ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಜಾತಿ ವ್ಯವಸ್ಥೆ, ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು: ಸಿ.ಎಂ.ಸಿದ್ದರಾಮಯ್ಯ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಜಾತಿ ವ್ಯವಸ್ಥೆ, ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು: ಸಿ.ಎಂ.ಸಿದ್ದರಾಮಯ್ಯ

ಮೈಸೂರು ಮೇ 23: ಜಾತಿ ವ್ಯವಸ್ಥೆ , ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು.

ವಿಶ್ವಮೈತ್ರಿ ಬುದ್ಧ ವಿಹಾರ ವೈಶಾಖ ಬುದ್ಧಪೂರ್ಣಿಮ ಹಾಗೂ ಭಗವಾನ್ ಬುದ್ಧರ 2568ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಸಮಾನತೆ ಪೋಷಿಸುವ ಜಾತಿ ವ್ಯವಸ್ಥೆ ಅಳಿಸಲು ಬುದ್ಧ, ಬಸವ, ಅಂಬೇಡ್ಕರ್ ರೀತಿ ಹಲವು ಮಹನೀಯರು ಶ್ರಮಿಸಿದರು ಎಂದು ವಿವರಿಸಿದರು.

ಅತ್ಯಂತ ಕಡು ಬಡವ ಮೇಲ್ಜಾತಿಯವರನ್ನು ನಾವು ಬುದ್ದಿ, ಸ್ವಾಮಿ ಅಂತ ಗೌರವಿಸುತ್ತೇವೆ. ಅದೇ ಅನೂಲಸ್ಥ ಕೆಳ ಜಾತಿಯವರನ್ನು ಏಕವಚನದಲ್ಲಿ ಅಗೌರವದಿಂದ ಕರೆಯುತ್ತೇವೆ. ಇದೇ ಗುಲಾಮಗಿರಿ ಮನಸ್ಥಿತಿ. ಈ ಮನಸ್ಥಿತಿಯನ್ನು ಅಳಿಸಲು ಬುದ್ಧ, ಬಸವ ಅಂಬೇಡ್ಕರ್ ಸೇರಿ ಹಲವರು ಶ್ರಮಿಸಿದರು.

ಪಟ್ಟಭದ್ರ ಹಿತಾಸಕ್ತಿಗಳು ಬುದ್ದ, ಬಸವ, ಅಂಬೇಡ್ಕರ್, ಗಾಂಧಿ ಕಾಲದಲ್ಲೂ ಇದ್ದರು. ಈಗಲೂ ಇದ್ದಾರೆ. ಇವರು ಸಮಾಜದ ಪ್ರಗತಿಯ ಶತ್ರುಗಳು. ಆದರೆ ನಮ್ಮ ಸಂವಿಧಾನ ಎಲ್ಲಾ ಜಾತಿ ಸಮುದಾಯಗಳಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಆದ್ದರಿಂದ ಸಂವಿಧಾನ ಜ್ಞಾನ ಸರ್ವರಿಗೂ ಅಗತ್ಯ ಎಂದರು.

ತಾವೊಬ್ಬರೇ ಶ್ರೇಷ್ಠರು ಎಂದು ಕರೆಸಿಕೊಳ್ಳುವವರು ಪುಕ್ಕಲರು

ತಾವೊಬ್ಬರೇ ಶ್ರೇಷ್ಠರು ಎಂದು ಕರೆಸಿಕೊಳ್ಳುವವರು ಬಹಳ ಪುಕ್ಕಲರಾಗಿರುತ್ತಾರೆ. ಶ್ರೇಷ್ಠತೆಯ ವ್ಯಸನ ಹೊಂದಿದ್ದ ಹಿಟ್ಲರ್ ಲಕ್ಷಾಂತರ ಮನುಷ್ಯರ ಕೊಲೆಗೆ ಕಾರಣರಾದರು. ಪುಕ್ಕಲರು ಮಾತ್ರ ತಾವೊಬ್ಬರೇ ಶ್ರೇಷ್ಠರು ಎಂದು ಬಿಂಬಿಸಿಕೊಳ್ಳಲು ಒದ್ದಾಡುತ್ತಾರೆ ಎಂದು ವ್ಯಂಗ್ಯವಾಡಿದರು.

ಬುದ್ಧ-ಬಸವ-ಕುವೆಂಪು ಹಾದಿಯಲ್ಲಾದರೂ ನಡೆಯಬೇಕು

ನಾವುಗಳು ಬುದ್ಧ-ಬಸವ-ಕುವೆಂಪು ಆಗಲು ಸಾಧ್ಯವಿಲ್ಲ. ಆದರೆ ಇವರ ಹಾದಿಯಲ್ಲಾದರೂ ನಾವು ನಡೆಯಬೇಕು. ಬಸವಣ್ಣರನ್ನು ಪೂಜಿಸುತ್ತಾ ಯಾವ ಜಾತಿ ಎಂದು ಜಾತಿವಾದ ಮಾಡುವುದು ತಪ್ಪು. ವಿದ್ಯಾವಂತರೇ ಹೆಚ್ವು ಜಾತಿವಾದಿಗಳಾಗುತ್ತಿರುವುದು ದುರಂತದ ಸಂಗತಿ. ಆದ್ದರಿಂದ ವೈಚಾರಿಕತೆ ಮತ್ತು ಮಾನವೀಯತೆ ಇರುವ ಶಿಕ್ಷಣ ವ್ಯವಸ್ಥೆ ರೂಪಿಸಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ದೇವರು ಯಾರ ಹಣೆಯಲ್ಲೂ ತಾರತಮ್ಯ, ಬಡತನವನ್ನು ಬರೆಯುವುದಿಲ್ಲ. ಹೀಗೆ ಬರೆದವರನ್ನು ದೇವರು ಎಂದು ಜನ‌ ಒಪ್ಪುವುದಿಲ್ಲ. ಅಂಬೇಡ್ಕರ್, ಬುದ್ಧ ಎಲ್ಲರೂ ಹಣೆಬರಹ ಎನ್ನುವ ಮೌಡ್ಯವನ್ನು ಅಳಿಸಿ ವೈಚಾರಿಕತೆ ಬೆಳೆಸಲು ಯತ್ನಿಸಿದರು. ಆದ್ದರಿಂದ ಅಂಬೇಡ್ಕರ್ ಅವರು ಮೌಡ್ಯವಿಲ್ಲದ ಬೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದರು.

ಜಾತಿ ವ್ಯವಸ್ಥೆ ನೀರಿನ ಬಾವಿಗೆ ಬಿದ್ದ ಕಸದಂತೆ. ಕೊಡದಲ್ಲಿ ನೀರು ಸೇದುವಾಗ ಕಸ ಪಕ್ಕಕ್ಕೆ ಸರಿಯುತ್ತದೆ. ನೀರು ಸೇದಿದ ಮೇಲೆ ಮತ್ತೆ ಕಸ ತುಂಬಿಕೊಳ್ಳುತ್ತದೆ. ಆದ್ದರಿಂದ ಕಸವನ್ನೇ ನೀರಿನಿಂದ ತೆಗೆದು ಹೊರಗೆ ಹಾಕಿದರೆ ಜಾತಿ ವ್ಯವಸ್ಥೆ ಮತ್ತು ಅಸಮಾನತೆ ಹೋಗುತ್ತದೆ ಎಂದರು.

ಈ ಅಸಮಾನತೆ ಅಳಿಸುವ ಉದ್ದೇಶದಿಂದಲೇ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಆರ್ಥಿಕವಾಗಿ ಶಕ್ತಿ ಬಂದರೆ ಸ್ವಾಭಿಮಾನಿಗಳಾಗುತ್ತಾರೆ. ಮಹಿಳೆಯರಲ್ಲಿ, ಬಡವರಲ್ಲಿ ಆರ್ಥಿಕ ಶಕ್ತಿ ತುಂಬುವ ಮೂಲಕ ಅವರನ್ನು ಸ್ವಾಭಿಮಾನಿಗಳನ್ನಾಗಿ ಮಾಡುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ಆಯುಷ್ಮಾನ್ ಡಾ.ಕಲ್ಯಾಣಸಿರಿ ಭಂತೇಜಿ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾತ್, ಮಾಜಿ ಶಾಸಕ ಸೋಮಶೇಖರ್, ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು