ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಡಿಜೆಗಳಿಗೆ ಅವಕಾಶಲ್ಲ ಕಾನೂನು ಸ್ಪಷ್ಟವಾಗಿದೆ – ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಡಿಜೆಗಳಿಗೆ ಅವಕಾಶಲ್ಲ ಕಾನೂನು ಸ್ಪಷ್ಟವಾಗಿದೆ – ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ

ದಕ್ಷಿಣ ಕನ್ನಡ : ಸಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಷರತ್ತು ವಿದಿಸಿರುವುದನ್ನು ಖಂಡಿಸಿ, ಸಾರ್ವಜನಿಕ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ಸಂಘಟನೆಗಳ ನಿರ್ಧಾರದ ಕುರಿತಂತೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಬಹಿಷ್ಕಾರ ಸೇರಿದಂತೆ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರು ಸ್ವತಂತ್ರರಾಗಿದ್ದಾರೆ. ಆದರೆ ಕಾನೂನು ಸ್ಪಷ್ಟವಾಗಿದ್ದು, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಆದಾಗ್ಯೂ, ಸಾರ್ವಜನಿಕರು, ಹಿರಿಯ ನಾಗರಿಕರು, ರೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಆಚರಣೆಗಳು ನಡೆಯುವಂತೆ ನೋಡಿಕೊಳ್ಳಲು ಅದಕ್ಕೆ ತಕ್ಕಂತೆ ಹೊಂದಿಕೊಳ್ಳುವ ಕೆಲವು ವ್ಯವಸ್ಥೆಗಳನ್ನು ಮಾಡುತ್ತೇವೆ ಎಂದು ಭರವನೆ ನೀಡಿದ್ದಾರೆ.

ಗಣೇಶ ಹಬ್ಬದ ಆಯೋಜಕರ ಸಭೆ ಇಂದು ನಡೆಯಲಿದ್ದು, ಈ ಸಭೆಯಲ್ಲಿ ಡಿಸಿಪಿ, ಹೆಚ್ಚುವರಿ ಎಸ್ಪಿ ಡಿಕೆ ಮತ್ತು ಎಸಿಪಿಗಳು ಭಾಗವಹಿಸಲಿದ್ದು, ಇಲ್ಲಿ ಮಾರ್ಗಸೂಚಿಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ನಿಯಮಗಳಿವೆ ನಿಜ, ಆದರೆ ನಿಯಮಗಳಿಗೆ ಕೆಲವು ವಿನಾಯಿತಿಗಳನ್ನು ಸಮರ್ಥನೀಯ ಕಾರಣಗಳಿಗಾಗಿ ನೀಡಬಹುದು. ಆದರೆ ವಿನಾಯಿತಿಗಳೇ ನಿಯಮಗಳಾಗಲು ಸಾಧ್ಯವಿಲ್ಲ ಎಂದು ಕಮೀಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.ನಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ ಶಬ್ದವನ್ನು 50 ಡೆಸಿಬಲ್‌ಗೆ ಸೀಮಿತಗೊಳಿಸಬೇಕು ಎನ್ನುವ ಅದೇಶದಿಂದ ಕಾರ್ಯಕ್ರಮ ಆಯೋಜಕರು, ಕಲಾವಿದರು ಹಾಗೂ ಸಂಘದ ಸದಸ್ಯರಿಗೆ ಸಮಸ್ಯೆಯಾಗಿದೆ ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಸಂಘ ಆರೋಪಿಸಿದ್ದು, ಈ ಹಿನ್ನೆಲೆಯಲ್ಲಿ ಅ. 21ರಿಂದ ಅನ್ವಯವಾಗುವಂತೆ ಈ ಸಮಸ್ಯೆ ಇತ್ಯರ್ದಪಡಿಸುವವರೆಗೆ ನಾವು ಸಾರ್ವಜನಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕಗಳನ್ನು ನೀಡದಿರಲು ನಿರ್ದರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ನಿನ್ನೆ ಮಾತಾಡಿದ್ದ ಸಂಘದ ಅಧ್ಯಕ್ಷ ಧನರಾಜ್ ಶೆಟ್ಟಿ ಅವರು, ಒಂದು ವಾರದಿಂದ ಅಲ್ಲಲ್ಲಿ ಧ್ವನಿವರ್ಧಕಗಳನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ. ಪೊಲೀಸರಲ್ಲೇ ಬೇಸ್ ಸ್ಪೀಕರ್ ಹಾಗೂ ಡಿಜಿ ಬಗ್ಗೆ ಗೊಂದಲಗಳಿವೆ, ಅಸ್ಪಷ್ಟತೆ ಇದೆ, ಇದರಿಂದಾಗಿ ಕಾರ್ಯಕ್ರಮ ಆಯೋಜಕರು, ಕಲಾವಿದರು ಹಾಗೂ ಸಂಘದ ಸದಸ್ಯರಿಗೆ ಸಮಸ್ಯೆಯಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು