ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಎಸ್.ಎಸ್. ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಮೊರಾರ್ಜಿ ಶಾಲೆಯ ಅಂಕಿತಾಗೆ ಮುಖ್ಯಮಂತ್ರಿ ಅಭಿನಂದನೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಎಸ್.ಎಸ್. ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಮೊರಾರ್ಜಿ ಶಾಲೆಯ ಅಂಕಿತಾಗೆ ಮುಖ್ಯಮಂತ್ರಿ ಅಭಿನಂದನೆ

ಮೈಸೂರು, ಮೇ 10: ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್‌ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು ಈ ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ್ಯಾಂಕ್‌ ಪಡೆಯಬೇಕು; ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕೆಂದು ಆಶಿಸಿದರು.

ಅವರು ಇಂದು ಮೈಸೂರಿನಲ್ಲಿ ಬಸವ ಜಯಂತಿ ಅಂಗವಾಗಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅಂಕಿತಾಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪನೆಯ ಉದ್ದೇಶವೇ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕೂಡ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದಾಗಿದೆ. 1994 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು. ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಕಾರಣ ಮತ್ತು ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದವನಾದ್ದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.

ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನ ಪಡೆದಿದೆ. ಈ ಬಾರಿ ಐದರೊಳಗೆ ಬರಬೇಕು ಎಂದು ಸೂಚಿಸಿದ್ದೆ. ಏಳನೇ ಸ್ಥಾನ ಪಡೆದಿದೆ. ಮುಂದಿನ ಬಾರಿ ಈ ಗುರಿ ಸಾಧಿಸುವಂತೆ ತಿಳಿಸಲಾಗುವುದು.

ಚುನಾವಣಾ ನೀತಿ ಸಂಹಿತೆ ಇರುವುದರಿಂದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುವುದಿಲ್ಲ. ಈ ಕಾರಣಕ್ಕೆ ಬಸವಣ್ಣನವರ ಮೂರ್ತಿಗೆ ಹಾರ ಹಾಕಿ, ಅವರನ್ನು ಸ್ಮರಿಸುತ್ತಾ, ಅವರ ವಿಚಾರಗಳನ್ನು ಸ್ಮರಿಸಿ, ಆ ದಾರಿಯಲ್ಲಿ ನಡೆಯುವ ಸಂಕಲ್ಪ ಮಾಡಿದ್ದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು