆ ಸಾರ್ವನಿಕ ಉದ್ದೇಶಕ್ಕೆ ಕಾಯ್ದಿರಿಸಿದ ಪ್ರದೇಶವನ್ನು ‘ಅಲ್ಲಮ ಪ್ರಭು ಉದ್ಯಾನವನ’ ಎಂದು ನಾಮಕರಣ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕನ್ನು ‘ಚನ್ನಮ್ಮನ ಕಿತ್ತೂರು ತಾಲ್ಲೂಕು’ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿದೆ.

ಜಲಜೀವನ್ ಮಿಷನ್ ಯೋಜನೆಯಡಿ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ ಅಂತರಸಂತೆ, ಹಂಪಾಪುರ ಮತ್ತು ವಿವಿಧ ಜನವಸತಿ ಪ್ರದೇಶಗಳಿಗೆ ಹಾಗೂ ಟಿ.ನರಸೀಪುರ ತಾಲ್ಲೂಕಿನ ದೊಡ್ಡಬಾಗಿಲು, ಹಾವೇರಿ ತಾಲ್ಲೂಕಿನ ನೆಗಳೂರು, ಹಾನಗಲ್ ತಾಲ್ಲೂಕಿನ ಕುಡ್ಲ ಮತ್ತಿತರ ಜನವಸತಿ ಹಾಗೂ ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

ಪರಿಶಿಷ್ಟ ಜಾತಿಗಳ ವರ್ಗೀಕರಣ (ಒಳ ಮೀಸಲಾತಿ) ಗೆ ಸಂಬಂಧಿಸಿದಂತೆ ಭೋವಿ, ಬಂಜಾರ, ಕೊರಮ ಮತ್ತು ಕೊರಚ ಜಾತಿಗಳು ಹಾಗೂ ಅದರ ಪರ್ಯಾಯ ಜಾತಿಗಳು ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿದ್ದು, ಅದನ್ನು ಹಾಗೆಯೇ ಉಳಿಸಿಕೊಳ್ಳುವಂತೆ ಹಾಗೂ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಅವುಗಳನ್ನು ಮುಂದುವರೆಸುವಂತೆ ಭಾರತ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು