ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕುವೆಂಪು ರಚಿಸಿದ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಸರ್ವೋದಯ ತತ್ವ ಅಡಗಿದೆ: ಡಾ.ಸಿ. ಕೊಟ್ರೇಶ್

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಕುವೆಂಪು ರಚಿಸಿದ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಸರ್ವೋದಯ ತತ್ವ ಅಡಗಿದೆ: ಡಾ.ಸಿ. ಕೊಟ್ರೇಶ್

ಕುವೆಂಪು ರಚಿಸಿದ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಸರ್ವೋದಯ ತತ್ವವಿದೆ. ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯುವದರ ಮೂಲಕ ಸಮನ್ವಯ ಮತ್ತು ಪೂರ್ಣದೃಷ್ಠಿಯ ಹರಿಕಾರರಾಗಿದ್ದಾರೆ. ಅವರ ವೈಚಾರಿಕತೆ ಮತ್ತು ವೈಜ್ಞಾನಿಕ ದೃಷ್ಠಿಕೋನವನ್ನು ಎಲ್ಲರೂ ಅನುಸರಿಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸಿ. ಕೊಟ್ರೇಶ ಅವರು ಹೇಳಿದರು.

ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬಳ್ಳಾರಿ ಜಿಲ್ಲಾ ಘಟಕ ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಕನ್ನಡ ಅಧ್ಯಯನ ವಿಭಾಗದ ಸಂಯುಕ್ತಾಶ್ರಯದಲ್ಲಿ ‘ದಿ.ಕೆ.ವಿ.ತಿರುಪಾಲಪ್ಪ ಸ್ಮಾರಕ ದತ್ತಿ ಕಾರ್ಯಕ್ರಮ’ದಡಿ ಬುಧವಾರ ಏರ್ಪಡಿಸಿದ್ದ ‘ಕುವೆಂಪು ಸಾಹಿತ್ಯದಲ್ಲಿ ವೈಚಾರಿಕತೆ’ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿಜ್ಞಾನ ಮತ್ತು ಧರ್ಮವು ಕುವೆಂಪು ಅವರ ಸಾಹಿತ್ಯದ ವೈಚಾರಿಕತೆಯಾಗಿದೆ. ಮನುಜ ಮತ-ವಿಶ್ವ ಪಥ, ಸರ್ವೋದಯ ಪೂರ್ಣ ದೃಷ್ಟಿ ಸಮನ್ವಯತೆಯನ್ನು ಕುವೆಂಪು ಅವರ ಸಾಹಿತ್ಯದ ಮೂಲಕ ಕೊಟ್ಟ ನಿದರ್ಶನಗಳಾಗಿವೆ. ಇವುಗಳನ್ನು ಅರಗಿಸಿಕೊಂಡು ಬೆಳೆದಷ್ಟೂ ಕನ್ನಡ ಸಾಹಿತ್ಯವು ಇನ್ನು ಹೆಚ್ಚು ಶ್ರೀಮಂತವಾಗುತ್ತದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಅವರು ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಹಲವಾರು ವರ್ಷಗಳ ಇತಿಹಾಸ ಹೊಂದಿದೆ. ಅಖಿಲ ಭಾರತ ಸಮ್ಮೇಳನ ಕನ್ನಡ ಸಾಹಿತ್ಯವನ್ನು ನೆನಪು ಮಾಡಿಕೊಳ್ಳುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಅಯೋಜಿಸಲಾಗುತ್ತಿದೆ ಎಂದರು.

ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಮುನಿರಾಜು ಮಾತನಾಡಿ, ಕುವೆಂಪು ಅವರು ಯಾವುದೇ ಅಧಿಕಾರ ಸ್ಥಾನಮಾನಕ್ಕೆ ಆಸೆ ಪಟ್ಟಿರಲಿಲ್ಲ. ವಿದ್ಯಾರ್ಥಿಗಳು ಅವರಂತೆ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು. ಹೈದರಾಬಾದ್ ಕರ್ನಾಟಕದಲ್ಲಿ ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಬೇಕು. ಮುಂಬರುವ ದಿನಗಳಲ್ಲಿ ದಿ.ಕೆ.ವಿ. ತಿರುಪಾಲಪ್ಪ ಸ್ಮಾರಕ ಕನ್ನಡ ಭವನ ನಿರ್ಮಾಣ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿ.ವಿ ಯ ಅಕಾಡೆಮಿಕ್ ಕೌನ್ಸಿಲ್‌ನ ಮಾಜಿ ಸದಸ್ಯ ವೆಂಕಟೇಶ ಹೆಗಡೆ, ವಿವಿಯ ಸಿಂಡಿಕೇಟ್ ಮಾಜಿ ಸದಸ್ಯ ಜಯಪ್ರಕಾಶ್ ಗೌಡ, ಕಲಾ ನಿಕಾಯದ ಡೀನರಾದ ಪ್ರೊ.ಎನ್ ಶಾಂತಾನಾಯ್ಕ್, ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಪ್ರೊ.ರಾಬರ್ಟ ಜೋಷ್, ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಿ.ಕೆ.ಸಂತೋಷ್ ವೇದಿಕೆ ಮೇಲೆuಟಿಜeಜಿiಟಿeಜ ಉಪಸ್ಥಿತರಿದ್ದರು.

ವಿವಿಯ ಕನ್ನಡ ಅಧ್ಯಯನ ವಿಭಾಗದ ಉಪನ್ಯಾಸಕ ಡಾ.ಕೆ.ಎಸ್ ಶಿವಪ್ರಕಾಶ ನಿರೂಪಿಸಿದರು. ಡಾ.ರಂಗನಾಥ ಎನ್ ವಂದಿಸಿದರು. ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು