ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗಡಿನಾಡಿನ ಕನ್ನಡ ಶಾಲೆಗಳಿಗೆ 3 ತಿಂಗಳಾದರು ಸಿಗದ ಪಠ್ಯಪುಸ್ತಕ – ಪೋಷಕರ ತೀವ್ರ ಆಕ್ರೋಶ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಗಡಿನಾಡಿನ ಕನ್ನಡ ಶಾಲೆಗಳಿಗೆ 3 ತಿಂಗಳಾದರು ಸಿಗದ ಪಠ್ಯಪುಸ್ತಕ – ಪೋಷಕರ ತೀವ್ರ ಆಕ್ರೋಶ

ರಾಯಚೂರು : ಕರ್ನಾಟಕ, ಆಂಧ್ರ ಮತ್ತು ತೆಲಂಗಾಣದ ಗಡಿ ಭಾಗಗಳಲ್ಲಿರುವ ರಾಯಚೂರು (Raichur) ಜಿಲ್ಲೆಯ ಸುಮಾರು 33 ಕನ್ನಡ ಮಾಧ್ಯಮ ಶಾಲೆಗಳ (Kannada medium schools) ಹತ್ತು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳು ಕಳೆದರೂ ಪಠ್ಯಪುಸ್ತಕಗಳು ಲಭ್ಯವಾಗಿಲ್ಲ. ಸರ್ಕಾರದ ಈ ಬೇಜವಾಬ್ದಾರಿತನಕ್ಕೆ ಪೋಷಕರು ಮತ್ತು ಕನ್ನಡ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುಸ್ತಕಗಳ ತೀವ್ರ ಅಭಾವದಿಂದಾಗಿ ಪ್ರಸ್ತುತ ಗಡಿಭಾಗದ ಶಾಲೆಗಳಲ್ಲಿ ಏಳೆಂಟು ವಿದ್ಯಾರ್ಥಿಗಳು ಕೇವಲ ಒಂದು ಪುಸ್ತಕವನ್ನು ಹಂಚಿಕೊಂಡು ಅಭ್ಯಾಸ ಮಾಡುವ ಅನಿವಾರ್ಯತೆ ಎದುರಾಗಿದೆ. ಶಿಕ್ಷಕರು ಹಳೆಯ ವಿದ್ಯಾರ್ಥಿಗಳಿಂದ ಪುಸ್ತಕಗಳನ್ನು ಸಂಗ್ರಹಿಸಿ ತರಗತಿಗಳನ್ನು ನಡೆಸುತ್ತಿದ್ದಾರೆ. ಮೇ ತಿಂಗಳಲ್ಲೇ ಶಿಕ್ಷಣ ಇಲಾಖೆಗೆ ಬೇಡಿಕೆ ಸಲ್ಲಿಸಿದ್ದರೂ ಈವರೆಗೆ ಅಗತ್ಯ ಪಠ್ಯಪುಸ್ತಕಗಳು ಸರಬರಾಜಾಗಿಲ್ಲ. ಈ ಸೌಲಭ್ಯಗಳ ಕೊರತೆಯಿಂದ ಬೇಸತ್ತು ಗಡಿಭಾಗದ ಮಕ್ಕಳು ತೆಲುಗು ಹಾಗೂ ಇಂಗ್ಲಿಷ್ ಮಾಧ್ಯಮಗಳತ್ತ ಆಕರ್ಷಿತರಾಗುತ್ತಿದ್ದಾರೆ ಎಂಬ ಕಳವಳ ವ್ಯಕ್ತವಾಗಿದೆ. ಈ ಗಂಭೀರ ಸಮಸ್ಯೆಯ ಕುರಿತು ರಾಯಚೂರಿನ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ ಜಿ. ಅವರು ಪ್ರತಿಕ್ರಿಯಿಸಿದ್ದು, ಈಗಾಗಲೇ ಅಗತ್ಯವಿರುವ ಪುಸ್ತಕಗಳ ಪಟ್ಟಿಯನ್ನು ಸರ್ಕಾರಕ್ಕೆ ರವಾನಿಸಲಾಗಿದೆ. ಪ್ರಸ್ತುತ ಹಂತ ಹಂತವಾಗಿ ಪುಸ್ತಕಗಳು ಬರುತ್ತಿದ್ದು, ಗಡಿಭಾಗದ ಕನ್ನಡ ಶಾಲೆಗಳಿಗೆ ಶೀಘ್ರದಲ್ಲೇ ವಿತರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಭರವಸೆ ನೀಡಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು