ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಿಂತನೆ : ಸಚಿವ ಎಸ್.ಮಧುಬಂಗಾರಪ್ಪ

PPeepal Media

Peepal Media • ರಾಜ್ಯ

• 2 ನಿಮಿಷದ ಓದು

ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಿಂತನೆ : ಸಚಿವ ಎಸ್.ಮಧುಬಂಗಾರಪ್ಪ

ಶಿವಮೊಗ್ಗ : ನವೆಂಬರ್ 27 : ಮಲೆನಾಡಿನ ಜನರ ಆರಾಧ್ಯದೈವ ಶ್ರೀ ರೇಣುಕಾದೇವಿ ಚಂದ್ರಗುತ್ತಿ ಕ್ಷೇತ್ರದ ವಿಕಾಸಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚನೆ, 12ನೇ ಶತಮಾನದ ಪ್ರಸಿದ್ಧ ಶರಣ ಹಾಗೂ ಮೊದಲ ಸಂಸತ್ತಿನ ಮೊದಲ ಪೀಠಾಧ್ಯಕ್ಷ ಅಲ್ಲಮಪ್ರಭುದೇವರ ಜನ್ಮಸ್ಥಳ ಬಳ್ಳಿಗಾವೆ ಹಾಗೂ ಶಿವಮೊಗ್ಗ ನಗರದಲ್ಲಿ ನೂತನವಾಗಿ ಹೆಸರಿಸಲಾದ ಅಲ್ಲಮಪ್ರಭು(ಪ್ರೀಡಂ ಪಾರ್ಕ್) ಮೈದಾನವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವುದಾಗಿ ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.


ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ಸಮಾಲೋಚನೆ ನಡೆಸಿದಂತೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಕಟ್ಟಡ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಕಟ್ಟಡಗಳನ್ನು ಒಂದೇ ಕಟ್ಟಡ ಸಂಕೀರ್ಣದಲ್ಲಿ ನಿರ್ಮಿಸಲು ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಹಿಂದಿನ ನಿವೇಶನವನ್ನು ಕಾಯ್ದಿರಿಸಲಾಗಿದ್ದು, ಜಿಲ್ಲೆಯ ಜನರಿಗೆ ಎಲ್ಲಾ ರೀತಿಯ ಅನುಕೂಲವಾಗುವಂತೆ ಅತ್ಯಾಧುನಿಕ ಹಾಗೂ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಲು ಮುಂದಿನ ಬಜೆಟ್‌ನಲ್ಲಿ ಅಗತ್ಯ ಅನುದಾನ ಕಾಯ್ದಿರಿಸಲು ಮಾನ್ಯ ಮುಖ್ಯಮಂತ್ರಿಗಳನ್ನು ಕೋರಲಾಗುವುದು. ಈಗಾಗಲೇ ಈ ಸಂಬಂಧ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ಸಮಾಲೋಚಿಸಿದ್ದು, ಮುಖ್ಯಮಂತ್ರಿಗಳು ಉತ್ಸುಕರಾಗಿರುವುದಾಗಿ ತಿಳಿಸಿದ ಅವರು, ನಿರ್ಮಿಸುವ ಕಟ್ಟಡದ ವಿನ್ಯಾಸವು ಮಾದರಿ ಹಾಗೂ ಅತ್ಯಾಧುನಿಕವಾಗಿರುವಂತೆ ನೋಡಿಕೊಳ್ಳುವಂತೆ ಅವರು ಸಲಹೆ ನೀಡಿದರು.


ನಗರ ಅಲ್ಲಮಪ್ರಭು ಮೈದಾನದ ಅಭಿವೃದ್ಧಿ ಲೋಕೋಪಯೋಗಿ ಇಲಾಖೆಯು ಸುಮಾರು 5ಕೋಟಿ ರೂ.ಗಳನ್ನು ಕಾಯ್ದಿರಿಸಿದೆ. ಈ ಅನುದಾನಕ್ಕೆ ಸಹಕಾರಿಯಾಗುವಂತೆ ಸರ್ಕಾರದಿಂದ ಇನ್ನಷ್ಟು ಅನುದಾನವನ್ನು ಬಿಡುಗಡೆ ಮಾಡುವಂತೆ ಮಾನ್ಯ ಮುಖ್ಯಮಂತ್ರಿಗಳನ್ನು ಕೋರಲಾಗುವುದು. ಮೈದಾನವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ, ಸಲ್ಲಿಸುವಂತೆ ಅವರು ಲೋಕೋಪಯೋಗಿ ಇಲಾಖೆಯ ಅಭಿಯಂತರರಿಗೆ ಸೂಚಿಸಿದರು.


ನಗರದ ಹೊರವಲಯದಲ್ಲಿ ಆರಂಭಗೊAಡಿರುವ ಷಾಹಿ ಗಾರ್ಮೆಂಟ್ಸ್ಗೆ ಭೂಮಿ ಮಂಜೂರಾತಿಯಲ್ಲಿ ನಿಯಮ ಪಾಲನೆಯಾಗದಿರುವುದು ಕಂಡುಬಂದಿದೆ. ಅಲ್ಲದೇ ಸದರಿ ಕೈಗಾರಿಕೆಯಿಂದಾಗಿ ಭಾರೀ ಪ್ರಮಾಣದ ಪರಿಸರ ಮಾಲಿನ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರುಗಳು ಕೇಳಿಬರುತ್ತಿವೆ. ಸಂಬಂಧಿಸಿದ ಇಲಾಖಾಧಿಕಾರಿಗಳು ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೂಡಲೇ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.


ನಗರದಲ್ಲಿ ಫುಡ್‌ಪಾರ್ಕ್ ನಿರ್ಮಾಣಕ್ಕೆ ಈಗಾಗಲೇ ಮಂಜೂರಾತಿ ದೊರೆತಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದ ಸಚಿವರು, 660ಕೋಟಿ ರೂ.ಗಳ ವೆಚ್ಚದಲ್ಲಿ ಶರಾವತಿಯಿಂದ ಸೊರಬ, ಆನವಟ್ಟಿ ಮತ್ತು ಶಿರಾಳಕೊಪ್ಪ ಪಟ್ಟಣ ಪ್ರದೇಶಕ್ಕೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿಗೆ ಶೀಘ್ರ ಚಾಲನೆ ದೊರೆಯಲಿದೆ. ಅಂತೆಯೇ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯದಿಂದ ಶಿಕಾರಿಪುರ ಪಟ್ಟಣದ ನಿವಾಸಿಗಳಿಗೆ ವರ್ಷಪೂರ್ತಿ ಶುದ್ಧಕುಡಿಯುವ ನೀರು ಒದಗಿಸುವುದಲ್ಲದೇ ಕೃಷಿ ಚಟುವಟಿಕೆಗಳಿಗೂ ನೀರು ಒದಗಿಸಲು ಇರುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಅವರು ಸೂಚಿಸಿದರು.


ಚಂದ್ರಗುತ್ತಿ ಧರ್ಮಕ್ಷೇತ್ರದ ದೇವಾಲಯದ ಸರ್ವಾಂಗೀಣ ವಿಕಾಸ ಹಾಗೂ ಪ್ರವಾಸಿತಾಣವನ್ನಾಗಿ ಪರಿವರ್ತಿಸಲು ಉದ್ದೇಶಿಸಿದ್ದು, ಅರಣ್ಯ ಇಲಾಖೆಯ ಅನುಮೋದನೆಗಾಗಿ ಕಡತ ಮಂಡಿಸಲಾಗಿದೆ. ಈ ಸಂಬಂಧ ಅರಣ್ಯ ಇಲಾಖಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಮುಂದಿನ ಜನವರಿ ಮೊದಲ ಮಾಸಾಂತ್ಯದೊಳಗಾಗಿ ವಿಮಾನದ ನೈಟ್ ಲ್ಯಾಂಡಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ. ಇದರಿಂದಾಗಿ ವಿಮಾನ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡಲು ಸೂಚಿಸಲಾಗಿದೆ. ಮುಂದಿನ ತಿಂಗಳಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲೆಯ ಹೊಸನಗರದಲ್ಲಿ ನಡೆಸಲು ಈಗಾಗಲೇ ನಿರ್ಣಯಿಸಲಾಗಿದೆ ಎಂದರು.


ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು