ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಸತಿ ಶಾಲೆಗಳಲ್ಲಿ 1,087 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ -‌ ಗ್ರೀನ್‌ ಸಿಗ್ನಲ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ವಸತಿ ಶಾಲೆಗಳಲ್ಲಿ 1,087 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ -‌ ಗ್ರೀನ್‌ ಸಿಗ್ನಲ್

ಬೆಂಗಳೂರು: ಕರ್ನಾಟಕದ ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಶಿಕ್ಷಕ ಆಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀನದಲ್ಲಿರುವ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 1,087 ಹುದ್ದೆಗಳ ಬೃಹತ್ ಸಂಖ್ಯೆಯ ಶಿಕ್ಷಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಹುದ್ದೆಗಳ ವಿವರ:

ಒಟ್ಟು 1087 ಹುದ್ದೆಗಳನ್ನು ಎರಡು ಪ್ರಮುಖ ಕೇಡರ್‌ಗಳಾಗಿ ವಿಂಗಡಿಸಲಾಗಿದೆ:

  • ಉಳಿದ ರಾಜ್ಯ ವೃಂದ (RPC): 767 ಹುದ್ದೆಗಳು
  • ಕಲ್ಯಾಣ ಕರ್ನಾಟಕ ವೃಂದ (KK): 320 ಹುದ್ದೆಗಳು

ವಿಷಯವಾರು ಖಾಲಿ ಹುದ್ದೆಗಳ ವಿವರ:

  • ಕನ್ನಡ ಭಾಷಾ ಶಿಕ್ಷಕರು: 165 (RPC: 103 | KK: 62)
  • ಇಂಗ್ಲಿಷ್ ಭಾಷಾ ಶಿಕ್ಷಕರು: 177 (RPC: 108 | KK: 69)
  • ಹಿಂದಿ ಭಾಷಾ ಶಿಕ್ಷಕರು: 86 (RPC: 55 | KK: 31)
  • ಗಣಿತ ಶಿಕ್ಷಕರು: 138 (RPC: 103 | KK: 35)
  • ವಿಜ್ಞಾನ ಶಿಕ್ಷಕರು: 138 (RPC: 106 | KK: 32)
  • ಸಮಾಜ ವಿಜ್ಞಾನ ಶಿಕ್ಷಕರು: 178 (RPC: 154 | KK: 24)
  • ಕಂಪ್ಯೂಟರ್ ವಿಜ್ಞಾನ ಶಿಕ್ಷಕರು: 57 (RPC ಮತ್ರ)
  • ದೈಹಿಕ ಶಿಕ್ಷಣ ಶಿಕ್ಷಕರು: 114 (RPC: 81 | KK: 33)
  • ಚಿತ್ರಕಲಾ ಶಿಕ್ಷಕರು (ಪದವಿ/ಡಿಪ್ಲೊಮಾ): 34 (KK ಮಾತ್ರ)
  • ಅರ್ಹತಾ ಮಾನದಂಡಗಳು
  • ಶೈಕ್ಷಣಿಕ ಅರ್ಹತೆ:ಅರ್ಜಿದಾರರು ಸಂಬಂಧಪಟ್ಟ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Graduation) ಮತ್ತು ಬಿ.ಎಡ್ (B.Ed.) ಪದವಿ ಹೊಂದಿರಬೇಕು. ಇದರೊಂದಿಗೆ KTET (ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ) ಅಥವಾ CTET (ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ) ಉತ್ತೀರ್ಣರಾಗಿರುವುದು ಕಡ್ಡಾಯವಾಗಿದೆ.
  • ವಯೋಮಿತಿ:ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 45 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 48 ವರ್ಷ ಹಾಗೂ SC/ST ಅಭ್ಯರ್ಥಿಗಳಿಗೆ 50 ವರ್ಷಗಳ ಸಡಿಲಿಕೆ
  • ಅರ್ಜಿ ಶುಲ್ಕದ ವಿವರಗಳು
  • ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ:
  • ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಗಳು: ₹750
  • SC / ST / ಪ್ರವರ್ಗ-1 / ಮಾಜಿ ಸೈನಿಕರು / ತೃತೀಯಲಿಂಗಿಗಳು: ₹500
  • ವಿಕಲಚೇತನ ಅಭ್ಯರ್ಥಿಗಳು (PWD): ₹250

ಮುಖ ದಿನಾಂಕಗಳು:

  • ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: ಜುಲೈ 15, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 13, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: 14 ಆಗಸ್ಟ್ 2026

ವೇತನ:

ಆಯ್ಕೆಯಾಗುವ ಶಿಕ್ಷಕರಿಗೆ ತಿಂಗಳಿಗೆ ₹54,175 ರಿಂದ ₹99,400 ವರೆಗಿನ ಆಕರ್ಷಕ ವೇತನ ಶ್ರೇಣಿ ಇರಲಿದೆ. ಇದರೊಂದಿಗೆ ಸರ್ಕಾರದ ನಿಯಮಾವಳಿಗಳನ್ವಯ ಇತರೆ ಭತ್ಯೆಗಳೂ ಲಭ್ಯವಿರಲಿವೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು