ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಸ್ಪೃಷ್ಯತೆ ವಿರುದ್ಧ ಸಂಘಟಿತರಾಗಿ ಮುಂಚೂಣಿಯಲ್ಲಿ ನಿಂತವರು ಡಾ.ಅಂಬೇಡ್ಕರ್ ರವರು – ಜೈ ಭೀಮ್ ಬ್ರಿಗೇಡ್ ರಾಜೇಶ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಅಸ್ಪೃಷ್ಯತೆ ವಿರುದ್ಧ ಸಂಘಟಿತರಾಗಿ ಮುಂಚೂಣಿಯಲ್ಲಿ ನಿಂತವರು ಡಾ.ಅಂಬೇಡ್ಕರ್ ರವರು – ಜೈ ಭೀಮ್ ಬ್ರಿಗೇಡ್ ರಾಜೇಶ್

ಹಾಸನ : ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನದ ಅಂಗವಾಗಿ ಮಹಾವೀರ ವೃತ್ತದಲ್ಲಿ ಅನ್ನ ಸಂತರ್ಪಣೆ, ಮಕ್ಕಳಿಗೆ ನೋಟ್ ಬುಕ್ ವಿತರಣೆ, ಸಮಾಜ ಸಾಧಕರಿಗೆ ಸನ್ಮಾನ ಮತ್ತು ಸಾರ್ವಜನಿಕರಿಗೆ ಮತ್ತು ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಮಜ್ಜಿಗೆ ವಿತರಣೆ ಕಾರ್ಯಕ್ರಮವನ್ನು ಜೈ ಭೀಮ್ ಬ್ರಿಗೇಡ್ ಸಂಘಟನೆಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ಭಾಷಣವನ್ನು ಕಾಂಗ್ರೆಸ್ ಮುಖಂಡರಾದ ಡಿ.ಪಿ. ಚಂದ್ರಶೇಖರ್ ಅವರು ಸಂವಿಧಾನದ ಆಶಯಗಳ ಬಗ್ಗೆ ಅಂಬೇಡ್ಕರ್ ಕಾನೂನು ಬಗ್ಗೆ ಅವರ ವಿದ್ಯಾಭ್ಯಾಸದ ಬಗ್ಗೆ ಹೊರ ಹೋರಾಟದ ಬಗ್ಗೆ ಗುಣಗಾನ ಮಾಡಿದರು. ಎಚ್.ಎಮ್. ಯಶವಂತ ಮಾತನಾಡಿ, ವಿಶ್ವಕ್ಕೆ ಸಮಾನತ ಸಾರಿದ ನಾಯಕ ಎಲ್ಲ ಸಮುದಾಯದ ಬಡವರಿಗೆ ಸಂವಿಧಾನದಲ್ಲಿ ಅವಕಾಶ ಮಾಡಿಕೊಟ್ಟವರು. ಅಸ್ಪೃಷ್ಯತೆಯ ವಿರುದ್ಧ ಸಂಘಟಿತರಾಗಿ ಮುಂಚೂಣಿಯಲ್ಲಿ ನಿಂತವರು. ಅಂಬೇಡ್ಕರ್ ಅಲ್ಲದೆ ಮೇಲ್ವರ್ಗದವರ ದಬ್ಬಾಳಿಕೆ ವಿರುದ್ಧ ಗಟ್ಟಿಯಾಗಿ ನಿಂತು ಕಾನೂನಿನ ಅಡಿಯಲ್ಲಿ ವಿಶ್ವಕ್ಕೆ ಸಮನತ ತೋರಿದವರು ಯಾರಾದ್ರೂ ಇದ್ರೆ ಅಂಬೇಡ್ಕರ್ ಮಾತ್ರ ಎಂದರು.

ಜೈ ಭೀಮ್ ಬ್ರಿಗೇಡ್ ಸಂಘಟನೆ ಜಿಲ್ಲಾಧ್ಯಕ್ಷ ರಾಜೇಶ್ ಮಾತನಾಡಿ, ಸಂವಿಧಾನ ಪೀಠಿಕೆ ಓದಿ ಅಂಬೇಡ್ಕರ್ ಬಾಲ್ಯದ ದಿನಗಳಲ್ಲಿ ಕಷ್ಟದ ದಿನಗಳನ್ನು ಮೇಲುಕು ಹಾಕುತ್ತಾ, ಚೌಡರ್ ಕೆರೆಯಲ್ಲಿ ನೀರು ಕುಡಿಯಲು ಬಿಡದೆ ಅವರನ್ನು ತಳಿಸಿ ಹಲ್ಲೆ ಮಾಡಿದರು. ಕಳರಾಮ ದೇವಸ್ಥಾನ ಗರ್ಭಗುಡಿ ಪ್ರವೇಶಕ್ಕೆ ಅಡ್ಡಿಪಡಿಸಿದರು. ಆಗ ಬಾಬಾ ಸಾಹೇಬರು ಏಕಾಂಗಿ ಹೋರಾಟ ಮಾಡಿ ಗರ್ಭಗುಡಿ ಪ್ರವೇಶ ಮಾಡಿ ದೇಶಕ್ಕೆ ಸಮಾನತೆಯನ್ನು ಸಾರಿದರು. ಸುಮಾರು ಎರಡು ವರ್ಷ ಹನ್ನೊಂದು ತಿಂಗಳು ಕಾಲ ಸಂವಿಧಾನ ರಚಿಸಿ ಇಡೀ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನ ರಚಿಸಿದರು. ಸರ್ವಜನಾಂಗದವರಿಗೆ ಎಲ್ಲಾ ಜಾತಿಯ ಬಡವರಿಗೆ ಮಹಿಳೆಯರಿಗೆ ನ್ಯಾಯ ಒದಗಿಸಿಕೊಟ್ಟವರು. ಅಂಬೇಡ್ಕರ್ ಇಂದು ಅವರು ಕೊಟ್ಟ ಸಂವಿಧಾನದ ಮೀಸಲಾತಡಿಯಲ್ಲಿ ನಾವೆಲ್ಲ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡುವುದಕ್ಕೆ ಅಂಬೇಡ್ಕರ್ ಕೊಟ್ಟ ಕೊಡುಗೆ ಅಪಾರ ಎಂದು ಹಳೆ ನೆನಪನ್ನು ಮೆಲುಕು ಹಾಕಿದರು. ಈ ಸಂದರ್ಭದಲ್ಲಿ ಡಿ.ಪಿ. ಚಂದ್ರಶೇಖರ್, ಎಚ್.ಎಮ್. ಯಶ್ವಂತ್, ಜನಪ್ರಿಯ ಆಸ್ಪತ್ರೆ ವೈದ್ಯರಾದ ಡಾ. ಅಬ್ದೂಲ್ ಬಶೀರ್, ದಲಿತ ಮುಖಂಡ ನಾಗರಾಜ್ ಹೆತ್ತೂರು, ಕಾರ್ಯದರ್ಶಿ ಚಂದ್ರಶೇಖರ್, ತಾಲೂಕು ಅಧ್ಯಕ್ಷರಾದ ಶಂಕರ್ ವೆಂಕಟೇಶ್ ಪೂಜಾರಿಕ, ಪ್ರಸನ್ನ ಪಾಲ್ಗೊಂಡಿದ್ದರು.
ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನಿಸಲಾಯಿತು ಹಾಗೂ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು.

ವಿಷಯಗಳು: #karnataka #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು