ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಿರಿಯ ಚಿಂತಕ ಪ್ರೊ.ಮುಝಫರ್ ಹುಸೇನ್ ಅಸ್ಸಾದಿ ನಿಧನ; ಮುಖ್ಯಮಂತ್ರಿ ಸಂತಾಪ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಹಿರಿಯ ಚಿಂತಕ ಪ್ರೊ.ಮುಝಫರ್ ಹುಸೇನ್ ಅಸ್ಸಾದಿ ನಿಧನ; ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಹಿರಿಯ ವಿದ್ವಾಂಸ, ಚಿಂತಕ, ಲೇಖಕ, ಮೈಸೂರು ವಿವಿಯ ಹಂಗಾಮಿ ಕುಲಪತಿಯಾಗಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದ ಪ್ರೊ.ಮುಝಫರ್ ಹುಸೇನ್ ಅಸ್ಸಾದಿ ಅವರು ಶುಕ್ರವಾರ ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.

ಪ್ರೊ.ಮುಝಫರ್ ಅಸ್ಸಾದಿ ಅವರು ಬುಡಕಟ್ಟು ಸಮುದಾಯದವರ ಬದುಕು, ಜೀವನ ಶೈಲಿಯ ಬಗ್ಗೆ ಅಪಾರವಾದ ಅಧ್ಯಯನ ನಡೆಸಿದ್ದಾರೆ. ಆದಿವಾಸಿಗಳ ಸ್ಥಳಾಂತರಕ್ಕೆ ನೇಮಿಸಿದ್ದ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೃಷಿ ಅಧ್ಯಯನ ಕ್ಷೇತ್ರ, ಜಾಗತೀಕರಣ, ಗಾಂಧೀವಾದ, ರಾಜಕೀಯ ಸಮಾಜಶಾಸ್ತ್ರ, ಪ್ರಜಾಪ್ರಭುತ್ವ ಸಿದ್ಧಾಂತ, ಸಾಮಾಜಿಕ ಚಳವಳಿಗಳು, ತುಲನಾತ್ಮಕ ಸರ್ಕಾರ ಮತ್ತು ಭಾರತದಲ್ಲಿ ರಾಜಕೀಯ, ಮಾನವ ಹಕ್ಕುಗಳು, ಜಾಗತಿಕ ರಾಜಕೀಯ ಸಿದ್ಧಾಂತ ಮೊದಲಾದ ವಿಚಾರಗಳ ಕುರಿತು ಅಳವಾದ ಅಧ್ಯಯನ ಮಾಡಿ ವಿಷಯ ಮಂಡನೆ ಮಾಡಿದ್ದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ

ಅಸ್ಸಾದಿಯವರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಹೇಳಿಕೆಯಲ್ಲಿ “ನಮ್ಮೆಲ್ಲರಿಗೆ ಪ್ರೀತಿಪಾತ್ರರಾಗಿದ್ದ ಹಿರಿಯ ವಿದ್ವಾಂಸ ಮತ್ತು ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.

ಪ್ರೊ.ಅಸ್ಸಾದಿ ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು. ಅವರ ಅಗಲಿಕೆಯಿಂದ ನಾಡು ಬಡವಾಗಿದೆ, ಅವರ ಅಗಲಿಕೆಯಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕಷ್ಟ.

ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್‌ಪೂರ್ಣ ಬರವಣಿಗೆ ಮತ್ತು ಉಪನ್ಯಾಸಗಳ ಮೂಲಕ ಜನಪ್ರಿಯರಾಗಿದ್ದ ಪ್ರೊ.ಅಸ್ಸಾದಿ ಅವರು ಕನ್ನಡದ ಹೆಮ್ಮೆಯ ಪುತ್ರ.

ವರ್ಷಗಳಿಂದ ನನ್ನ ಹಿತೈಷಿಯಾಗಿ ರಾಜಕೀಯವಾಗಿ ಸದಾ ನನ್ನ ಏಳಿಗೆಯನ್ನು ಹಾರೈಸುತ್ತಿದ್ದ ಪ್ರೊ.ಅಸ್ಸಾದಿ ಅವರ ಸಾವು ವೈಯಕ್ತಿಕವಾಗಿಯೂ ನನ್ನ ಪಾಲಿಗೆ ದೊಡ್ಡ ನಷ್ಟ.

ಪ್ರೊ.ಅಸ್ಸಾದಿ ಅವರನ್ನು ಕಳೆದುಕೊಂಡ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ತಿಳಿಸಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು