ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಖಾಸಗಿ ಲಾಬಿಗಳಿಂದ ಸರಕಾರಿ ಆಸ್ಪತ್ರೆಗಳನ್ನು ಉಳಿಸಲು ಜನತೆ ಬೀದಿಗಿಳಿಯಬೇಕಿದೆ – ಡಾ. ಕೃಷ್ಣಪ್ಪ ಕೊಂಚಾಡಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಖಾಸಗಿ ಲಾಬಿಗಳಿಂದ ಸರಕಾರಿ ಆಸ್ಪತ್ರೆಗಳನ್ನು ಉಳಿಸಲು ಜನತೆ ಬೀದಿಗಿಳಿಯಬೇಕಿದೆ – ಡಾ. ಕೃಷ್ಣಪ್ಪ ಕೊಂಚಾಡಿ

ದಕ್ಷಿಣ ಕನ್ನಡ : ಬೋಂದೆಲ್‌ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಸಿಪಿಐಎಂ ನಿಂದ ಬೃಹತ್ ಮಾನವ ಸರಪಳಿ ಕಾರ್ಪೊರೇಟ್ ಕುಳಗಳು ಆರೋಗ್ಯ ರಂಗಕ್ಕೆ ಪ್ರವೇಶ ಪಡೆದ ತರುವಾಯ ಜನ ಸಾಮಾನ್ಯರಿಗೆ ಅಗತ್ಯ ಚಿಕಿತ್ಸೆಗಳು ಕೈಗೆಟುಕದಷ್ಟು ದುಬಾರಿಯಾಗಿದೆ. ಖಾಸಗಿ ಆಸ್ಪತ್ರೆ, ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಹಿತಾಸಕ್ತಿಗಳಿಗೆ ಪೂರಕವಾಗಿರುವ ಸರಕಾರಗಳು ಈಗ ಸರಕಾರಿ ಆರೋಗ್ಯ ಸೇವೆಗಳನ್ನು ದುರ್ಬಲಗೊಳಿಸುವ, ಪಿಪಿಪಿ ಮಾದರಿಯನ್ನು ಸರಕಾರಿ ಆರೋಗ್ಯ ಸೇವೆಗಳಿಗೆ ಅನ್ವಯಿಸುವ ಅಪಾಯಕಾರಿ ನಡೆಗಳನ್ನು ಪ್ರದರ್ಶಿಸುತ್ತಿದೆ. ಅದರ ಭಾಗವಾಗಿಯೆ ದಕ್ಷಿಣ ಕನ್ನಡ‌ ಜಿಲ್ಲೆಯ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಧಾರೆಯೆರೆದು ಕೊಡುವ ಆದೇಶ ಹೊರಡಿಸಿದೆ. ಇದರಿಂದಾಗಿ ರೋಗಗಳಿಗೆ ಸೂಕ್ತ ಚಿಕಿತ್ಸೆ ಪಡೆಯುವ ಹಕ್ಕಿನಿಂದ ಜನಸಾಮಾನ್ಯರು ಮತ್ತಷ್ಟು ವಂಚಿತರಾಗಲಿದ್ದಾರೆ. ಇಂತಹ ಸ್ಥಿತಿಯಲ್ಲಿ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಲಾಬಿಗಳಿಂದ ಉಳಿಸಲು ಜನತೆ ಬೀದಿಗಿಳಿದು ಹೋರಾಟ ನಡೆಸಬೇಕಿದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ. ಕೃಷ್ಣಪ್ಪ ಕೊಂಚಾಡಿ ಹೇಳಿದರು. ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಹಸ್ತಾಂತರಿಸುವ ಸರಕಾರದ ಆದೇಶ ಕೈ ಬಿಡಬೇಕು, ಮಂಗಳೂರಿನಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದಯದ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಬೇಕು, ಸರಕಾರಿ ಆಸ್ಪತ್ರೆ ಗಳನ್ನು ಬಲಪಡಿಸಬೇಕು ಎಂಬ ಬೇಡಿಕೆ ಮುಂದಿಟ್ಟು ಬೋಂದೆಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಸಿಪಿಐಎಂ ಮಂಗಳೂರು ಉತ್ತರ ಸಮಿತಿ ನಡೆಸಿದ ಮಾನವ ಸರಪಳಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಚಿವ ಯು ಟಿ ಖಾದರ್ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ವಕ್ತಾರರಂತೆ ಮಾತನಾಡುತ್ತಿದ್ದಾರೆ : ಮುನೀರ್ ಕಾಟಿಪಳ್ಳ ಆರೋಪ

ತರುವಾಯ ಮಾತನಾಡಿದ ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಆರೋಗ್ಯ ಸಚಿವ ಯು ಟಿ ಖಾದರ್ ಅವರು ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ವಕ್ತಾರರಂತೆ ಮಾತನಾಡುತ್ತಿದ್ದಾರೆ. ಖಾಸಗಿ ಮೆಡಿಕಲ್ ಕಾಲೇಜುಗಳ ಮುಂದೆ ಸರಕಾರಿ ಆಸ್ಪತ್ರೆಗಳನ್ನು ಕುಬ್ಜಗೊಳಿಸಿ, ತನ್ನದೇ ಅರೋಗ್ಯ ಇಲಾಖೆಯನ್ನು ಗೌಣಗೊಳಿಸಿ ಹಗುರವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಚಿವ ಖಾದರ್ ಅವರಿಗೆ ಖಾಸಗಿ ಕಾರ್ಪೊರೇಟ್ ಆಸ್ಪತ್ರೆಗಳ ಮೇಲಿರುವ ಕಾಳಜಿ ಸರಕಾರಿ ಆಸ್ಪತ್ರೆಗಳ ಮೇಲಿಲ್ಲ ಎಂದು ಕಟುವಾಗಿ ಆರೋಪಿಸಿದರು.ತರುವಾಯ ಸೇರಿದ ಕಾರ್ಯಕರ್ತರು ಬೋಂದೆಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಕೈ ಕೈ ಹಿಡಿದು ಮಾನವ ಸರಪಳಿ ನಿರ್ಮಿಸಿದರು, ಸರಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಪ್ರಸ್ತಾಪ ಕೈ ಬಿಡುವಂತೆ ಘೋಷಣೆ ಕೂಗಿದರು.ಸಿಪಿಐಎಂ ಮಂಗಳೂರು ಉತ್ತರ ಸಮಿತಿ ಕಾರ್ಯದರ್ಶಿ ಪ್ರಮೀಳಾ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಪಿಐಎಂ ಉತ್ತರ ಸಮಿತಿಯ ಪ್ರಮುಖರಾದ ರವಿಚಂದ್ರ ಕೊಂಚಾಡಿ, ಶ್ರೀನಾಥ್ ಕುಲಾಲ್, ಕೃಷ್ಣ ತಣ್ಣೀರು ಬಾವಿ, ನ್ಯಾಯವಾದಿ ಸುನಂದ ಕೊಂಚಾಡಿ, ನೌಷದ್ ಬಾವು ಪಂಜಿಮೊಗರು, ನಿತಿನ್ ಬಂಗೇರ, ಮುಸ್ತಫಾ ಪಂಜಿಮೊಗರು, ಅಶೋಕ್ ಶ್ರೀಯಾನ್, ಶಶಿ ಗುಂಡಳಿಕೆ, ಶಶಿಧರ ಶಕ್ತಿನಗರ, ಪ್ರವೀಣ್ ಕೊಂಚಾಡಿ, ಆಶಾ ಬೋಳೂರು ಮಾನವ ಸರಪಳಿಯ ನೇತೃತ್ವವನ್ನು ವಹಿಸಿದ್ದರು.

ವಿಷಯಗಳು: #karnataka #news #state politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು