ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶೃಂಗೇರಿ ಮರುಎಣಿಕೆ ಸಮರ: ಚುನಾವಣಾ ಆಯೋಗದ ಮೆಟ್ಟಿಲೇರಿದ ರಾಜೇಗೌಡ!

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಶೃಂಗೇರಿ ಮರುಎಣಿಕೆ ಸಮರ: ಚುನಾವಣಾ ಆಯೋಗದ ಮೆಟ್ಟಿಲೇರಿದ ರಾಜೇಗೌಡ!

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ಟಿ.ಡಿ. ರಾಜೇಗೌಡ ಅವರು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ (CEO) ದೂರು ನೀಡಿದ್ದಾರೆ. ಬಿಜೆಪಿಯ ಡಿ.ಎನ್. ಜೀವರಾಜ್ ವಿರುದ್ಧದ ಈ ಕಾನೂನು ಹೋರಾಟದಲ್ಲಿ ಕ್ರಿಮಿನಲ್ ಪಿತೂರಿ, ದಾಖಲೆಗಳ ತಿದ್ದುಪಡಿ ಮತ್ತು ಮತಪತ್ರಗಳನ್ನು ಉದ್ದೇಶಪೂರ್ವಕವಾಗಿ ಹಾಳುಗೆಡವಿದ ಗಂಭೀರ ಆರೋಪಗಳನ್ನು ಅವರು ಮಾಡಿದ್ದಾರೆ.

ಹೈಕೋರ್ಟ್ ನಿರ್ದೇಶನದಂತೆ ನಡೆದ ಮರುಎಣಿಕೆಯಲ್ಲಿ ಜೀವರಾಜ್ ಅವರು ವಿಜಯ ಸಾಧಿಸಿದ ಬೆನ್ನಲ್ಲೇ ಈ ದೂರು ಸಲ್ಲಿಕೆಯಾಗಿದೆ. ಸತ್ಯಾಂಶವನ್ನು ಹೊರತರಲು 2023ರ ಮೇ 13 ರಂದು ನಡೆದ ಮೊದಲ ಮತ ಎಣಿಕೆಯ ಸಂಪೂರ್ಣ ಸಿಸಿಟಿವಿ ದೃಶ್ಯಾವಳಿಗಳನ್ನು ತಮ್ಮ ಸಮ್ಮುಖದಲ್ಲಿಯೇ ಪರಿಶೀಲಿಸಬೇಕು ಎಂದು ರಾಜೇಗೌಡ ಒತ್ತಾಯಿಸಿದ್ದಾರೆ.

ರಾಜೇಗೌಡರ ಪ್ರಕಾರ, 2023ರಲ್ಲಿ ಸಿಂಧುವಾಗಿದ್ದ ತಮ್ಮ ಬಂಡಲ್‌ನಲ್ಲಿದ್ದ ಸುಮಾರು 257 ಅಂಚೆ ಮತಗಳನ್ನು ಈಗಿನ ಮರುಎಣಿಕೆಯಲ್ಲಿ ‘ಡಬಲ್ ಎಂಟ್ರಿ’ ಎಂಬ ಕಾರಣ ನೀಡಿ ತಿರಸ್ಕರಿಸಲಾಗಿದೆ. “ಸರ್ಕಾರಿ ಅಧಿಕಾರಿಗಳು ಇಷ್ಟು ದೊಡ್ಡ ಪ್ರಮಾಣದ ಮತಗಳನ್ನು ತಪ್ಪಾಗಿ ತಿರಸ್ಕರಿಸಲು ಸಾಧ್ಯವೇ ಇಲ್ಲ. ಇದು ವ್ಯವಸ್ಥಿತ ಪಿತೂರಿ” ಎಂದು ಅವರು ಕಿಡಿಕಾರಿದ್ದಾರೆ.

ಬಿಜೆಪಿ ಅಭ್ಯರ್ಥಿ ಜೀವರಾಜ್ ಹಾಗೂ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಗಳಾದ ವೇದಮೂರ್ತಿ ಮತ್ತು ರಮೇಶ್ ಅವರು ಶಾಮೀಲಾಗಿ ಮತಪತ್ರಗಳನ್ನು ತಿದ್ದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೆ, 2023ರಲ್ಲಿ ಎಲ್ಲಾ ಅಭ್ಯರ್ಥಿಗಳು ಸಹಿ ಮಾಡಿದ್ದ ‘ಡಿಸಿಷನ್ ಬುಕ್’ಅನ್ನು ಈಗ ಅಕ್ರಮವಾಗಿ ಬದಲಾಯಿಸಲಾಗಿದೆ ಮತ್ತು ಸ್ಟ್ರಾಂಗ್ ರೂಮ್‌ನಲ್ಲಿದ್ದ ಪೆಟ್ಟಿಗೆಗಳ ಸೀಲ್ ಕೂಡ ಹಾಳಾಗಿತ್ತು ಎಂದು ಅವರು ದೂರಿದ್ದಾರೆ.

ದೂರಿನಲ್ಲಿ ರಾಜೇಗೌಡ ಅವರು ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 136ರ ಅಡಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಅಭ್ಯರ್ಥಿಯ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಮರುಎಣಿಕೆಯಿಂದ ಕ್ಷೇತ್ರ ಕೈತಪ್ಪಿದ ಹಿನ್ನೆಲೆಯಲ್ಲಿ ಈ ಪ್ರಕರಣ ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಚುನಾವಣಾ ಆಯೋಗದ ಮುಂದಿನ ನಡೆ ನಿರ್ಣಾಯಕವಾಗಿದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು