ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಿಂದೂ ನಾವೆಲ್ಲಾ ಒಂದು ಎನ್ನುವ ಬಿಜೆಪಿಗೆ ಬುಡಕ್ಕೆ ಬಿಸಿನೀರು ಬಂದಾಗ ಜಾತಿ ನೆನಪಾಗುತ್ತದೆ: ಸಿ ಎಮ್‌ ಸಿದ್ಧರಾಮಯ್ಯ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಹಿಂದೂ ನಾವೆಲ್ಲಾ ಒಂದು ಎನ್ನುವ ಬಿಜೆಪಿಗೆ ಬುಡಕ್ಕೆ ಬಿಸಿನೀರು ಬಂದಾಗ ಜಾತಿ ನೆನಪಾಗುತ್ತದೆ: ಸಿ ಎಮ್‌ ಸಿದ್ಧರಾಮಯ್ಯ

ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋತ್ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು “ದಲಿತ ಗುರಾಣಿ” ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ‘ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ ಎಂದು ಸಿ ಎಮ್‌ ಸಿದ್ಧರಾಮಯ್ಯ ವಿರೋಧ ಪಕ್ಷವನ್ನು ಟೀಕಿಸಿದ್ದಾರೆ.

ರಾಜ್ಯಪಾಲರಿಗೆ ಅವಮಾನವಾಗಿದೆ ಎಂದು ಪ್ರತಿಭಟಿಸುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ನನ್ನ ಕೆಲವು ಸರಳ ಪ್ರಶ್ನೆಗಳಿವೆ ಎಂದಿರುವ ಅವರ ವಿರೋಧ ಪಕ್ಷಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.


ಮೊದಲನೆಯದಾಗಿ, ದಲಿತ ಸಮುದಾಯಕ್ಕೆ ಸೇರಿರುವ ಥಾವರಚಂದ್ ಗೆಹ್ಲೋತ್ ಅವರ ಬಗ್ಗೆ ನಿಮ್ಮಲ್ಲಿ ಅಷ್ಟೊಂದು ಗೌರವ ಮತ್ತು ಅಭಿಮಾನವಿದ್ದರೆ ಕೇಂದ್ರ ಸಚಿವ ಸಂಪುಟದಲ್ಲಿರಬೇಕಾಗಿದ್ದ ಅವರನ್ನು ಇಲ್ಲಿ ತಂದು ‘‘ಪಂಜರದ ಗಿಣಿ’’ ಯನ್ನಾಗಿ ಯಾಕೆ ಮಾಡಿದ್ದೀರಿ? ‘‘ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮ’’ ಸೇರುವಷ್ಟು ವಯಸ್ಸಾಗದೆ ಇದ್ದರೂ ಅವರ ಸಕ್ರಿಯ ರಾಜಕೀಯ ಜೀವನವನ್ನು ಯಾಕೆ ಮೊಟಕುಗೊಳಿಸಿದಿರಿ?

ಕೇಂದ್ರ ಸಚಿವ ಸ್ಥಾನದಿಂದ ವಂಚಿತರನ್ನಾಗಿ ಮಾಡಿ, ತಮ್ಮ ರಾಜಕೀಯ ವಿರೋಧಿಗಳ ವಿರುದ್ದದ ದ್ವೇಷದ ರಾಜಕಾರಣಕ್ಕೆ ದಲಿತ ಸಮುದಾಯದ ನಾಯಕನನ್ನು ದುರ್ಬಳಕೆ ಮಾಡಿಕೊಳ್ಳುವುದು ಆ ಸಮುದಾಯಕ್ಕೆ ಮಾಡುವ ಅನ್ಯಾಯ-ಅವಮಾನ ಅಲ್ಲವೇ? ಬಿಜೆಪಿ ನಾಯಕರೇ, ದಲಿತ ನಾಯಕರೊಬ್ಬರನ್ನು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ?!

ದಲಿತರನ್ನು ಬಳಸಿ ಬಿಸಾಡುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ. ಕನಿಷ್ಠ ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ ಬಿಜೆಪಿಯೊಳಗಿನ ‘‘ಸಂಘಿ ಮನಸ್ಸು’’ ಅದನ್ನು ಸಹಿಸಿಕೊಳ್ಳದೆ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿತು, ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು.

ದಲಿತ ಸಮುದಾಯದಕ್ಕೆ ಸೇರಿರುವ ನಮ್ಮ ಪಕ್ಷದ ಈಗಿನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಹಿರಿಯ ನಾಯಕರು ಎಷ್ಟು ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡಿ ಕಲಿಯಿರಿ.

ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ, ಮೀಸಲಾತಿಯನ್ನು ವಿರೋಧಿಸುತ್ತಿರುವ ಮತ್ತು ಜಾತಿ ತಾರತಮ್ಯವನ್ನು ಅಂತರಂಗದಲ್ಲಿ ಒಪ್ಪಿಕೊಂಡು ಬಹಿರಂಗದಲ್ಲಿ ಜಾತ್ಯತೀತತೆಯ ಸೋಗುಹಾಕಿರುವ ನಿಮಗೆ ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ನಿಮಗೆ ದಲಿತ ಸಮುದಾಯದ ಬಗ್ಗೆ ನಿಜವಾಗಿಯೂ ಗೌರವ ಇದ್ದರೆ ಥಾವರಚಂದ್ ಗೆಹ್ಲೋತ್ ಅವರ ಮೇಲೆ ಕೆಟ್ಟ ಕೆಲಸ ಮಾಡಲು ರಾಜಕೀಯ ಒತ್ತಡ ಹೇರಲು ಹೋಗದೆ, ಅವರು ಸಂವಿಧಾನದತ್ತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಿ, ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು