ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು

ಉತ್ತರಕನ್ನಡ: ಸಿಎಂ ಸಿದ್ದರಾಮಯ್ಯ ಮತ್ತು ಮಸೀದಿ ಕುರಿತು ವಿವಾದಾಸ್ಪದ ಹೇಳಿಕೆ ನೀಡಿದ್ದ ಕೇಂದ್ರದ ಮಾಜಿ ಸಚಿವ ಮತ್ತು ಉತ್ತರಕನ್ನಡದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕಾರಣವಾಗಿರುವ ಹಿನ್ನೆಲೆಯಲ್ಲಿ ಸೆಕ್ಷನ್ 153ಎ ಮತ್ತು 505ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಕುಮಟಾದಲ್ಲಿ ನಡೆದ ಸಭೆಯಲ್ಲಿ ಸಂಸದರು ಮಾಡಿರುವ ಭಾಷಣ ಆಕ್ಷೇಪಾರ್ಹವಾಗಿರುವ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಕಳೆದ ಶನಿವಾರ ಕುಮಟಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತಾಡಿದ್ದ ಅನಂತಕುಮಾರ ಹೆಗಡೆ, ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ಹಿಂದೆ ದೇವಾಲಯಗಳಾಗಿದ್ದವು. ಅವುಗಳನ್ನು ಬಾಬ್ರಿ ಮಸೀದಿ ಮಾದರಿಯಲ್ಲಿ ಕೆಡವಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

ಈ ವಿಷಯದ ಕುರಿತು ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರ ಕೆ.ಶಂಭು ಶೆಟ್ಟಿ, “ಸಂಸದ ಅನಂತಕುಮಾರ್ ಹೆಗಡೆ ಶಾಂತವಾಗಿರುವ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸುವ ಪ್ರಯತ್ನವನ್ನು ನಡೆಸುತ್ತಿದ್ದಾರೆ. ಚುನಾವಣೆ ಸಮೀಪಿಸಿದಂತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಸಂಸದ ವಿವಾದ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಅನಂತಕುಮಾರ್ ತಮ್ಮ ಭಾಷಣದಲ್ಲಿ ಮಾತ್ರ ದ್ವೇಷಿಸುವ ಸಮುದಾಯದ ಜತೆಗೆ ವ್ಯಾವಹಾರಿಕ ಸಂಬಂಧ ಹೊಂದಿದ್ದಾರೆ. ಆದರೆ ಜನರನ್ನು ಮಾತ್ರ ತಪ್ಪು ದಾರಿಗೆ ಎಳೆದು ಸಮಾಜದಲ್ಲಿ ದ್ವೇಷ ವಾತಾವರಣ ನಿರ್ಮಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು