ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಫೇಸ್ಬುಕ್ಕಿನಲ್ಲಿ ಡಿಕೆ ಸಹೋದರರ ಕೊಲೆಗೆ ಪ್ರಚೋದನೆ ನೀಡಿದ ಆರೋಪ: ಜಯನಗರದ ಯುವಕನ ಬಂಧನ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಫೇಸ್ಬುಕ್ಕಿನಲ್ಲಿ ಡಿಕೆ ಸಹೋದರರ ಕೊಲೆಗೆ ಪ್ರಚೋದನೆ ನೀಡಿದ ಆರೋಪ: ಜಯನಗರದ ಯುವಕನ ಬಂಧನ

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಿಕೆ ಸುರೇಶ್ ಅವರ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಮತ್ತು ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡಿದ ವ್ಯಕ್ತಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಕಾಂಗ್ರೆಸ್ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಹಲವು ವಿಷಯಗಳನ್ನು ಪೋಸ್ಟ್ ಮಾಡಿದ್ದ.

ಬಂಧಿತ ವ್ಯಕ್ತಿಯನ್ನು ರಂಜಿತ್ ಆರ್ ಎಂ ಎಂದು ಗುರುತಿಸಲಾಗಿದೆ.

ಇಂತಹ ಪೋಸ್ಟುಗಳಿಗೆ ಆಕ್ಷೇಪ ವ್ಯಕ್ತಪಡಿಸಿ ಜಯನಗರ ಯುವ ಕಾಂಗ್ರೆಸ್ ಮುಖಂಡ ಶರತ್ ಅವರು ಪೊಲೀಸರನ್ನು ಸಂಪರ್ಕಿಸಿ ರಂಜಿತ್ ಎಫ್ಬಿಯಲ್ಲಿ ಹಾಕಿರುವ ಪೋಸ್ಟ್‌ಗಳ ಚಿತ್ರಗಳೊಂದಿಗೆ ದೂರು ದಾಖಲಿಸಿದ್ದಾರೆ. ಈ ಪೋಸ್ಟ್‌ಗಳ ಹಿಂದಿನ ಉದ್ದೇಶದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ರಂಜಿತ್‌ನನ್ನು ವಿಚಾರಣೆ ನಡೆಸಿದ್ದಾರೆ.

ಆರೋಪಿಯು ತನ್ನ ಫೇಸ್ಬುಕ್‌ ಖಾತೆಯಲ್ಲಿ ತಾನು ಬೆಂಗಳೂರು ಸಿಟಿ ಪೊಲೀಸ್‌ ಕ್ರೈಮ್‌ ಬ್ರಾಂಚಿನಲ್ಲಿ ಕೆಲಸ ಮಾಡಿಕೊಂಡಿರುವುದಾಗಿ ಸುಳ್ಳು ಮಾಹಿತಿಯನ್ನೂ ಹಾಕಿಕೊಂಡಿರುವುದಾಗಿ ಹೇಳಲಾಗಿದೆ. ‘ಪೊಲೀಸ್ ಇಲಾಖೆಯಲ್ಲಿ ಸೈಬರ್ ಕ್ರೈಂ ಡಿಟೆಕ್ಟಿವ್ʼ ಎಂದು ತನ್ನ ಪ್ರೊಫೈಲಿನಲ್ಲಿ ಹಾಕಿಕೊಂಡಿದ್ದಾನೆ.

ಅಕ್ಟೋಬರ್ 4ರಂದು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಲಾಗಿದೆ. ಮಾಧ್ಯಮ ವರದಿಯೊಂದನ್ನು ಟ್ಯಾಗ್ ಮಾಡುವ ಮೂಲಕ ರಂಜಿತ್ ‘ಡಿಕೆ ಸಹೋದರರನ್ನು ಕೊಲ್ಲಿ’ ಎಂದು ಬರೆದಿದ್ದ.

ಆರೋಪಿಯ ಫೇಸ್ಬುಕ್‌ ವಾಲ್‌ ತುಂಬಾ ಬಲಪಂಥೀ ವಿಚಾರಧಾರೆಗೆ ಸಂಬಂಧಿಸಿದ ಪ್ರಚೋದನಕಾರಿ ವಿಷಯಗಳೇ ತುಂಬಿವೆ. ಇನ್ನೊಂದು ಪೋಸ್ಟಿನಲ್ಲಿ ಡಿಕೆ ಸೂರಿಯವರಿಗೆ ನವಿಲುಗರಿ ಹಾರ ಹಾಕಿರುವ ಕುರಿತು ಬರೆದಿದ್ದು, ಅದರಲ್ಲೂ ಆತ ಡಿಕೆ ಸುರೇಶ್‌ ಅವರನ್ನು ಏಕೆ ಅರೆಸ್ಟ್‌ ಮಾಡಿಲ್ಲ ಎಂದು ಪ್ರಶ್ನಿಸಿದ್ದಾನೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು