ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಅಧರ್ಮದ ಮತ್ತು ಅನ್ಯಾಯದ ಕೆಲಸ ಮಾಡದಿರುವುದೇ ದೇವರ ಪೂಜೆ – ಸಿದ್ಧರಾಮಯ್ಯ

ಬೆಂಗಳೂರು: ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬೆಂಗಳೂರಿನಲ್ಲಿ ತಿಳಿಸಿದರು.

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಅಧರ್ಮದ ಮತ್ತು ಅನ್ಯಾಯದ ಕೆಲಸ ಮಾಡದಿರುವುದೇ ದೇವರ ಪೂಜೆ – ಸಿದ್ಧರಾಮಯ್ಯ

ಬೆಂಗಳೂರು: ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬೆಂಗಳೂರಿನಲ್ಲಿ ತಿಳಿಸಿದರು.

ಅವರು ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

“ನಾನು ನಾಸ್ತಿಕನಲ್ಲ – ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾತ್ತೇವೆ, ಗುಡಿ ಕಟ್ಟುತ್ತೇವೆ, ಪೂಜಿಸುತ್ತೇವೆ” ಎಂದು ಅವರು ಹೇಳಿದರು.

ಯಾವುದೇ ಧರ್ಮ ಜಾತಿ-ಧರ್ಮ ಆಧಾರದ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖಿಯಾಗಿದ್ದ. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟ. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದ. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇವರೆಲ್ಲಾ ಸಕುಟುಂಬಸ್ಥರು ಎಂದು ಅವರು ತಮ್ಮ ಭಾಷಣದಲ್ಲಿ ನುಡಿದರು.

ಮುಂದುವರೆದು ಮಾತನಾಡಿದ ಅವರು “

ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯ ಶ್ರೀರಾಮನ ಆದರ್ಶ ಮತ್ತು ವ್ಯಕ್ತಿತ್ವದಲ್ಲಿದೆ. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು ಎನ್ನುವುದೇ ರಾಮಾಯಣ, ಮಹಾಭಾರತದ ಸಂದೇಶ.

ಪರಿಶಿಷ್ಠ ಪಂಗಡ ಸಮುದಾಯದ ವಾಲ್ಮೀಕಿ ಅವರು ರಾಮಾಯಣವನ್ನು ಬರೆದು ವಿಶ್ವಕ್ಕೆ ಕೊಟ್ಟರು. ದೇವರು ನಮ್ಮ ಆತ್ಮ ಮತ್ತು ಶರೀರದಲ್ಲೇ ಇದ್ದಾನೆ ಎಂದು ಬಸವಣ್ಣನವರು ನುಡಿದರು. ದೇಹವೇ ದೇಗುಲ ಎನ್ನುವ ಸಂದೇಶವನ್ನು ಮನುಷ್ಯ ಪ್ರಪಂಚಕ್ಕೆ ನೀಡಿದ್ದಾರೆ.

ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು. ಜೈ ಶ್ರೀರಾಮ್ ಎಂದು ಘೋಷಣೆ ಮೂಲಕ ನನ್ನ ಮಾತು ಮುಗಿಸುತ್ತೇನೆ.” ಎಂದು ಜೈ ಶ್ರೀರಾಮ್‌ ಘೋಷಣೆಯೊಂದಿಗೆ ತಮ್ಮ ಭಾಷಣ ಮುಗಿಸಿದರು.

ಕೊಪ್ಪಳ: ಒಟ್ಟಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಹಿಂದೂ, ಮುಸ್ಲಿಮರು

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು