ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಮ್ಮ ವಿರುದ್ಧ ಹೋರಾಟ ಮಾಡಿ, ಬಿಜೆಪಿಗೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ನಮ್ಮ ವಿರುದ್ಧ ಹೋರಾಟ ಮಾಡಿ, ಬಿಜೆಪಿಗೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉತ್ತರ ಕನ್ನಡ, ಮಾರ್ಚ್ 27: “ನಮ್ಮ ವಿರುದ್ಧ ಹೋರಾಟ ಮಾಡಿದ, ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿ, ಹೊಸಮುಖಗಳನ್ನು ಕಣಕ್ಕೆ ಇಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಬುಧವಾರ ಪೂಜೆ ಸಲ್ಲಿಸಿದ ನಂತರ ಶಿವಕುಮಾರ್ ಅವರು ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಬಿಜೆಪಿ ಜೆಡಿಎಸ್ ಮೈತ್ರಿಯಾಗಿ ಹೊಸಬರನ್ನು ಕಣಕ್ಕಿಳಿಸಿ ಪ್ರಯೋಗ ಮಾಡುತ್ತಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ;

“ದಳದವರು ಆರಂಭದಲ್ಲೇ ಎಡವಿದ್ದಾರೆ. ಆ ಪಕ್ಷದಲ್ಲಿ ಜಾತ್ಯಾತೀತ ತತ್ವ ಇಲ್ಲವಾಗಿದೆ. ಅಲ್ಲಿ ಪಕ್ಷದ ವಿಚಾರವೇ ಇಲ್ಲ. ಅವರ ಕುಟಂಬದ ಸದಸ್ಯರನ್ನು ಬೇರೆ ಪಕ್ಷದಿಂದ ಕಣಕ್ಕಿಳಿಸಿದ ಮೇಲೆ ಜೆಡಿಎಸ್ ಇದೆ ಎಂದು ಹೇಳಲು ಸಾಧ್ಯವೇ?. ಇನ್ನು ಬಿಜೆಪಿಯಲ್ಲಿ ಏನೆಲ್ಲಾ ನಡೆಯುತ್ತಿದೆ ಎಂದು ನಾನು ಹೇಳುವ ಅಗತ್ಯವಿಲ್ಲ. ಅಲ್ಲಿ ಪಕ್ಷದ ಮಾಜಿ ಅಧ್ಯಕ್ಷರು, ಮಾಜಿ ಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್ ಇಲ್ಲವಾಗಿದೆ. ಪಕ್ಷಕ್ಕೆ ಭದ್ರ ಬುನಾದಿ ಹಾಕಿದವರಿಗೆ, ರಾಜ್ಯ ಪ್ರವಾಸ ಮಾಡಿದವರಿಗೆ, ನಮ್ಮ ವಿರುದ್ಧ ಹೋರಾಟ ಮಾಡಿದವರನ್ನು ಮನೆಗೆ ಕಳಿಸಿ ಹೊಸಬರನ್ನು ಕಣಕ್ಕಿಳಿಸಿದ್ದಾರೆ” ಎಂದು ತಿಳಿಸಿದರು.

ದೇವಾಲಯದ ಅರ್ಚಕರು ತಾವು ಸಿಎಂ ಆಗಬೇಕು ಎಂದು ಪೂಜೆ ಮಾಡಿದ್ದಾರೆ ಎಂದು ಕೇಳಿದಾಗ, “ಅರ್ಚಕರು ಕೇಳುವುದರಲ್ಲಿ ತಪ್ಪೇನಿದೆ. ಅವರ ಆಸೆ ಅವರು ಕೇಳಿದ್ದಾರೆ. ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ಕೆಳಗೆ ಉಪಮುಖ್ಯಮಂತ್ರಿಯಾಗಿ, ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ಯಾರು ಏನೇ ಆಸೆ ಪಟ್ಟರು ಅಂತಿಮವಾಗಿ ಪಕ್ಷ ತೀರ್ಮಾನ ಮಾಡಲಿದೆ. ಈಗ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ನಾವು ಕೆಲಸ ಮಾಡುತ್ತಿದ್ದು, ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿ ರಾಜ್ಯ ಪ್ರಗತಿ ಸಾಧಿಸಲಿ ಎಂಬುದು ನಮ್ಮ ಆಸೆ. ನಮ್ಮ ಅಭಿಮಾನಿಗಳು ಕೇಳಿದಾಗ ಅವರ ಬಾಯಿ ಮುಚ್ಚಿಸಲು ಆಗುವುದಿಲ್ಲ” ಎಂದು ತಿಳಿಸಿದರು.

ಕೇಂದ್ರ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದವರ ವಿರುದ್ಧ ಐಟಿ, ಇಡಿ ಸಿಬಿಐ ದಾಳಿ ಬಗ್ಗೆ ಕೇಳಿದಾಗ, “ಇದು ಚುನಾವಣೆ ಸಮಯ. ಪ್ರಕೃತಿ ನಿಯಮ ಹಾಗೂ ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ. ಅದು , ಡಿ.ಕೆ. ಶಿವಕುಮಾರ್, ಕೇಜ್ರಿವಾಲ್ ಪ್ರಕರಣ ಸೇರಿದಂತೆ ಏನೆಲ್ಲಾ ನಡೆಯುತ್ತಿದೆ ಎಂದು ಜನ ನೋಡುತ್ತಿದ್ದು, ಅವರೇ ಉತ್ತರ ನೀಡಲಿದ್ದಾರೆ” ಎಂದರು.

ಇಲ್ಲಿ ಪಕ್ಷ ಸಂಘಟನೆಗೆ ಕಾರ್ಯಕರ್ತರಿಗೆ ಏನು ಸೂಚನೆ ನೀಡಿದ್ದೀರಿ ಎಂದು ಕೇಳಿದಾಗ, “ಇಲ್ಲಿ ಹಿಂದುತ್ವ ಹಾಗೂ ರಾಮ ಮಂದಿರ, ಬಿಜೆಪಿ ಅಲೆ ಇಲ್ಲ. ಹೀಗಾಗಿ ಬಿಜೆಪಿ ಗ್ಯಾರಂಟಿ ಎಂದು ಹೇಳುವ ಬದಲು ಮೋದಿ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ” ಎಂದರು.

ಬಿಜೆಪಿ ಹಿಂದುತ್ವ ಪ್ರತಿಪಾದಕರಿಗೆ ಟಿಕೆಟ್ ನೀಡದೇ ಎಲ್ಲರನ್ನು ಸಮಾನವಾಗಿ ನೋಡುವ ಸಂದೇಶ ಸಾರುತ್ತಿದ್ದಾರಾ ಎಂದು ಕೇಳಿದಾಗ, “ಅವರ ಸಂದೇಶ ಏನೂ ಇಲ್ಲ, ಸಮಾನತೆಯೂ ಇಲ್ಲ. ಹೋರಾಟ ಮಾಡಿದವರಿಗೆ ವಿಶ್ರಾಂತಿ ಪಡೆಯಿರಿ ಎಂದು ಮನೆಯಲ್ಲಿ ಕೂರಿಸಿದ್ದಾರೆ” ಎಂದು ತಿಳಿಸಿದರು.

ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಸೇರ್ಪಡೆಗೆ ವಿರೋಧವಿದೆ ಎಂಬ ಪ್ರಶ್ನೆಗೆ, “ನಮ್ಮ ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಸ್ವಾಗತಿಸುತ್ತೇವೆ. ಯಾರನ್ನೂ ವಿರೋಧ ಮಾಡುವ ಪ್ರಶ್ನೆ ಇಲ್ಲ. ಪಕ್ಷ ತೀರ್ಮಾನದ ವಿರುದ್ಧ ಆಂತರಿಕವಾಗಿ ಹಾಗೂ ಬಹಿರಂಗವಾಗಿ ವಿರೋಧಿಸುವಂತಿಲ್ಲ”ಎಂದು ತಿಳಿಸಿದರು.

“ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ನಮ್ಮ ಚುನಾವಣಾ ಪ್ರಚಾರ ಕೂಡ ಆರಂಭಿಸುತ್ತಿದ್ದೇವೆ. ಹೀಗಾಗಿ ನಿನ್ನೆ ಧರ್ಮಸ್ಥಳ, ಶೃಂಗೇರಿ, ಕುಕ್ಕೆ ಸುಬ್ರಮಣ್ಯ, ಕೊಲ್ಲೂರು ಮೂಕಾಂಬಿಕೆ, ಇಡುಗುಂಜಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದೆ. ಇಂದು ಗೋಕರ್ಣದಲ್ಲಿ ಪೂಜೆ ಸಲ್ಲಿಸಿ ಮೈಸೂರಿಗೆ ತೆರಳುತ್ತಿದ್ದೇನೆ” ಎಂದು ತಿಳಿಸಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು