ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಣಬಲ, ಗುಂಪುಗಾರಿಕೆ ಹಾಗೂ ಹೈಕಮಾಂಡ್ ರಾಜಕಾರಣದಿಂದ ರಾಜ್ಯ ಸಚಿವ ಸಂಪುಟ – ವಿಜಯೇಂದ್ರ ಆಕ್ರೋಶ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಹಣಬಲ, ಗುಂಪುಗಾರಿಕೆ ಹಾಗೂ ಹೈಕಮಾಂಡ್ ರಾಜಕಾರಣದಿಂದ ರಾಜ್ಯ ಸಚಿವ ಸಂಪುಟ – ವಿಜಯೇಂದ್ರ ಆಕ್ರೋಶ

ಬೆಂಗಳೂರು : ರಾಜ್ಯ ಕಾಂಗ್ರೆಸ್ (Congress ) ಸರ್ಕಾರದ ಸಚಿವ ಸಂಪುಟ ವಿಸ್ತರಣೆಯು (Cabinet Expansion ) ರಾಜ್ಯದ ಅಭಿವೃದ್ಧಿ ಅಥವಾ ಜನಹಿತದ ಉದ್ದೇಶದಿಂದ ನಡೆದಿಲ್ಲ. ಇದು ಸಂಪೂರ್ಣವಾಗಿ ಅಧಿಕಾರ ಹಂಚಿಕೆ, ಹಣಬಲ, ಗುಂಪುಗಾರಿಕೆ ಹಾಗೂ ಹೈಕಮಾಂಡ್ ರಾಜಕಾರಣದ ಫಲವಾಗಿ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (Vijayendra ) ತೀವ್ರವಾಗಿ ಆರೋಪಿಸಿದ್ದಾರೆ.

“ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ” ಎಂಬ ತಮ್ಮ ಮಾತಿಗೆ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರ ಬಹಿರಂಗ ಹೇಳಿಕೆಗಳೇ ಸಾಕ್ಷಿಯಾಗಿವೆ ಎಂದು ವಿಜಯೇಂದ್ರ ಹೇಳಿದ್ದಾರೆ. ತನ್ವೀರ್ ಸೇಠ್, ಟಿ.ಬಿ. ಜಯಚಂದ್ರ, ಎಸ್.ಆರ್. ಶ್ರೀನಿವಾಸ್ ಸೇರಿದಂತೆ ಹಲವು ನಾಯಕರ ಅಸಮಾಧಾನವು ಕಾಂಗ್ರೆಸ್ ಒಳಗಿನ ವಾಸ್ತವ ಸ್ಥಿತಿಯನ್ನು ಸಾರ್ವಜನಿಕವಾಗಿ ಬಯಲಿಗಳೆದಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಮಹಿಳಾ ಸಬಲೀಕರಣದ ಬಗ್ಗೆ ದೊಡ್ಡ ಮಾತುಗಳನ್ನಾಡುವ ಕಾಂಗ್ರೆಸ್, ಸಂಪುಟದಲ್ಲಿ ಒಬ್ಬ ಮಹಿಳೆಗೂ ಸ್ಥಾನ ನೀಡದಿರುವುದು ಅವರ ನೈಜ ಮನೋಭಾವವನ್ನು ತೋರಿಸುತ್ತದೆ. ಕೊನೆಯ ಕ್ಷಣದಲ್ಲಿ ಗಾಯತ್ರಿ ಶಾಂತೇಗೌಡ ಅವರ ಹೆಸರು ಕೈಬಿಟ್ಟಿರುವುದು ಇದಕ್ಕೆ ನಿದರ್ಶನ ಎಂದು ವಿಮರ್ಶಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಚಾರ್ಜ್‌ಶೀಟ್ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿರುವುದು ಹೈಕಮಾಂಡ್ ಭಯವೇ ಕಾರಣವೇ ಎಂದು ಪ್ರಶ್ನಿಸಿದರು. ಅಲ್ಲದೆ, ಸ್ಪೀಕರ್ ಮತ್ತು ಸಭಾಪತಿ ಹುದ್ದೆಗಳ ಕುರಿತು ಎಐಸಿಸಿ ಲೆಟರ್‌ಹೆಡ್‌ನಲ್ಲಿ ನಿರ್ದೇಶನ ನೀಡಿರುವುದು ವಿಧಾನಮಂಡಲದ ಸ್ವಾಯತ್ತತೆಗೆ ಎಸಗಿದ ದ್ರೋಹ ಎಂದಿದ್ದಾರೆ.

ನೇಮಕಾತಿ ವಿಚಾರದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿರುವ ವಿದ್ಯಾರ್ಥಿಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಲಘುವಾಗಿ ಮಾತನಾಡಿರುವುದು ಸರ್ಕಾರದ ಅಹಂಕಾರವನ್ನು ಬಿಂಬಿಸುತ್ತದೆ. ಕಳೆದ ಮೂರು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಮಾಡದ ಕಾಂಗ್ರೆಸ್‌ಗೆ ಜನತೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಜಯೇಂದ್ರ ಎಚ್ಚರಿಸಿದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು