ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

‘ಜೀವಮಾನ ಸಾಧನೆ’ ಪ್ರಶಸ್ತಿಗೆ ಡಾ.ಹಂಸಲೇಖರವರನ್ನು ಆಯ್ಕೆ ಮಾಡಿದ ರಾಜ್ಯ ಸರ್ಕಾರ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ಮೀಡಿಯಾ, ರಾಜ್ಯ

• 1 ನಿಮಿಷದ ಓದು

‘ಜೀವಮಾನ ಸಾಧನೆ’ ಪ್ರಶಸ್ತಿಗೆ ಡಾ.ಹಂಸಲೇಖರವರನ್ನು ಆಯ್ಕೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ಕನ್ನಡ ಚಿತ್ರರಂಗದ (Sandalwood) ‘ನಾದಬ್ರಹ್ಮ’ ಎಂದೇ ಜನಪ್ರಿಯರಾಗಿರುವ ಹಿರಿಯ ಗೀತ ರಚನೆಕಾರ ಹಾಗೂ ಸಂಗೀತ ನಿರ್ದೇಶಕ ಡಾ. ಹಂಸಲೇಖ (Hamsalekha) ಅವರನ್ನು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ ಪ್ರಶಸ್ತಿ’ಗೆ (Lifetime Achievement Award) ರಾಜ್ಯ ಸರ್ಕಾರವು ಅಧಿಕೃತವಾಗಿ ಆಯ್ಕೆ ಮಾಡಿದೆ.

ಕರ್ನಾಟಕ ಸರ್ಕಾರವು ಜ.13 ರಂದು ಹೊರಡಿಸಿದ್ದ ಆದೇಶದಂತೆ ರಚಿಸಲಾಗಿದ್ದ ಆಯ್ಕೆ ಸಮಿತಿಯು, ಫೆಬ್ರವರಿ 4 ರಂದು ಸಭೆ ಸೇರಿ ಕನ್ನಡ ಚಲನಚಿತ್ರ ರಂಗಕ್ಕೆ ಡಾ. ಹಂಸಲೇಖ ಅವರು ನೀಡಿರುವ ಅಪ್ರತಿಮ ಕೊಡುಗೆಯನ್ನು ಪರಿಗಣಿಸಿ, ಸಮಿತಿಯು ಅವಿರೋಧವಾಗಿ ಶಿಫಾರಸು ಮಾಡಿದ ಮೂವರು ಗಣ್ಯರ ಪಟ್ಟಿಯಲ್ಲಿ ಡಾ. ಹಂಸಲೇಖ ಅವರ ಹೆಸರನ್ನು ಸರ್ಕಾರವು ಅಂತಿಮಗೊಳಿಸಿದೆ.

ಹಂಸಲೇಖ ಅವರು​ ಬಹುಮುಖ ಪ್ರತಿಭೆ. ಕೇವಲ ಸಂಗೀತ ನಿರ್ದೇಶನ ಮಾತ್ರವಲ್ಲದೆ, ಗೀತ ರಚನೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನದಲ್ಲೂ ಅವರು ತಮ್ಮ ಮುದ್ರೆ ಒತ್ತಿದ್ದಾರೆ.

​ಕ್ರಾಂತಿಕಾರಿ ಬದಲಾವಣೆ:

80 ಮತ್ತು 90ರ ದಶಕದಲ್ಲಿ ಕನ್ನಡ ಚಿತ್ರರಂಗಕ್ಕೆ ಹೊಸ ಆಯಾಮ ನೀಡಿದ ಅವರು, ಜಾನಪದ ಸೊಗಡು ಮತ್ತು ಪಾಶ್ಚಾತ್ಯ ಸಂಗೀತದ ಸಮ್ಮಿಲನದ ಮೂಲಕ ಕ್ರಾಂತಿ ಮಾಡಿದವರು.

​ಪ್ರಶಸ್ತಿಗಳು:
ಈ ಹಿಂದೆ ರಾಷ್ಟ್ರ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳಿಗೆ ಪಾತ್ರರಾಗಿದ್ದಾರೆ. ಈಗ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆಯ ಈ ಅತ್ಯುನ್ನತ ಗೌರವ ಅವರ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ನೀಡಿದಂತಾಗಿದೆ.

​ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನಾಳೆ (ಫೆಬ್ರವರಿ 6) ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಷಯಗಳು: #karnataka #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು