22 ಮಸೂದೆಗಳ ಪೈಕಿ, ದ್ವೇಷ ಭಾಷಣ ತಡೆ ವಿಧೇಯಕಕ್ಕೆ ಬೀಳದ ಗವರ್ನರ್ ಸಹಿ
ಲಿಂಕ್ ನಕಲಿಸಲಾಗಿದೆ ✓
ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ (Karnataka Government) 22 ಮಸೂದೆಗಳ ಪೈಕಿ 19 ಮಸೂದೆಗಳಿಗೆ ಮಾತ್ರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಹಿ ಮಾಡಿದ್ದಾರೆ.
ಸ್ಪಷ್ಟನೆ ಕೋರಿ ಕೆಲ ಮಸೂದೆಗಳನ್ನು ಸರ್ಕಾರಕ್ಕೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಪ್ರಮುಖವಾಗಿ ದ್ವೇಷ ಭಾಷಣ ತಡೆ ವಿಧೇಯಕಕ್ಕೆ ರಾಜ್ಯಪಾಲರು ಸಹಿ ಮಾಡಿಲ್ಲ ಎಂದು ತಿಳಿದುಬಂದಿದೆ.
ಕಾನೂನು ತಜ್ಞರ ಜೊತೆಗೆ ಚರ್ಚೆಗೆ ರಾಜ್ಯಪಾಲರು ನಿರ್ಧರಿಸಿ ಈ ಮಸೂದೆಗಳಿಗೆ ಸಹಿ ಹಾಕದೆ ಸರ್ಕಾರಕ್ಕೆ ಕಳುಹಿಸಿದ್ದಾರೆ. ಇನ್ನು ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮಸೂದೆ, ಪರಿಶಿಷ್ಟ ವರ್ಗಗಳ ಕುರಿತಾದ ವಿಧೇಯಕವನ್ನು ಗವರ್ನರ್ ವಾಪಸ್ ಕಳುಹಿಸಿದ್ದಾರೆ.
ರ
ರಮೇಶ್ ಹಾಸನ್
Peepal Media · ರಾಜ್ಯ ವಿಭಾಗ
ಹಿಂದಿನ ಸುದ್ದಿ