ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅರ್ಕಾವತಿ ಬಡಾವಣೆ | ರಾಜ್ಯಪಾಲರ ಕಛೇರಿಯಿಂದಲೇ ಮಾಹಿತಿ ಸೋರಿಕೆಯಾಗಿರಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 2 ನಿಮಿಷದ ಓದು

ಅರ್ಕಾವತಿ ಬಡಾವಣೆ | ರಾಜ್ಯಪಾಲರ ಕಛೇರಿಯಿಂದಲೇ ಮಾಹಿತಿ ಸೋರಿಕೆಯಾಗಿರಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಪ್ಪಳ : ಸೆಪ್ಟೆಂಬರ್ -22: ತಜ್ಞರ ವರದಿಯ ಆಧಾರದ ಮೇಲೆ ಗೇಟ್ ಗಳ ನಿರ್ವಹಣೆ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೊಪ್ಪಳದ ಗಿಣಿಗೇರಾ ಏರ್ ಸ್ಟ್ರಿಪ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕ್ರಸ್ಟ್ ಗೇಟ್ ಗಳ ಕಾಲಕಾಲಕ್ಕೆ ದುರಸ್ತಿ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು 50 ವರ್ಷಕ್ಕೆ ಗೇಟ್ ಗಳನ್ನು ಬದಲಿಸಬೇಕು. 70 ವರ್ಷಗಳಿಂದ ಗೇಟ್ ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಉತ್ತಮ ನಿರ್ವಹಣೆ ಮಾಡಿರುವುದರಿಂದ 70 ವರ್ಷ ಕೆಲಸ ಮಾಡಿದೆ. ಪ್ರಸ್ತುತ ತಜ್ಞರ ಸಮಿತಿ ರಚನೆಯಾಗಿದ್ದು ವರದಿ ನೀಡಬೇಕಿದೆ ಎಂದರು.

ಹಿಂಗಾರಿನ ಎರಡನೇ ಬೆಳೆಗೆ ನೀರು ಲಭ್ಯವಾಗಬಹುದು
ತುಂಗಭದ್ರ ಜಲಾಶಯ ಮತ್ತೆ ತುಂಬಿದೆ. 101.77 ಟಿ.ಎಂ.ಸಿ ನೀರು ಲಭ್ಯವಿದೆ. ಮುಂಗಾರು ಮತ್ತು ಹಿಂಗಾರು ಬಿತ್ತನೆಗೆ ನೀರು ಸಿಗಲಿದೆ.ಕೊಚ್ಚಿಹೋಗಿದ್ದ 19 ನೇ ಕ್ರಸ್ಟ್ ಗೇಟ್ ನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್ ಅವರು ಸ್ಥಳದಲ್ಲಿಯೇ ಇದ್ದು ಗೇಟ್ ದುರಸ್ತಿ ಗೆ ಕ್ರಮ ವಹಿಸಿದರು. ತಜ್ಞ ಕನ್ನಯ್ಯ ನಾಯ್ಡು ಅವರ ನೇತೃತ್ವದಲ್ಲಿ, ಜಿಂದಾಲ್, ನಾರಾಯಣ್ ಇಂಜಿನಿಯರಿಂಗ್ ಹಾಗೂ ಇಂಜಿನಿಯರ್ ಗಳು, ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡಿದ್ದರಿಂದ ಆದಷ್ಟು ತ್ವರಿತವಾಗಿ ಗೇಟ್ ಅಳವಡಿಸಲು ಸಾಧ್ಯವಾಯಿತು. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಯಿತು. 20 ಕ್ಕೂ ಹೆಚ್ಚು ಟಿ.ಎಂ.ಸಿ ನೀರು ಉಳಿಯಿತು. ಬೆಳೆ ಗೆ ನೀರು ಸಿಗುತ್ತದೋ ಇಲ್ಲವೋ ಎಂಬ ರೈತರ ಆತಂಕ ನಿವಾರಣೆಯಾಗಿದೆ. ಹಿಂಗಾರಿನ ಬೆಳೆಗೆ ಯಾವುದೇ ತೊಂದರೆ ಇಲ್ಲ. ಎರಡನೇ ಬೆಳೆಗೆ ನೀರು ಒದಗಿಸಲು ಪ್ರಯತ್ನಿಸಲಾಗುವುದು.101 ಟಿಎಂಸಿ ಲಭ್ಯವಿರುವುದರಿಂದ ನೀರು ಲಭ್ಯವಾಗಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಸ್ತೆಗಳ ದುರಸ್ತಿ

ನಮ್ಮ ಸರ್ಕಾರವಿದ್ದಾಗ ರಸ್ತೆಗಳ ನಿರ್ಮಾಣ ಮಾಡಿದ್ದೇವೆ. ಬಿಜೆಪಿ ಕಾಲದಲ್ಲಿ ರಸ್ತೆಗಳಾಗಿಲ್ಲ. ಈ ವರ್ಷ ಉತ್ತಮ ಮಳೆಯಾಗಿರುವುದರಿಂದ ರಸ್ತೆಗಳು ಹಾಳಾಗಿವೆ ಅದರ ದುರಸ್ತಿ ಮಾಡಿಸಲಾಗುವುದು ಎಂದರು.

ರಾಜ್ಯಪಾಲರ ಕಛೇರಿಯಿಂದಲೇ ಮಾಹಿತಿ ಸೋರಿಕೆಯಾಗಿರಬಹುದು

ಅರ್ಕಾವತಿ ಬಡಾವಣೆ ಬಗ್ಗೆ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿದ್ದರೆ ಸರ್ಕಾರ ಈ ಬಗ್ಗೆ ಗಮನಹರಿಸಲಿದೆ ಎಂದರು. ರಾಜ್ಯಪಾಲರ ಸೋರಿಕೆಯಾಗಿದೆ ಎಂಬ ಬಗ್ಗೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ರಾಜ್ಯಪಾಲರ ಕಛೇರಿಯಿಂದಲೇ ಸೋರಿಕೆಯಾಗಿರಬಹುದು ಎಂದರು. ಈ ಬಗ್ಗೆ ತನಿಖೆಯಾಗಲಿ ಎಂದರು. ಈ ಬಗ್ಗೆ ಪತ್ರಿಕೆಯಲ್ಲಿ ಓದಿ ತಿಳಿದಿದ್ದೇನೆ ಎಂದರು.

ರೀ ಡೂ ಮಾಡಿ ಎಂದು ಬಿಡಿಎ ಗೆ ಸುಪ್ರೀಂ ಕೋರ್ಟ್ ಹೇಳಿದೆ ಎಂದರು.

ಹೈದರಾಬಾದ್ ಕರ್ನಾಟಕಕ್ಕೆ ಸಂಬಂಧಿಸಿದ 46 ವಿಷಯಗಳ ಬಗ್ಗೆ ತೀರ್ಮಾನ
ಕೊಪ್ಪಳ ಜಿಲ್ಲೆಯ ನಗರಸಭೆಯಲ್ಲಿ 8.5 ಕೋಟಿ ಬಾಕಿ ಕಾಮಗಾರಿಗಳ ಬಗ್ಗೆ ಮಾತನಾಡಿ ಕಲಬುರ್ಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 56 ವಿಷಯಗಳಲ್ಲಿ 46 ವಿಷಯಗಳು ಹೈದರಾಬಾದ್ ಕರ್ನಾಟಕಕ್ಕೆ ಸಂಬಂಧಿಸಿತ್ತು. ಇದರಲ್ಲಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದರು.

ಹಾಲಿನ ದರ ಹೆಚ್ಚು ಮಾಡಿದರೆ ಅದು ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲಾಗುವುದು
ಮಾಗಡಿಯಲ್ಲಿ ಬಹಳ ಶಾಸಕರು, ರೈತರು ಹಸು ಸಾಕಣೆಯ ವೆಚ್ಚ ಹೆಚ್ಚಾಗಿದ್ದು ಹಾಲಿನ ದರ ಹೆಚ್ಚಳ ಮಾಡಲು ಒತ್ತಾಯ ಮಾಡಿದರು. ಒಂದು ವೇಳೆ ಹಾಲಿನ ದರ ಹೆಚ್ಚಿಸುವ ಬಗ್ಗೆ ತೀರ್ಮಾನವಾದರೆ ಅದನ್ನು ಸಂಪೂರ್ಣವಾಗಿ ರೈತರಿಗೆ ಕೊಡಬೇಕೆಂದು ಹೇಳಿದ್ದೇನೆ ಎಂದರು.

ಹಾಲಿನ ದರ ಹೆಚ್ಚು ಮಾಡಿದರೆ ಅದನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಬೇಕೆಂದು ಸೂಚಿಸಲಾಗಿದೆ ಎಂದರು.

ಮುನಿರತ್ನ ಅವರಿಂದ ಸುಳ್ಳು ಆರೋಪ
ಶಾಸಕ ಮುನಿರತ್ನ ಅವರು ಸರ್ಕಾರ ಬಂಧಿಸಿರುವುದು ಕಿರುಕುಳ ನೀಡಲು ಹಾಗು ನನ್ನ ಆಪ್ತ ಬಳಗಕ್ಕೆ ಕಿರುಕುಳ ನೀಡಿ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ನಾವು ಯಾರ ಮೇಲೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದರು. ಅಪರಾಧ ಮಾಡಿ ಎಂದು ನಾವು ಯಾರಿಗೂ ಹೇಳಿಲ್ಲ. ಶಾಸಕರು ನನ್ನನ್ನು ಭೇಟಿ ಮಾಡಿ ಎಸ್.ಐ.ಟಿ ರಚಿಸಲು ಕೋರಿದರು. ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದೆ. ತಪ್ಪು ಮಾಡಿದರೆ ತಾನೇ ಎಫ್ ಐ ಆರ್ ಆಗುವುದು ಎಂದರು. ನಾವು ಯಾರಿಗೂ ಕಿರುಕುಳ ನೀಡಿ ಕೇಸು ದಾಖಲಿಸಿಲ್ಲ ಈ ಆರೋಪ ಸುಳ್ಳು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು