ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮವಹಿ – ಸಂಸದ ಶ್ರೇಯಸ್‌ ಪಟೇಲ್‌

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮವಹಿ – ಸಂಸದ ಶ್ರೇಯಸ್‌ ಪಟೇಲ್‌

ಹಾಸನ : ರೈತರನ್ನು ರೈತ ಸಂಪರ್ಕ ಕೇಂದ್ರಗಳಿಗೆ ಅಲೆಸದೆ ಕೃಷಿ ಚಟುವಟಿಕೆ ಗಳಿಗೆ ಅಗತ್ಯವಿರುವ ಉತ್ತಮ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕ ವಿತರಣೆಗೆ ಕ್ರಮವಹಿಸುವಂತೆ ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿಂದು ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರಕ್ಕೆ ರಸಗೊಬ್ಬರಗಳನ್ನು ಮಾರಾಟ ಮಾಡುವುದು ಹಾಗೂ ಕಳಪೆ ಗುಣಮಟ್ಟದ ಗೊಬ್ಬರ ಮಾರಾಟ ಮಾಡುವುದರ ಬಗ್ಗೆ ಗಮನಹರಿಸಿ ಪ್ರತಿ ತಾಲೂಕು ವ್ಯಾಪ್ತಿಯಲ್ಲಿ ಅಂಗಡಿಗಳಿಗೆ ಭೇಟಿ ನೀಡುವಂತೆ ಸೂಚಿಸಿದರು.


ಗುಣಮಟ್ಟದ ಕೃಷಿ ಪರಿಕರಗಳನ್ನು ನೀಡಲು ಅಧಿಕಾರಿಗಳು ಎಚ್ಚರವಹಿಸುವಂತೆ ನಿರ್ದೇಶನ ನೀಡಿದರಲ್ಲದೆ, ಕಾಲಕಾಲಕ್ಕೆ ಸಬ್ಸಿಡಿ ದೊರೆಯುತ್ತದೆ ಏನೇ ಸಮಸ್ಯೆ ಇದ್ದರು ತಮ್ಮ ಗಮನಕ್ಕೆ ತರುವಂತೆ ತಿಳಿಸಿದರು.
ಮುಂಗಾರಿಗೆ ಮುನ್ನ ತೆಂಗಿನ ಸಸಿಗಳನ್ನು ರೈತರಿಗೆ ನೀಡುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು ಗಿಡಗಳು ನಶಿಸಿ ಹೊಗದಂತೆ ಕಾಪಾಡಿಕೊಳ್ಳಲು ಅಗತ್ಯವಾದ ಪೋಷಕಾಂಶ ಮತ್ತು ಜೈವಿಕ ತಂತ್ರಜ್ಞಾನ ಬಳಕೆಗೆ ರೈತರಿಗೆ ಅರಿವು ಮೂಡಿಸಲು ಸೂಚಿಸಿದರು.ಬೇಡಿಕೆಗೆ ಅನುಗುಣವಾಗಿ ಸಕಲೇಶಪುರ, ಬೇಲೂರು, ಆಲೂರು ತಾಲ್ಲೂಕಿನ ರೈತರಿಗೆ ಮೆಣಸಿನ ಸಸಿಗಳನ್ನು ನೀಡುವಂತೆ ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳನ್ನು ಹೊರಗಡೆಗೆ ಚೀಟಿ ಬರೆದು ಕೊಡುತ್ತಿದ್ದಾರೆ ಎಂದು ದೂರುಗಳು ಕೇಳಿ ಬಂದಿದ್ದು, ಈ ರೀತಿ ಮಾಡದೆ ರೋಗಿಗಳಿಗೆ ಆಸ್ಪತ್ರೆಯಲ್ಲಿರುವ ಔಷಧಿಗಳ ವಿತರಣೆಗೆ ಕ್ರಮ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ನಿರ್ದೇಶನ ನೀಡಿದರು.


ಆಸ್ಪತ್ರೆಗಳಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿ ಕ್ರಮವಹಿಸಲು ಸೂಚನೆ ನೀಡಿದರು. ರಾತ್ರಿ ವೇಳೆಯಲ್ಲಿ ತಾಲ್ಲೂಕು ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸುತ್ತಿಲ್ಲ ಈ ನಿಟ್ಟಿನಲ್ಲಿ ಗಮನಹರಿಸಿ ಸಾರ್ವಜನಿಕರಿಗೆ ನೆರವಾಗುವಂತೆ ತಿಳಿಸಿದರಲ್ಲದೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ರಾತ್ರಿ ವೇಳೆಯಲ್ಲಿ ಕಡ್ಡಾಯವಾಗಿ ವೈದ್ಯರಿರುವಂತೆ ನೋಡಿಕೊಳ್ಳಿ ಎಂದು ಡಿ.ಹೆಚ್.ಓ. ಅವರಿಗೆ ಸೂಚನೆ ನೀಡಿದರು. ಅಂಬುಲೆನ್ಸ್ ಚಾಲಕರು ರೋಗಿಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ಯುತ್ತಿದ್ದಾರೆ ಸಾರ್ವಜನಿಕರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವಂತೆ ಸೂಚನೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಸೂಚಿಸಿದರು.ಸರ್ಕಾರಿ ಆಸ್ಪತ್ರೆಯಲ್ಲಿ ಇ.ಸಿ.ಜಿ.ಕಡ್ಡಾಯವಾಗಿ ಮಾಡಬೇಕು ಎಂದು ಸುತ್ತೋಲೆ ಹೊರಡಿಸುವಂತೆ ತಿಳಿಸಿದರು.ಜಿಲ್ಲಾಧಿಕಾರಿ ಸತ್ಯಭಾಮ ಸಿ, ಅವರು ಮಾತನಾಡಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಕರ್ತವ್ಯದ ಸಂದರ್ಭದಲ್ಲಿದ್ದು ನಿಷ್ಠೆ, ಬದ್ಧತೆಯಿಂದ ಕೆಲಸ ಮಾಡುವ ಮೂಲಕ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸಲು ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ನಾಮ ನಿರ್ದೇಶಿತ ಸದಸ್ಯರುಗಳಾದ ತಾರಾ ಚಂದನ್, ಮಂಜುಳಾ ಬಾಯಿ, ಎಲ್ ಡಿ.ಬಸವರಾಜು, ಶಿವಕುಮಾರ್, ಶಶಿಕಲಾ ಮತ್ತಿತರರು ಉಪಸ್ಥಿತರಿದ್ದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು