ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

SSLC ಹಾಗೂ ದ್ವಿತೀಯ PUC ಪರೀಕ್ಷಾ ವೇಳಾಪಟ್ಟಿ ಪ್ರಕಟ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

SSLC ಹಾಗೂ ದ್ವಿತೀಯ PUC ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 6ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಮಾರ್ಚ್ 1 ರಿಂದ ಮಾರ್ಚ್ 22ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

2024 ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ವೇಳಾಪಟ್ಟಿಯಂತೆ ಮಾರ್ಚ್ 25ರಿಂದ ಏಪ್ರಿಲ್ 6ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಮಾರ್ಚ್ 1 ರಿಂದ ಮಾರ್ಚ್ 22 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಆಯೋಜಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ಮೊದಲ ಬಾರಿಗೆ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಗೆ ಒಂದೇ ದಿನ ಮೂರು ಪರೀಕ್ಷೆ ನಡೆಸುವ ಹೊಸ ಪದ್ದತಿ ಜಾರಿಯಾಗಿದೆ. ಹೊಸ ಪದ್ಧತಿಯಂತೆ ಮೊದಲ ವಾರ್ಷಿಕ ಪರೀಕ್ಷಾ ದಿನಾಂಕ ಪ್ರಕಟಗೊಂಡಿದೆ.

ಎಸ್‌ಎಸ್‌ಎಲ್‌ಸಿ ವೇಳಾಪಟ್ಟಿ ವಿವರ: ಮಾ. 25 ರಂದು ಪ್ರಥಮ ಭಾಷೆ ಕನ್ನಡ, 27 ರಂದು ಸಮಾಜ ವಿಜ್ಞಾನ, 30 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಏಪ್ರಿಲ್ 2 ರಂದು ಗಣಿತ, ಸಮಾಜಶಾಸ್ತ್ರ, 3 ರಂದು ಅರ್ಥಶಾಸ್ತ್ರ, 4 ರಂದು ತೃತೀಯ ಭಾಷೆ ಹಿಂದಿ, 6ರಂದು ದ್ವಿತೀಯ ಭಾಷೆ ಇಂಗ್ಲೀಷ್ ಪರೀಕ್ಷೆಗಳು ನಡೆಯಲಿವೆ.

ಕನ್ನಡ ವಿಷಯದಲ್ಲಿ 100 ಅಂಕಗಳಿಗೆ ಪರೀಕ್ಷೆ ಇದ್ದರೆ, ಇತರ ವಿಷಯಗಳಿಗೆ 80 ಅಂಕಗಳಿಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿದಿನ ಬೆಳಗ್ಗೆ 10.15 ರಿಂದ 1.30ರ ವರೆಗಿನ ಅವಧಿಯಲ್ಲಿ ಪರೀಕ್ಷೆಗಳನ್ನು ಆಯೋಜಿಸಲಾಗಿದೆ.

ದ್ವಿತೀಯ ಪಿಯುಸಿ ವೇಳಾಪಟ್ಟಿ ವಿವರ: ಮಾರ್ಚ್ 1 ಕನ್ನಡ, 4ರಂದು ಗಣಿತ, ಶಿಕ್ಷಣ ಶಾಸ್ತ್ರ, 5 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ,7ರಂದು ಇತಿಹಾಸ, ಭೌತಶಾಸ್ತ್ರ, 9ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, 11ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, 13ರಂದು ಇಂಗ್ಲೀಷ್, 15ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ, 16ರಂದು ಅರ್ಥಶಾಸ್ತ್ರ, 18ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ, 20ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, 22ರಂದು ಹಿಂದಿ ವಿಷಯಗಳ ಪರೀಕ್ಷೆ ನಡೆಯಲಿದೆ.

ಎಲ್ಲ ವಿಷಯಗಳಿಗೆ 80 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಪ್ರತಿದಿನ ಬೆಳಗ್ಗೆ 10.15 ರಿಂದ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನು ಪರೀಕ್ಷೆ ಪ್ರಾರಂಭದಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಮೊದಲ ಬಾರಿಗೆ ಪರೀಕ್ಷೆ ಬರೆಯುವವರ ಜೊತೆಗೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು