ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಮಲ್ ಕ್ಷಮೆ ಕೇಳಿದರೂ ಕರ್ನಾಟಕದಲ್ಲಿ ಥಗ್‌ ಲೈಫ್‌ ಸಿನೆಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ: ಶಿವರಾಜ್‌ ತಂಗಡಗಿ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಕಮಲ್ ಕ್ಷಮೆ ಕೇಳಿದರೂ ಕರ್ನಾಟಕದಲ್ಲಿ ಥಗ್‌ ಲೈಫ್‌ ಸಿನೆಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ: ಶಿವರಾಜ್‌ ತಂಗಡಗಿ

ನಟ, ರಾಜಕಾರಣಿ ಕ‌ಮಲ್‌ ಹಾಸನ್‌ ಇದೀಗ ಇನ್ನೊಂದು ಸುತ್ತಿನ ಇಕ್ಕಟ್ಟಿಗೆ ಸಿಲುಕಿದ್ದಾರೆ. ಕನ್ನಡ ಭಾಷೆಯ ವಿಷಯದಲ್ಲಿ ಅವರು ಆಡಿದ ಮಾತಿಗೆ ಕ್ಷಮೆ ಕೇಳಿದರೂ ಕರ್ನಾಟಕದಲ್ಲಿ ಥಗ್‌ ಲೈಫ್‌ ಸಿನೆಮಾ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ಇದಕ್ಕೆ ಚಲನಚಿತ್ರ ನಿರ್ಮಾಪಕರ ಸಂಘವೂ ಸ್ಪಂದಿಸಿದೆ ಎಂದು ಅವರು ಹೇಳಿದ್ದಾರೆ.

ಈ ಮೊದಲೇ ಅವರಿಗೆ ಕ್ಷಮೆ ಕೇಳುವುದಕ್ಕೆ ಹಲವು ಅವಕಾಶಗಳನ್ನುನೀಡಲಾಗಿತ್ತು, ಆದರೆ ಅದಕ್ಕೆ ಅವರು ಸರಿಯಾಗಿ ಸ್ಪಂದಿಸಿರಲಿಲ್ಲ. ಕನ್ನಡ ಹಾಗೂ ಕನ್ನಡದ ವಿಚಾರದಲ್ಲಿ ಯಾವ ರೀತಿಯ ಅಪಮಾನವನ್ನೂ ನಾವು ಸಹಿಸಲು ಸಿದ್ಧರಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಈ ಕುರಿತು ಚಲನಚಿತ್ರ ಮಂಡಳಿ ಮತ್ತು ನಿರ್ಮಾಪಕರ ಸಂಘದವರಿಗೆ ಪತ್ರವನ್ನೂ ಬರೆದಿದ್ದು, ಅವರೂ ನಮ್ಮ ಜೊತೆ ಮಾತನಾಡಿ ಸ್ಪಷ್ಟ ತೀರ್ಮಾನಕ್ಕೆ ಬಂದಿದ್ದಾರೆ. ಕಮಲ್‌ ನಟನೆಯ ಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್‌ ಮಾಡುವ ತೀರ್ಮಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಹೇಳಿದ್ದಾರೆ.

ತನ್ನ ಒಂದು ಹೇಳಿಕೆಯಿಂದ ಸಾಕಷ್ಟು ವಿರೋಧವನ್ನು ಎದುರಿಸಿದ್ದ ಕಮಲ ಹಾಸನ್‌, ಕರ್ನಾಟಕದ ನಿರ್ಧಾರದ ವಿರುದ್ಧ ಕೋರ್ಟ್‌ ಮೆಟ್ಟಿಲನ್ನೂ ಹತ್ತಿದ್ದರು. ಆದರೆ ಅವರಿಗೆ ಅಲ್ಲೂ ಹಿನ್ನೆಡೆ ಉಂಟಾಗಿದೆ. ರಾಜಕಾರಣಿಯೂ ಆಗಿರುವ ಕಮಲ್‌ ಆಗಾಗ ತಮ್ಮ ಮಾತುಗಳಿಂದ ತಮಿಳುನಾಡಿನಲ್ಲಿ ವಿವಾದಕ್ಕೆ ಈಡಾಗುತ್ತಲೇ ಇರುತ್ತಾರೆ. ಇವರ ಹಿಂದಿನ ಇಂಡಿಯನ್‌ – 2 ಸಿನೆಮಾ ಗಲ್ಲಾ ಪೆಟ್ಟಿಗೆಯಲ್ಲಿ ಹೀನಾಯ ಸೋಲು ಕಂಡಿತ್ತು.

ತಮಿಳು ಚಿತ್ರಗಳಿಗೆ ಬೆಂಗಳೂರು ಸಹ ದೊಡ್ಡ ಮಾರುಕಟ್ಟೆಯಾಗಿದ್ದು, ಇಲ್ಲಿ ತಮಿಳು ಸಿನೆಮಾಗಳು ಕೋಟಿಗಟ್ಟಲೆ ಮೊತ್ತದಲ್ಲಿ ವ್ಯವಹಾರ ಮಾಡುತ್ತವೆ. ಕಮಲಹಾಸನ್‌ ಈಗ ತನ್ನ ಮಾತುಗಳಿಂದ ತನ್ನ ಚಿತ್ರ ಬೆಂಗಳೂರಿನಲ್ಲಿ ವ್ಯವಹಾರ ಮಾಡಬಹುದಾದ ಸಾಧ್ಯತೆಯನ್ನು ಇಲ್ಲವಾಗಿಸಿಕೊಂಡಿದ್ದಾರೆ.



PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು