ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉದ್ಯೋಗ ಸೃಷ್ಠಿಯ ಭರವಸೆ ಮೂಡಿಸುವಲ್ಲಿ ವಿಫಲವಾದ ರಾಜ್ಯ ಬಜೆಟ್: ಮುನೀರ್‌ ಕಾಟಿಪಳ್ಳ

P

Peepal Media Desk • ರಾಜ್ಯ

• 2 ನಿಮಿಷದ ಓದು

ಉದ್ಯೋಗ ಸೃಷ್ಠಿಯ ಭರವಸೆ ಮೂಡಿಸುವಲ್ಲಿ ವಿಫಲವಾದ ರಾಜ್ಯ ಬಜೆಟ್: ಮುನೀರ್‌ ಕಾಟಿಪಳ್ಳ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿವೇಶನದಲ್ಲಿ ಮಂಡಿಸಿದ ಬಜೆಟ್, ರಾಜ್ಯದಲ್ಲಿ ಉದ್ಯೋಗದ ಅವಕಾಶಕ್ಕಾಗಿ ಕಾತರರಾಗಿರುವ ಯುವಜನರಿಗೆ ಉದ್ಯೋಗ ಸೃಷ್ಠಿಸುವ ಹಾಗೂ ಅಭದ್ರತೆಯಲ್ಲಿ ದುಡಿಯುತ್ತಿರುವವರಿಗೆ ಭದ್ರತೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ಡಿವೈಎಫ್ಐ ರಾಜ್ಯ ಸಮಿತಿಯು ಅಭಿಪ್ರಾಯ ಪಟ್ಟಿದೆ.


ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಮೈಸೂರು ವಿಭಾಗಗಳಲ್ಲಿ ಜವಳಿ ಪಾರ್ಕ್ ಆರಂಭಿಸಲು ರಾಜ್ಯ ಸರಕಾರ ಮುಂದಾಗಿರುವುದು ಸ್ವಾಗತಾರ್ಹವಾದರೂ ಖಾಸಗಿ ಸಹಭಾಗಿತ್ವದಲ್ಲಿ ಆರಂಭ ಮಾಡುತ್ತಿರುವುದರಿಂದ ಭದ್ರತೆಯ ಕೆಲಸ ಯುವಜನರಿಗೆ ಮತ್ತೂ ಮರಿಚೀಕೆಯಾಗುತ್ತದೆ. ಆದ್ದರಿಂದ ಸರಕಾರವೇ ಸ್ವತಃ ಈ ಉದ್ದಿಮೆಗಳನ್ನು ಸಾರ್ವಜನಿಕವಾಗಿ ಆರಂಭಿಸಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮತ್ತು ಕಾರ್ಯದರ್ಶಿ ಬಸವರಾಜ ಪೂಜಾರ್ ಆಗ್ರಹಿಸಿದ್ದಾರೆ.


ಖಾಲಿ ಇರುವ ಸರಕಾರಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿ ಶಿಕ್ಷಕರು, ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಆರಂಭಿಸುವುದಾಗಿ ಬಜೆಟ್ ನಲ್ಲಿ ಹೇಳಿರುವುದು ಸ್ವಾಗತಾರ್ಹ. ಇದು ಕೂಡಲೇ ಕಾರ್ಯರೂಪಕ್ಕೆ ಬರಬೇಕಿದೆ. ಜೊತೆಗೆ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.70 ಲಕ್ಷ ಹುದ್ದೆಗಳ ಭರ್ತಿಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಅಲ್ಲದೇ ನೇಮಕಾತಿಯಲ್ಲಿ ಭ್ರಷ್ಠಾಚಾರ ಮಿತಿ ಮೀರಿದ್ದು ಇದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸ್ಕಿಲ್ ಹಾಗೂ ಕೌಶಲ್ಯ ಹೆಚ್ಚಿಸುವ ತರಭೇತಿ ನೀಡುವ ಕುರಿತು ಬಜೆಟ್ ನಲ್ಲಿ ಪ್ರಸ್ತಾಪಿಸಿದೆ. ಈ ತರಭೇತಿ ಪಡೆದ ನಂತರ ಅವರಿಗೆ ಉದ್ಯೋಗ ಖಾತ್ರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.


ಯುವ ನಿಧಿ ಗ್ಯಾರಂಟಿ ಕುರಿತು ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದು, ಈ ಯೋಜನೆ ಸ್ವಾಗತಾರ್ಹವಾದುದು. ಆದರೆ ಕೇವಲ ಹಿಂದಿನ ವರ್ಷ ಪಾಸಾದ ಪದವಿಧರರಿಗೆ ಯೋಜನೆಯನ್ನು ಅನ್ವಯಿಸಿರುವುದು ಹಾಗೂ ಅತ್ಯಂತ ಕಡಿಮೆ ಹಣವನ್ನು ನೀಡುತ್ತಿರುವುದು ಅವೈಜ್ಞಾನಿಕವಾಗಿದೆ. ಆದ್ದರಿಂದ ಈ ಯೋಜನೆಗೆ ಐಟಿಐ ಸೇರಿದಂತೆ ಇತರೆ ವಿಭಾಗಗಳನ್ನು ಸೇರಿಸಿ ಕಳೆದ ಐದು, ಹತ್ತು ವರ್ಷಗಳಿಂದ ಪದವಿ ಪಡೆದು ಕೆಲಸ ಸಿಗದಿರುವ ನಿರುದ್ಯೋಗಿ ಯುವಜನರಿಗೆ ಅನ್ವಯಿಸಬೇಕು ಹಾಗೂ ಕನಿಷ್ಠ ರೂ. 12,000 ನಿರುದ್ಯೋಗ ಭತ್ಯೆ ಒದಗಿಸಬೇಕು ಎಂದಿದ್ದಾರೆ.


ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳಡಿ ಇರುವ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮಾಸಿಕ ಬೋಜನ ವೆಚ್ಚವನ್ನು ರೂ. 100 ಹೆಚ್ಚಳ ಮಾಡಿರುವುದು ಸ್ವಾಗತಾರ್ಹ. ಆದರೆ ಈ ಬೆಲೆ ಏರಿಕೆಯ ದಿನಗಳಲ್ಲಿ ಸಾಲದಾಗಿದೆ. ಪ್ರಸ್ತುತ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ರೂ.1600, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರೂ.1700 ಹಣವನ್ನು ಮಾಸಿಕ ತಲಾ ಭೋಜನ ವೆಚ್ಚವಾಗಿ ನೀಡಲಾಗುತ್ತಿದೆ. ಇದಕ್ಕೆ ಕೇವಲ ನೂರು ರೂಪಾಯಿ ಹೆಚ್ಚಳದಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಪೌಷ್ಠಿಕ ಆಹಾರ ಒದಗಿಸಲು ಅಸಾಧ್ಯ. ಹಾಗಾಗಿ ಕನಿಷ್ಠ ವಿದ್ಯಾರ್ಥಿಗಳ ಅಹಾರ ಭತ್ಯೆಯನ್ನು ಮಾಸಿಕ ರೂ.3500 ನಿಗದಿ ಮಾಡಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯುವುದು, ಶಿಕ್ಷಣ ಸಂಸ್ಥೆಗಳಲ್ಲಿ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾಕೆಂದ್ರಗಳನ್ನಾಗಿ ರೂಪಿಸಲು ನಾವು ಮನುಜರು ಯೋಜನೆ ತರುತ್ತಿರುವುದು. ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪ ಸಂಖ್ಯಾತರಿಗೆ ಮಾಶಾಸನ ಹೆಚ್ಚಳ ಮಾಡಿರುವುದು. ಸಂಚಾರಿ ಕುರಿಗಾಹಿ ಮಕ್ಕಳಿಗೆ ಸರಕಾರಿ ವಸತಿ ಶಾಲೆಗಳಲ್ಲಿ ಆದ್ಯತೆ ನೀಡಿ, ವಿದ್ಯಾರ್ಥಿ ವೇತನ ನೀಡುವುದು. ಅಲೆ ಮಾರಿ, ಅರೆ ಅಲೆಮಾರಿ ಸಮುದಾಯ ಮಕ್ಕಳಿಗೆ ವಸತಿ ಶಾಲೆಯಲ್ಲಿ ಆದ್ಯತೆ ನೀಡುವುದು ಹಾಗೂ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಸ್ಥಿತಿಗತಿಗಳ ಅಧ್ಯಯನ, ಅಭಿವೃದ್ಧಿಗಾಗಿ ಕರ್ನಾಟಕ ಅಲೆಮಾರಿ ಆಯೋಗ ರಚನೆ ಮಾಡುತ್ತಿರುವುದು ಸಕಾರಾತ್ಮಕ ಅಂಶಗಳಾಗಿದ್ದು ಇವುಗಳನ್ನು ಡಿವೈಎಫ್ಐ ಸ್ವಾಗತಿಸುತ್ತದೆ.

ಆದ್ದರಿಂದ ಸರಕಾರ ಈ ಕೊರತೆಗಳನ್ನು ಸರಪಡಿಸಿ ರಾಜ್ಯದ ಜನತೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ರಾಜ್ಯ ಸರಕಾರವನ್ನು ಒತ್ತಾಯಿಸುತ್ತದೆಯಲ್ಲದೇ ರಾಜ್ಯದ ಯುವಜನತೆ ಈ ಕುರಿತು ಧ್ವನಿ ಎತ್ತಬೇಕೆಂದು ಕರೆ ನೀಡಿದ್ದಾರೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version