ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಾರದೊಳಗೆ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು: ಸಚಿವ ಡಾ. ಎಂ.ಸಿ. ಸುಧಾಕರ್

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ವಾರದೊಳಗೆ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು: ಸಚಿವ ಡಾ. ಎಂ.ಸಿ. ಸುಧಾಕರ್

ಬೆಂಗಳೂರು: ಒಂದು ವಾರದೊಳಗೆ 2021ರಲ್ಲಿ ಆರಂಭಗೊಂಡ 1242ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಪ್ರಕ್ರಿಯೆಯನ್ನು ಆರಂಭಿಸಿ, ಡಿಸೆಂಬರ್ ಅಂತ್ಯದೊಳಗೆ ಆದೇಶ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ಹೇಳಿದರು.

ಗುರುವಾರ ನಗರದ ಸಚಿವರ ನಿವಾಸದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ 150ಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ಬಳಗದ ವತಿಯಿಂದ ಮನವಿ ಮಾಡಿದ ಸಂದರ್ಭದಲ್ಲಿ ಅಭ್ಯರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೆಎಟಿಯಿಂದ ತೀರ್ಪು ಪ್ರಕಟವಾಗಿದೆ. ಸರ್ಕಾರದ ಸುತ್ತೋಲೆಯ ಪರವಾಗಿ ಜಯವಾಗಿದೆ. ತೀರ್ಪನ್ನು ಸ್ವಾಗತಿಸುತ್ತೇನೆ. ಇನ್ನೂ ಸಿಸಿಬಿ ವರದಿಯ ಪರಿಶೀಲನೆಗಾಗಿ ನೇಮಿಸಿದ ತ್ರಿಸದಸ್ಯ ಸಮಿತಿಯಿಂದ 6 ದಿನಗಳ ಒಳಗೆ ವರದಿಯನ್ನು ಪಡೆದು, ಕೂಡಲೇ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು. ಅಭ್ಯರ್ಥಿಗಳು ಆತಂಕ ಪಡಬೇಡಿ ಎಂದರು.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ 2021ರ ಕುರಿತಾಗಿ ಮಾನ್ಯ ಕರ್ನಾಟಕ ಆಡಳಿತ ನ್ಯಾಯಾಧಿಕರಣವು ದಿನಾಂಕ: 01-02-2023ರ ಕಲ್ಯಾಣ ಕರ್ನಾಟಕ ಮೀಸಲಾತಿ ಕುರಿತ ಕರ್ನಾಟಕ ಸರ್ಕಾರದ ಮಧ್ಯಂತರ ಸುತ್ತೋಲೆಯನ್ನು ಎತ್ತಿ ಹಿಡಿದು ಸದರಿ ನೇಮಕಾತಿಯ ವ್ಯಾಜ್ಯವನ್ನು ಬಗೆಹರಿಸಿ ತೀರ್ಪು ಪ್ರಕಟಿಸಿದೆ.

ನೇಮಕಾತಿಗೆ ಮುಂದೆ ಯಾವುದೇ ಕಾನೂನಾತ್ಮಕ ತೊಡಕುಗಳು ಎದುರಾಗದಂತೆ ದಯವಿಟ್ಟು ಸರ್ಕಾರದ ಕಡೆಯಿಂದಲೇ ಗೌರವಾನ್ವಿತ ಉಚ್ಛನ್ಯಾಯಾಲಯಕ್ಕೆ ಕೇವಿಯಟ್ ಸಲ್ಲಿಸಬೇಕೆಂದು ಅಭ್ಯರ್ಥಿಗಳು ಆಗ್ರಹಿಸಿದರು. ಸಚಿವರು ಕೊಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ನಾಳೆಯೇ ಕೇವಿಯಟ್ ಸಲ್ಲಿಸಬೇಕೆಂದು ಸೂಚಿಸಿದರು.

ಈಗಾಗಲೇ ನೇಮಕಾತಿ ಆರಂಭವಾಗಿ 3 ವರ್ಷಗಳು ಮುಗಿಯುತ್ತಿದ್ದು, ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಖಾಯಂ ಪ್ರಾಧ್ಯಾಪಕರ ನೇಮಕಾತಿ ಅತ್ಯಂತ ಜರೂರಾಗಬೇಕಿದೆ.

ಅಂತಿಮ ಆಯ್ಕೆ ಪಟ್ಟಿಯಲ್ಲಿರುವಂತಹ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳೆಲ್ಲರೂ ಈಗಾಗಲೇ ಮಾನಸಿಕವಾಗಿ ಕುಗ್ಗಿ ಹೋಗಿದ್ದೇವೆ. ನೇಮಕಾತಿ ಯಾವಾಗ ಆರಂಭವಾಗಿ, ನೇಮಕಾತಿ ಆದೇಶವನ್ನು ಯಾವಾಗ ಪಡೆಯುತ್ತೇವೆ ಎಂಬ ಚಿಂತೆಯಲ್ಲೇ ದಿನದೊಡುವಂತಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ.

ಇತ್ತ ಪದವಿ ವಿದ್ಯಾರ್ಥಿಗಳಿಗೆ ಬೋಧಿಸಲು ಖಾಯಂ ಪ್ರಾಧ್ಯಾಪಕರಿಲ್ಲದಂತಾಗಿದೆ. ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಕಾಪಾಡುವ ಇಚ್ಛಾಶಕ್ತಿಯನ್ನು ಸರ್ಕಾರ ಮಾಡಬೇಕಿದೆ.

ಆಯ್ಕೆಯಾದ ಎಲ್ಲಾ ಸಹಾಯಕ ಪ್ರಾಧ್ಯಾಪಕರಿಗೆ ಉದ್ಯೋಗ ನೀಡುವ ಮೂಲಕ ನಿರುದ್ಯೋಗವನ್ನು ಹೋಗಲಾಡಿಸಬೇಕು. ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ನೆರವಾಗಬೇಕಿದೆ ಎಂದು ಅಭ್ಯರ್ಥಿಗಳು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಳದ ನಾಗಲಕ್ಷ್ಮೀ, ಪ್ರಿಯಾಂಕ, ಜಯಶಂಕರ್,  ರಮೇಶ್, ಅಶೋಕ್, ಯದುಕುಮಾರ್, ಯಲ್ಲಪ್ಪ, ಮತ್ತಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು