ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಶಿವಮೊಗ್ಗ: ರಂಗಭೀಷ್ಮ ಬಿ.ವಿ.ಕಾರಂತರ ಜನ್ಮ ದಿನದ ನೆನಪಿನಲ್ಲಿ ರಂಗಾಯಣದಿಂದ ಮೂರು ದಿನಗಳ ನಾಟಕೋತ್ಸವ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಶಿವಮೊಗ್ಗ: ರಂಗಭೀಷ್ಮ ಬಿ.ವಿ.ಕಾರಂತರ ಜನ್ಮ ದಿನದ ನೆನಪಿನಲ್ಲಿ ರಂಗಾಯಣದಿಂದ ಮೂರು ದಿನಗಳ ನಾಟಕೋತ್ಸವ

ಶಿವಮೊಗ್ಗ, ಸೆ. 19: ಶಿವಮೊಗ್ಗ ರಂಗಾಯಣವು ರಂಗಭೀಷ್ಮ ಬಿ.ವಿ.ಕಾರಂತರ ಜನ್ಮ ದಿನದ ನೆನಪಿನಲ್ಲಿ ಸೆಪ್ಟೆಂಬರ್ 21, 22 ಮತ್ತು 23ರಂದು ಮೂರು ದಿನಗಳ ಕಾಲ ನಾಟಕೋತ್ಸವವನ್ನು ಶಿವಮೊಗ್ಗದ ಅಶೋಕನಗರದಲ್ಲಿನ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ರಂಗಾಯಣದ ನಿರ್ದೇಶಕ ಪ್ರಸನ್ನ ಡಿ ಸಾಗರ ಅವರು ತಿಳಿಸಿದರು.


ಅವರು ಇಂದು ತಮ್ಮ ಸಾಂಸ್ಕೃತಿಕ ಭವನದ ಆವರಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನಾಟಕೋತ್ಸವದ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಸೆ.21ನೇ ಶನಿವಾರ ಸಂಜೆ 6.30ಕ್ಕೆ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದ್ದುರಂಗಸಮಾಜದ ಸದಸ್ಯರು ಮತ್ತು ರಂಗಕರ್ಮಿ ಮಹಾಂತೇಶ್ ಗಜೇಂದ್ರಗಡ ಇವರು ಉದ್ಘಾಟಿಸುವರು. ನಾಟಕಕಾರರು ಮತ್ತು ರಂಗಸಮಾಜದ ಸದಸ್ಯ ರಾಜಪ್ಪ ದಳವಾಯಿ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಭೆಯ ಅಧ್ಯಕ್ಷತೆ ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಶ್ರೀ.ಪ್ರಸನ್ನ ಡಿ ಸಾಗರ ಇವರು ವಹಿಸಲಿದ್ದಾರೆ. ರಂಗಾಯಣ, ಶಿವಮೊಗ್ಗ ಘಟಕದ ಆಡಳಿತಾಧಿಕಾರಿ ಡಾ.ಶೈಲಜಾ ಎ.ಸಿ. ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಉದ್ಘಾಟನಾ ಸಮಾರಂಭದ ನಂತರ ಸುಸ್ಥಿರ ಪ್ರತಿಷ್ಟಾನ (ರಿ), ಬೆಂಗಳೂರು ಇವರ ಪ್ರಸ್ತುತಿಯ ಜೋಸೆಫ್ ಜಾನ್ ನಿರ್ದೇಶನದ ‘ಸರಸ ವಿರಸ ಸಮರಸ’ ನಾಟಕವು ಪ್ರದರ್ಶನಗೊಳ್ಳಲಿದೆ.


ಸೆ.22ರ ಭಾನುವಾರ ಸಂಜೆ 6.30ಕ್ಕೆ ಆಟಮಾಟ, ಸಾಂಸ್ಕೃತಿಕ ಪಥ ಧಾರವಾಡ ಇವರ ಪ್ರಸ್ತುತಿಯ ಮಹಾದೇವ ಹಡಪದ ಇವರ ರಂಗರೂಪ ಮತ್ತು ಪರಿಕಲ್ಪನೆಯ ವಿಶ್ವರಾಜ ರಾಜಗುರು ಅಭಿನಯದ ‘ನಾ ರಾಜಗುರು’ ನಾಟಕ ಪ್ರದರ್ಶನವು ನಡೆಯಲಿದೆ. ಸೆ.23ರ ಸೋಮವಾರ ಸಂಜೆ 6.30ಕ್ಕೆ ಒಡೋಲಗ ರಂಗಪರ್ಯಟನ, ಹಿತ್ಲಕೈ ಪ್ರಸ್ತುತಿಯ ಗಣಪತಿ ಬಿ ಹಿತ್ಲಕೈ ನಿರ್ದೇಶನದ ವಿವೇಕ ಶಾನಭೋಗ ರಚನೆಯ ‘ಬಹುಮುಖಿ’ ನಾಟಕವು ಪ್ರದರ್ಶನಗೊಳ್ಳಲಿದೆ.


ಈ ನಾಟಕೋತ್ಸವದಲ್ಲಿ ಪ್ರದರ್ಶನಗೊಳ್ಳುವ ಪ್ರತಿ ನಾಟಕಕ್ಕೆ ರೂ.30/- ರೂಪಾಯಿಗಳ ಪ್ರವೇಶ ಶುಲ್ಕವಿದ್ದು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಂಗಚಟುವಟಿಕೆಗಳನ್ನು ಪ್ರೋತ್ಸಾಹಿಸಬೇಕೆಂದು ಶಿವಮೊಗ್ಗ ರಂಗಾಯಣದ ನಿರ್ದೇಶಕ ಪ್ರಸನ್ನ ಆರ್ ಸಾಗರ ಇವರು ವಿನಂತಿಸಿದ್ದಾರೆ.


ಪತ್ರಿಕಾಗೋಷ್ಟಿಯಲ್ಲಿ ರಂಗಸಮಾಜದ ಸದಸ್ಯ ಹಾಗೂ ಜಿಲ್ಲಾ ಕಲಾತಂಡಗಳ ಒಕ್ಕೂಟದ ಅಧ್ಯಕ್ಷ ಮಹಾಂತೇಶ ಕದರಮಂಡಲಗಿ, ರಂಗಾಯಣ ಶಿವಮೊಗ್ಗ ಘಟಕದ ಆಡಳಿತಾಧಿಕಾರಿ ಡಾ.ಶೈಲಜಾ ಎ.ಸಿ. ಅವರು ಉಪಸ್ಥಿತರಿದ್ದರು.

ವಿಷಯಗಳು: #karnataka #peepal #peepalmedia
PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು