ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪೊಲೀಸರ ಗೂಂಡಾ ವರ್ತನೆ ನಿಲ್ಲಲಿ: ವಿಜಯೇಂದ್ರ

PPeepal Media

Peepal Media • ರಾಜ್ಯ

• 2 ನಿಮಿಷದ ಓದು

ಪೊಲೀಸರ ಗೂಂಡಾ ವರ್ತನೆ ನಿಲ್ಲಲಿ: ವಿಜಯೇಂದ್ರ

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆಯು ಸರ್ಕಾರದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾಮಾನ್ಯ ಜನರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದರಲ್ಲಿ ಪೊಲೀಸರು ರಾತ್ರಿ 3 ಗಂಟೆಗೆ ಹಿಂದೂ ಕಾರ್ಯಕರ್ತರ ಮನೆಗೆ ನುಗ್ಗಿ, ರಿವಾಲ್ವರ್ ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ಆಕ್ಷೇಪಿಸಿರುವ ವಿಜಯೇಂದ್ರ, ಈ ಗೂಂಡಾ ವರ್ತನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ಪೊಲೀಸರ ಈ ಕೃತ್ಯದ ವಿರುದ್ಧ ಕಟ್ಟುನಿಟ್ಟಾದ ಕ್ರಮಕ್ಕೆ ಒತ್ತಾಯಿಸಿದ್ದಾರೆ. “ಕಾಂಗ್ರೆಸ್ ಸರ್ಕಾರ ಧರ್ಮದ ಹೆಸರಿನಲ್ಲಿ ದುಷ್ಟ ಶಕ್ತಿಗಳಿಗೆ ಆಶ್ರಯ ನೀಡುತ್ತಿದೆ. ಹಿಂದೂ ಕಾರ್ಯಕರ್ತರನ್ನು ಬಂಧಿಸಿ, ಗಡಿಪಾರು ಮಾಡಿ, ಸುಳ್ಳು ಕೇಸುಗಳನ್ನು ಹಾಕಿ ದೌರ್ಜನ್ಯ ನಡೆಸುತ್ತಿದೆ. ಇದು ಸಂಪೂರ್ಣವಾಗಿ ಖಂಡನೀಯ” ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಬಿಜೆಪಿ ಮುಖಂಡ ಡಿ.ವಿ. ಸದಾನಂದ ಗೌಡ, “ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕೊಲೆ, ಸುಲಿಗೆ, ದರೋಡೆ, ಮತ್ತು ಅತ್ಯಾಚಾರದಂತಹ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಜನಸಾಮಾನ್ಯರಿಗೆ ಸುರಕ್ಷಿತ ವಾತಾವರಣವನ್ನು ಒದಗಿಸಲು ಸರಕಾರ ವಿಫಲವಾಗಿದೆ” ಎಂದು ಟೀಕಿಸಿದ್ದಾರೆ.

ವಿಜಯೇಂದ್ರ ಅವರು ಪೊಲೀಸರ ಈ ರೀತಿಯ ಕೃತ್ಯಗಳಿಗೆ ಬಿಜೆಪಿಯು ಕೈಕಟ್ಟಿ ಕೂರದಿರುವುದಾಗಿ ಎಚ್ಚರಿಕೆ ನೀಡಿದ್ದಾರೆ. “ಪೊಲೀಸರ ಮೂಲಕ ಗೂಂಡಾಗಿರಿ ಮಾಡಿದರೆ, ಬಿಜೆಪಿ ತಕ್ಕ ಪ್ರತಿರವನ್ನು ನೀಡಲಿದೆ,” ಎಂದು ಅವರು ಘೋಷಿಸಿದ್ದಾರೆ.

ಈ ಘಟನೆಯ ಕುರಿತು ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ಏರ್ಪಡುವ ಸಾಧ್ಯತೆ ಇದೆ. ಪೊಲೀಸರ ವರ್ತನೆಯನ್ನು ಸರಿಪಡಿಸಿ, ಜನರಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆಯು ಸರ್ಕಾರದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾಮಾನ್ಯ ಜನರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದರಲ್ಲಿ ಪೊಲೀಸರು ರಾತ್ರಿ 3 ಗಂಟೆಗೆ ಹಿಂದೂ ಕಾರ್ಯಕರ್ತರ ಮನೆಗೆ ನುಗ್ಗಿ, ರಿವಾಲ್ವರ್ ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ಆಕ್ಷೇಪಿಸಿರುವ ವಿಜಯೇಂದ್ರ, ಈ ಗೂಂಡಾ ವರ್ತನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ಪೊಲೀಸರ ಈ ಕೃತ್ಯದ ವಿರುದ್ಧ ಕಟ್ಟುನಿಟ್ಟಾದ ಕ್ರಮಕ್ಕೆ ಒತ್ತಾಯಿಸಿದ್ದಾರೆ. “ಕಾಂಗ್ರೆಸ್ ಸರ್ಕಾರ ಧರ್ಮದ ಹೆಸರಿನಲ್ಲಿ ದುಷ್ಟ ಶಕ್ತಿಗಳಿಗೆ ಆಶ್ರಯ ನೀಡುತ್ತಿದೆ. ಹಿಂದೂ ಕಾರ್ಯಕರ್ತರನ್ನು ಬಂಧಿಸಿ, ಗಡಿಪಾರು ಮಾಡಿ, ಸುಳ್ಳು ಕೇಸುಗಳನ್ನು ಹಾಕಿ ದೌರ್ಜನ್ಯ ನಡೆಸುತ್ತಿದೆ. ಇದು ಸಂಪೂರ್ಣವಾಗಿ ಖಂಡನೀಯ” ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಬಿಜೆಪಿ ಮುಖಂಡ ಡಿ.ವಿ. ಸದಾನಂದ ಗೌಡ, “ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕೊಲೆ, ಸುಲಿಗೆ, ದರೋಡೆ, ಮತ್ತು ಅತ್ಯಾಚಾರದಂತಹ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಜನಸಾಮಾನ್ಯರಿಗೆ ಸುರಕ್ಷಿತ ವಾತಾವರಣವನ್ನು ಒದಗಿಸಲು ಸರಕಾರ ವಿಫಲವಾಗಿದೆ” ಎಂದು ಟೀಕಿಸಿದ್ದಾರೆ.

ವಿಜಯೇಂದ್ರ ಅವರು ಪೊಲೀಸರ ಈ ರೀತಿಯ ಕೃತ್ಯಗಳಿಗೆ ಬಿಜೆಪಿಯು ಕೈಕಟ್ಟಿ ಕೂರದಿರುವುದಾಗಿ ಎಚ್ಚರಿಕೆ ನೀಡಿದ್ದಾರೆ. “ಪೊಲೀಸರ ಮೂಲಕ ಗೂಂಡಾಗಿರಿ ಮಾಡಿದರೆ, ಬಿಜೆಪಿ ತಕ್ಕ ಪ್ರತ್ಯುತ್ತರವನ್ನು ನೀಡಲಿದೆ” ಎಂದು ಅವರು ಘೋಷಿಸಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು