ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗ್ಯಾರಂಟಿ ಯೋಜನೆ ಸೌಲಭ್ಯಗಳ ಅಗತ್ಯವಿಲ್ಲದವರು ಹಿಂದಿರುಗಿಸಿ: ಸಚಿವ ಮಂಕಾಳ ವೈದ್ಯ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಗ್ಯಾರಂಟಿ ಯೋಜನೆ ಸೌಲಭ್ಯಗಳ ಅಗತ್ಯವಿಲ್ಲದವರು ಹಿಂದಿರುಗಿಸಿ: ಸಚಿವ ಮಂಕಾಳ ವೈದ್ಯ

ರಾಜ್ಯ ಸರ್ಕಾರವು ರಾಜ್ಯದಲ್ಲಿನ ಬಡ ಜನತೆಯ ಶ್ರೇಯೋಭಿವೃದ್ದಿಗಾಗಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನು, ಆರ್ಥಿಕವಾಗಿ ಮೇಲ್ವರ್ಗದಲ್ಲಿರುವ ಜನರು ಪಡೆಯುತ್ತಿದ್ದಲ್ಲಿ ಅದನ್ನು ಸ್ವಯಂ ಪ್ರೇರಣೆಯಿಂದ ಸರಕಾರಕ್ಕೆ ಹಿಂದಿರುಗಿಸುವ ಮೂಲಕ ಅರ್ಹ ವ್ಯಕ್ತಿಗಳಿಗೆ ಯೋಜನೆಯ ಪ್ರಯೋಜನ ದೊರೆಯುವಂತೆ ಮಾಡಬೇಕು ಎಂದು ರಾಜ್ಯದ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ಅವರು ಸೋಮವಾರ, ಕಾರವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿ ಕಚೇರಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಬೆಲೆ ಏರಿಕೆಯಿಂದ ಕಂಗೆಟ್ಟಿದ ರಾಜ್ಯದ ಜನತೆಗೆ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಸಬಲೀಕರಣಗೊಳ್ಳಲು ನೆರವಾಗಿದ್ದು, ಅಧಿಕಾರಕ್ಕೆ ಬಂದ 6 ತಿಂಗಳ ಒಳಗೇ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿರುವುದು ಮಾತ್ರವಲ್ಲದೇ ಈಗಾಗಲೇ ಶೇ.90 ಕ್ಕೂ ಹೆಚ್ಚು ಪ್ರಗತಿಯನ್ನು ಸಾಧಿಸಲಾಗಿದೆ. ಆದರೆ ಕೆಲವಡೆಗಳಲ್ಲಿ ಆರ್ಥಿಕ ಬಲಾಡ್ಯರು ಕೂಡಾ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದು, ಅವರು ಈ ಯೋಜನೆಗಳ ಪ್ರಯೋಜನ ಪಡೆಯುವುದನ್ನು ಸ್ವಯಂ ಪ್ರೇರಣೆಯಿಂದ ನಿಲ್ಲಿಸಬೇಕು ಎಂದರು.

ಆರೋಗ್ಯ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳಿಂದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯದೇ ವಂಚಿತರಾದ ಅರ್ಹ ಜನತೆಯÀನ್ನು ಗುರುತಿಸಿ, ಅವರಿಗೆ ಯೋಜನೆಗಳ ಸಂಪೂರ್ಣ ಪ್ರಯೋಜನ ದೊರಕಿಸುವುದು ತಾಲೂಕು ಅನುಷ್ಠಾನ ಪ್ರಾಧಿಕಾರದ ಸಮಿತಿಯ ಕರ್ತವ್ಯವಾಗಿದ್ದು, ಈ ಕುರಿತಂತೆ ಸಮಿತಿಯ ಎಲ್ಲಾ ಸದಸ್ಯರು ತಮ್ಮ ಜವಾಬ್ದಾರಿಯನ್ನು ಅರಿತು, ಯೋಜನೆಯ ಪ್ರಯೋಜನವು ಅರ್ಹರಿಗೆ ಶೇ.100 ರಷ್ಟು ತಲುಪುವಂತೆ ಕಾರ್ಯನಿರ್ವಹಿಸಬೇಕು ಎಂದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಅಧ್ಯಕ್ಷ ರಾಜೇಂದ್ರ ರಾಣೆ ಮಾತನಾಡಿ, ತಾಲೂಕು ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ವಿವರವಾದ ಪಟ್ಟಿ ಇದ್ದು, ಈ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಬಿಟ್ಟುಹೋಗಿರುವ ಅರ್ಹರನ್ನು ಗುರುತಿಸಿ, ಗ್ರಾಮೀಣ ಮಟ್ಟದಲ್ಲಿ ಶಿಬಿರಗಳನ್ನು ಆಯೋಜಿಸಿ ಅರ್ಹರಿಗೆ ಸೌಲಭ್ಯ ಒದಗಿಸಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಮಾತನಾಡಿ, ಗ್ಯಾರಂಟಿ ಯೋಜನೆಗಳ ಅವಶ್ಯಕತೆ ಇಲ್ಲದವರು ತಮಗೆ ದೊರೆಯುತ್ತಿರುವ ಸೌಲಭ್ಯಗಳನ್ನು ಬಿಟ್ಟುಕೊಡಬೇಕು, ಯೋಜನೆಯ ಪ್ರಯೋಜನ ಬಡ ಜನತೆಗೆ ಮಾತ್ರ ದೊರೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸತೀಶ್ ನಾಯ್ಕ್, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಆನಂದ್ಸಾ ಹಬೀಬ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವೀರನಗೌಡ ಪಾಟೀಲ್ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ವಿಷಯಗಳು: #karnataka #peepal #peepalmedia #politics
PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು