ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಾಮೂನ್ ನೀಡಿ ಪಕ್ಷಕ್ಕೆ ಸ್ವಾಗತಿಸಿದವರು ಇಂದು ಅಧಿಕಾರ ಕಳೆದುಕೊಂಡ ಬಳಿಕ ವಿಷ ನೀಡುತ್ತಿದ್ದಾರೆ: ಶಾಸಕ ಎಸ್ ಟಿ ಸೋಮಶೇಖರ್ ಕಿಡಿ

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ಬರ ಅಧ್ಯಯನ ತಂಡದಲ್ಲಿ ತ್ನನ ಹೆಸರಿಲ್ಲದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಚಿವ ಸೋಮಶೇಖರ್‌ ಅವರು ತನ್ನದೇ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ನನ್ನನ್ನು ಪಕ್ಷದಿಂದ ಹೊರ ಹೋಗುವಂತೆ ಹೇಳಲು ಈಶ್ವರಪ್ಪನವರಿಗೆ ಯಾವುದೇ ಅಧಿಕಾರವಿಲ್ಲವೆಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಮೈಸೂರು: ಕೆಲವು ತಿಂಗಳುಗಳಿಂದ ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದ ಬಿಜೆಪಿಯ ಮಾಜಿ ಸಚಿವ ಹಾಗೂ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಅವರು ರಾಜ್ಯದಲ್ಲಿ ಉಂಟಾಗಿರುವ ಬರದಿಂದ ಆಗಿರುವ ಬೆಳೆನಷ್ಟದ ಅಂದಾಜು ಮಾಡಲು ರಾಜ್ಯಾದ್ಯಂತ ನಡೆಸುತ್ತಿರುವ ಪ್ರವಾಸ ಕ್ಕೆ ಬುಧವಾರ ವಿರೋಧ ವ್ಯಕ್ತಪಡಿಸಿದರು. ಪಕ್ಷದ ಕೆಲ ಮುಖಂಡರು ತಮ್ಮನ್ನು ಬದಿಗೊತ್ತಿದ್ದಾರೆ ಎಂದು ಶಾಸಕರು ಆರೋಪಿಸಿದರು.

2019ರಲ್ಲಿ ಯಡಿಯೂರಪ್ಪ (BS Yedyurappa) ಮುಖ್ಯಮಂತ್ರಿಯಾಗಲು ಸಹಾಯ ಮಾಡಲು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಶಾಸಕರಲ್ಲಿ ಸೋಮಶೇಖರ್ ಒಬ್ಬರು. ಅಂದು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಒಟ್ಟು 17 ಶಾಸಕರು ರಾಜೀನಾಮೆ ನೀಡಿದ್ದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ತಮ್ಮದೇ ಪಕ್ಷದ ಸಹೋದ್ಯೋಗಿಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯಕ್ಕೆ ಹಣ ಕೊಡಿಸುವಂತೆ ಬಿಜೆಪಿ ನಾಯಕರಿಗೆ ಒತ್ತಾಯಿಸಿದ್ದಾರೆ.

ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡಿ ವರದಿ ಸಲ್ಲಿಸಿದೆ. ಅವರು (ಬಿಜೆಪಿ) ರಾಜ್ಯದಲ್ಲಿ ಪ್ರವಾಸ ಮಾಡುವ ಬದಲು, ಜನರಿಗೆ ಅನುಕೂಲವಾಗುವ ಕೇಂದ್ರದೊಂದಿಗೆ ಅನುಸರಿಸಬೇಕು. ಸುಮ್ಮನೆ ರಾಜ್ಯ ಪ್ರವಾಸ ಮಾಡುವುದರಿಂದ ಪ್ರಯೋಜನವಾಗುವುದಿಲ್ಲ ಎಂದು ಸೋಮಶೇಖರ್ ಹೇಳಿದರು.

ರಾಜ್ಯದಲ್ಲಿ ಬೆಳೆ ನಷ್ಟದ ಸಮೀಕ್ಷೆ ನಡೆಸಲು ಬಿಜೆಪಿ ತಂಡ ರಚಿಸಿತ್ತು. ಇದರಲ್ಲಿ ಎಸ್ ಟಿ ಸೋಮಶೇಖರ್ ಹೆಸರು ನಾಪತ್ತೆಯಾಗಿತ್ತು.

ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಬಿಜೆಪಿ ಕಡೆಗಣಿಸಿದೆ ಎಂದು ಸೋಮಶೇಖರ್ ಆರೋಪಿಸಿದರು.

”ಚುನಾವಣೆಯಲ್ಲಿ ನಾನು ಗೆದ್ದಿದ್ದು, ಸರಕಾರದೊಂದಿಗೆ ಸಮನ್ವಯ ಸಾಧಿಸಿ ಕಲ್ಯಾಣ ನಿಧಿ ಪಡೆಯುವುದು ನನ್ನ ಕರ್ತವ್ಯ. ಈ ಸಂಬಂಧ ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಿದ್ದೇನೆ. ಆದರೆ, ನಮ್ಮ ಪಕ್ಷದ ಮುಖಂಡರು ಅಸಮಾಧಾನಗೊಂಡಿದ್ದು, ಕಾಂಗ್ರೆಸ್‌ನಿಂದ ಬಂದಿರುವುದರಿಂದ ನಾನು ಅವರೊಂದಿಗೆ ಮಾತನಾಡಬಾರದು ಎಂದು ಹೇಳಿದರು. ಅವರು ನನ್ನನ್ನು ಪಕ್ಷದ ಕಾರ್ಯಕ್ರಮಗಳಿಗೆ ಆಹ್ವಾನಿಸುತ್ತಿಲ್ಲ ಮತ್ತು ಹಾಗೆಂದು ನಾನು ಸುಮ್ಮನೆ ಕುಳಿತಿಲ್ಲ ನಾನು ನನ್ನ ಕ್ಷೇತ್ರದಲ್ಲಿ ಸಮಯ ಕಳೆಯುವುದು ನನಗೆ ಸಂತೋಷ ನೀಡುವ ಕೆಲಸವಾಗಿದೆ ಎಂದು ಸೋಮಶೇಖರ್ ಹೇಳಿದರು.

ಸೋಮಶೇಖರ್ ಪಕ್ಷ ತೊರೆಯಬಹುದು ಎಂಬ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯ ಹಿರಿಯ ನಾಯಕರ ಹೇಳಿಕೆಗೆ ಯಾವುದೇ ಬೆಲೆ ಇಲ್ಲ ಎಂದರು.

ಈಶ್ವರಪ್ಪ ನಮ್ಮನ್ನು ಬಿಜೆಪಿಗೆ ಕರೆತಂದಿಲ್ಲ. ಬಿಜೆಪಿ ತೊರೆಯುವಂತೆ ಹೇಳಲು ಇವರು ಯಾರು? ಅವರು ರಾಜ್ಯಾಧ್ಯಕ್ಷರೇ? ಅಂತಹ ಮಾತುಗಳನ್ನು ಹೇಳುವ ಹಕ್ಕು ಅವರಿಗಿಲ್ಲ. ಕೆಲವು ನಾಯಕರು ನನ್ನನ್ನು ಪಕ್ಷದಿಂದ ಹೊರಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಶಾಸಕರು ಹೇಳಿದರು.

ಕಾಂಗ್ರೆಸ್ ಸೇರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸೋಮಶೇಖರ್, ಕಾಂಗ್ರೆಸ್ ಸೇರುವಂತೆ ಯಾರೂ ಆಹ್ವಾನ ನೀಡಿಲ್ಲ ಎಂದರು.

ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿ ಪಕ್ಷ ಬಿಡಬೇಡಿ ಎಂದು ಕೇಳಿಕೊಂಡಿದ್ದಾರೆ. ಆದರೆ, ಕೆಲವರು ಅಹಿತಕರ ವಾತಾವರಣ ಸೃಷ್ಟಿಸುತ್ತಿದ್ದಾರೆ. ಪಕ್ಷಕ್ಕೆ ಸ್ವಾಗತಿಸುವಾಗ ಜಾಮೂನ್ ನೀಡಿದವರು ಅಧಿಕಾರ ಕಳೆದುಕೊಂಡ ಬಳಿಕ ವಿಷ ನೀಡುತ್ತಿದ್ದಾರೆ. ಕಾಂಗ್ರೆಸ್‌ಗೆ ನನ್ನ ಅಗತ್ಯವಿಲ್ಲ ಮತ್ತು ಯಾರೂ ನನ್ನನ್ನು ಅವರ ಪಕ್ಷಕ್ಕೆ ಸೇರಲು ಆಹ್ವಾನಿಸಿಲ್ಲ ಎಂದು ಸೋಮಶೇಖರ್ ಹೇಳಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು