ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕನ್ನಡಪರ ಟ್ವೀಟ್‌ ಮಾಡಿ ತನ್ನ ಪಕ್ಷದ ಬೆಂಬಲಿಗರಿಂದಲೇ ವರ್ಚುವಲ್‌ ದಾಳಿಗೆ ಈಡಾದ ಸಂಸದ ತೇಜಸ್ವೀ ಸೂರ್ಯ

P

Peepal Media • ರಾಜ್ಯ

• 1 ನಿಮಿಷದ ಓದು

ಕನ್ನಡಪರ ಟ್ವೀಟ್‌ ಮಾಡಿ ತನ್ನ ಪಕ್ಷದ ಬೆಂಬಲಿಗರಿಂದಲೇ ವರ್ಚುವಲ್‌ ದಾಳಿಗೆ ಈಡಾದ ಸಂಸದ ತೇಜಸ್ವೀ ಸೂರ್ಯ

ಬೆಂಗಳೂರಿನ ಚಂದಾಪುರದ SBI ಬ್ಯಾಂಕಿನ ಅಧಿಕಾರಿಯೊಬ್ಬರು ಕ್ನನಡದಲ್ಲಿ ಸೇವೆ ನೀಡದೆ ಉದ್ಧಟತನ ತೋರಿದ್ದು ಈಗ ರಾಜ್ಯದೆಲ್ಲೆಡೆ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಇತ್ತೀಚೆಗೆ ರಾಜ್ಯಾದ್ಯಂತ ಇರುವ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪರಭಾಷಾ ಅಧಿಕಾರಿಗಳೇ ಹೆಚ್ಚಿದ್ದು, ಅವರು ಕನಿಷ್ಟ ವ್ಯವಹಾರಕ್ಕೆ ಬೇಕಾಗುವಷ್ಟು ಸಹ ಸ್ಥಳೀಯ ಭಾಷೆಯನ್ನು ಕಲಿಯದೆ, ಬ್ಯಾಂಕಿಗೆ ಬರುವ ಗ್ರಾಹಕರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.

ಈ ಹಿನ್ನೆಲೆಯಲ್ಲಿ ಚಂದಾಪುರದ ಘಟನೆಗೆ ತುಸು ಹೆಚ್ಚೇ ಪ್ರತಿಭಟನೆ ವ್ಯಕ್ತವಾಗಿದ್ದು, ಆ ಅಧಿಕಾರಿಯನ್ನು ಈಗಾಗಲೇ ಬ್ಯಾಂಕ್‌ ವರ್ಗಾಯಿಸುವುದಾಗಿ ಹೇಳಿದೆ.

ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರೂ ಬ್ಯಾಂಕ್‌ ಉದ್ಯೋಗಿಗಳು ಸ್ಥಳೀಯ ಭಾಷೆಯಲ್ಲಿ ಸೇವೆ ನೀಡಬೇಕು ಎಂದು ಆಗ್ರಹಿಸಿ ಹೇಳಿಕೆ ನೀಡಿದ್ದರು. ಆದರೆ ಜೆಡಿಎಸ್‌ ಪಕ್ಷದ ನಾಯಕ, ಕೇಂದ್ರ ಸಚಿವ ಕುಮಾರಸ್ವಾಮಿ ಒಂದು ಪೋಸ್ಟ್‌ ಹಾಕಿ ನಂತರ ಅದ್ಯಾಕೋ ಡಿಲೀಟ್‌ ಮಾಡಿದರು.

ಈ ನಡುವೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಈ ಕುರಿತು ಒಂದು ಪೋಸ್ಟ್‌ ಹಾಕಿದರು. ಅವರ ಪೋಸ್ಟ್‌ ಹೀಗಿತ್ತು “ಎಸ್ ಬಿ ಐ ಬ್ಯಾಂಕ್ ನ ಬ್ರ್ಯಾಂಚ್ ಮ್ಯಾನೇಜರ್ ರವರ ಈ ರೀತಿಯ ದುಂಡಾವರ್ತನೆ ಸಹಿಸಲು ಆಗದು. ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ, ಅದರಲ್ಲಿಯೂ ಬ್ಯಾಂಕಿಂಗ್ ವಲಯದಲ್ಲಿ ಗ್ರಾಹಕರು ಮಾತನಾಡುವ ಸ್ಥಳೀಯ ಭಾಷೆಯಲ್ಲಿಯೇ ವ್ಯವಹರಿಸತಕ್ಕದ್ದು. ಕರ್ನಾಟಕದಲ್ಲಿ ಬ್ಯಾಂಕಿಂಗ್ ಸೇವೆಗಳಲ್ಲಿ ಸ್ಥಳೀಯ ಕನ್ನಡಿಗರನ್ನು ಪರಿಗಣಿಸುವಂತೆ ನಾನು ಸಂಸತ್ತಿನ ಒಳಗೆ & ಹೊರಗೆ ಹಲವು ಬಾರಿ ಪ್ರಸ್ತಾಪಿಸಿದ್ದೇನೆ. ಇತ್ತೀಚೆಗಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಮುಂದೆಯೂ ನಾನು ಇದನ್ನೇ ಪುನರುಚ್ಚರಿಸಿ, ಸ್ಥಳೀಯ ಭಾಷೆ ಬಲ್ಲವರನ್ನೇ ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದು, ಈ ಕುರಿತಂತೆ DFS ನೀತಿಯಡಿಯಲ್ಲಿಯೇ ನೇಮಕಾತಿ ಕೈಗೊಳ್ಳುವಂತೆ

@TheOfficialSBI ರಲ್ಲೂ ವಿನಂತಿಸುತ್ತೇನೆ. ಈ ರೀತಿಯ ವರ್ತನೆ ತೋರಿರುವ ಬ್ಯಾಂಕ್ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸಂಬಂಧಪಟ್ಟವರ ಬಳಿ ನಾನು ಒತ್ತಾಯಿಸಿದ್ದು, ಕರ್ನಾಟಕದಲ್ಲಿ ಸೇವೆ ಸಲ್ಲಿಸುವ ಬ್ಯಾಂಕಿಂಗ್ ವಲಯ ಸಿಬ್ಬಂದಿಗಳು ಗ್ರಾಹಕರೊಂದಿಗೆ ಕನ್ನಡದಲ್ಲೇ ವ್ಯವಹರಿಸುವ ಅಗತ್ಯತೆ ಇದೆ.”

ಆದರೆ ಈ ಪೋಸ್ಟ್‌ ಹಾಕುತ್ತಿದ್ದಂತೆ, ದಕ್ಷಿಣ ಭಾರತೀಯರು, ಕನ್ನಡಿಗರು ಸೇರಿದಂತೆ ಬಹುತೇಕ ಬಲಪಂಥೀಯ ಒಲವಿನ ಹಿಂದಿಪ್ರಿಯ ಜನರು ತೇಜಸ್ವೀ ಸೂರ್ಯ ವಿರುದ್ಧ ತಿರುಗಿಬಿದ್ದಾರೆ. ಒಬ್ಬ ವ್ಯಕ್ತಿ ತನ್ನ ಕಚೇರಿಯನ್ನು ಬೆಂಗಳೂರಿನಿಂದ ಹೈದರಾಬಾದ್‌ ನಗರಕ್ಕೆ ವರ್ಗಾಯಿಸುವುದಾಗಿ ಹೇಳಿದ್ದರೆ, ಇನ್ನೂ ಕೆಲವರು ತೇಜಸ್ವೀ ಸೂರ್ಯ ಬಿಜೆಪಿ ಬಿಡುವ ಕುರಿತಾಗಿ ಯೋಚಿಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಈ ದಾಳಿಯ ನಂತರ ಟ್ವಿಟರ್‌‌ (X) ಬಳಕೆದಾರರೊಬ್ಬರು ತೇಜಸ್ವೀಸೂರ್ಯ ಕನ್ನಡದ ಕುರಿತು ಏಕೆ ಪೋಸ್ಟ್‌ ಹಾಕುವುದಿಲ್ಲ ಎನ್ನುವುದು ನನಗೆ ಇಂದು ತಿಳಿಯಿತು ಎಂದು ಟ್ವೀಟ್ ಮಾಡಿದ್ದಾರೆ

ಅವರ ಟ್ವೀಟಿಗೆ ಬಂದಿರುವ ಪ್ರತಿಕ್ರಿಯೆಗಳನ್ನು ನೀವು ಇಲ್ಲಿ ಗಮನಿಸಬಹುದು

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version