ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎಸ್‌ಎಸ್‌ಎಲ್‌ಸಿ ಪರೀಕ್ಷೆ| ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಲಾಗುವುದು: ಮಧು ಬಂಗಾರಪ್ಪ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಎಸ್‌ಎಸ್‌ಎಲ್‌ಸಿ ಪರೀಕ್ಷೆ| ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಲಾಗುವುದು: ಮಧು ಬಂಗಾರಪ್ಪ

ಶಿವಮೊಗ್ಗ: ಈ ವರ್ಷದ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳಲ್ಲಿ ತೃತೀಯ ಭಾಷಾ ವಿಷಯಕ್ಕೆ ಗ್ರೇಡ್‌ಗಳ ಬದಲು ಅಂಕಗಳನ್ನೇ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಮೊದಲು ತೃತೀಯ ಭಾಷೆಗೆ ಗ್ರೇಡ್ ನೀಡುವ ತೀರ್ಮಾನ ಕೈಗೊಳ್ಳಲಾಗಿತ್ತು, ಆದರೆ ನ್ಯಾಯಾಲಯದ ನಿರ್ದೇಶನದ ಮೇರೆಗೆ ಸರ್ಕಾರವು ಈ ನಿರ್ಧಾರವನ್ನು ಬದಲಿಸಿದೆ.

ಶಿವಮೊಗ್ಗದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ವಿದ್ಯಾರ್ಥಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ತೃತೀಯ ಭಾಷೆಗೆ ಗ್ರೇಡ್ ನೀಡಲು ಸರ್ಕಾರ ನಿರ್ಧರಿಸಿತ್ತು. ಆದರೆ ನ್ಯಾಯಾಲಯವು ಅಂಕಗಳನ್ನು ನೀಡುವ ಪರವಾಗಿ ತೀರ್ಪು ನೀಡಿದೆ, ಹಾಗಾಗಿ ನ್ಯಾಯಾಲಯದ ಆದೇಶಕ್ಕೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ಮುಂದಿನ ವರ್ಷ ತೃತೀಯ ಭಾಷೆಗೆ ಗ್ರೇಡ್ ನೀಡಲು ಅನುಮತಿ ಕೋರಿ ಸರ್ಕಾರ ಮತ್ತೆ ನ್ಯಾಯಾಲಯದ ಮೊರೆ ಹೋಗಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಣೆಯಲ್ಲಿ ಉಂಟಾಗಿರುವ ವಿಳಂಬದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಹೈಕೋರ್ಟ್ ನಿರ್ದೇಶನದ ಕಾರಣದಿಂದ ಫಲಿತಾಂಶ ತಡವಾಗಿದೆ, ಆದರೆ ಶೀಘ್ರವೇ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಭರವಸೆ ನೀಡಿದರು. ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶಗಳಂತೆ ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಉತ್ತಮವಾಗಿ ಬರಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಕಳೆದ ವರ್ಷ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರು. ಆದರೆ ಈ ಬಾರಿ ಕೇವಲ 1,777 ವಿದ್ಯಾರ್ಥಿಗಳು ಮಾತ್ರ ಎಲ್ಲಾ ವಿಷಯಗಳಲ್ಲಿ ವಿಫಲರಾಗಿದ್ದಾರೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮವಾಗಿ ಬರುವುದಕ್ಕೆ ಶಿಕ್ಷಕರು ಮತ್ತು ಪೋಷಕರ ಸಹಕಾರವೇ ಕಾರಣ ಎಂದು ಮಧು ಬಂಗಾರಪ್ಪ ಅವರು ಶ್ಲಾಘಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು