ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿ ಟಿಕೆಟ್‌ ಹಗರಣ: ಬೆಂಗಳೂರಿನಲ್ಲಿ ಇನ್ನೊಂದು ದೂರು ದಾಖಲು

P

Peepal Media Desk • ರಾಜ್ಯ

• 1 ನಿಮಿಷದ ಓದು

ಬಿಜೆಪಿ ಟಿಕೆಟ್‌ ಹಗರಣ: ಬೆಂಗಳೂರಿನಲ್ಲಿ ಇನ್ನೊಂದು ದೂರು ದಾಖಲು

ಇದರ ರೂವಾರಿ ಚೈತ್ರಾ ಅಲ್ಲ!

ಗೋವಿಂದ ಬಾಬು ಪೂಜಾರಿ ಮೋಸ ಹೋದ ಪ್ರಕರಣ ಬೆಳಕಿಗೆ ಬರುತ್ತಿದ್ದ ಹಾಗೆ ಒಂದರ ಹಿಂದೆ ಒಂದರಂತೆ ಪ್ರಕರಣಗಳು ಹೊರಬರುತ್ತಿವೆ. ಆದರೆ ಈ ಬಾರಿ ಮೋಸ ಹೋಗಿರುವವರು ಕರಾವಳಿಯವರಲ್ಲ, ಕೊಪ್ಪಳದವರು.

ಕೊಪ್ಪಳದ ಬಿಜೆಪಿ ಮುಖಂಡರೊಬ್ಬರು ಈ ಕುರಿತು ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು ತನಿಖೆ ಪ್ರಗತಿಯಲ್ಲಿದೆ.

ಘಟನೆಯ ವಿವರ:

ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಅವರ ಪತಿ ಜಿ.ತಿಮ್ಮಾರೆಡ್ಡಿ ಗಿಲ್ಲೆಸೂಗುರ್ ಭಾರಿ ಪ್ರಯತ್ನ ಮಾಡಿದ್ದರು. ಈ ವೇಳೆ ಟಿಕೆಟ್ ಕೊಡಿಸುತ್ತವೆಂದು ಮೂವರು ಚೈತ್ರಾ ಕುಂದಾಪುರ ಗ್ಯಾಂಗ್ ರೀತಿಯಲ್ಲೆ ವಂಚನೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಕನಕಗಿರಿ ಎಸ್ಸಿ ಮೀಸಲು ಕ್ಷೇತ್ರದ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಅವರು ಬಿಜೆಪಿ ಟಿಕೆಟ್ಗಾಗಿ ಭಾರಿ ಪೈಪೋಟಿ ಮಾಡಿದ್ದರು. ಈ ವೇಳೆ ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು, ಗೌರವ್ ಟಿಕೆಟ್ ಕೊಡಿಸುತ್ತವೆಂದು ಬರೋಬ್ಬರಿ 21 ಲಕ್ಷ ಹಣ ಪಂಗನಾಮ ಹಾಕಿದ್ದಾರೆ. ಈ ಕುರಿತು ಮೂವರ ವಿರುದ್ಧ ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ತಿಮ್ಮಾರೆಡ್ಡಿ ದೂರು ದಾಖಲಿಸಿದ್ದಾರೆ.

ರಾಜ್ಯದಲ್ಲಿ ಸಮೀಕ್ಷೆ ಮಾಡುತ್ತಿದ್ದೆವೆ. ನಾನು ಕೇಂದ್ರ ಬಿಜೆಪಿ ಚುನಾವಣೆ ಸಮೀಕ್ಷೆ ಮುಖ್ಯಸ್ಥನೆಂದು ಪರಿಚಯಿಸಿಕೊಂಡಿದ್ದ ವಿಶಾಲ್ ನಾಗ್. ನಮಗೆ ಅಮಿತ್ ಶಾ ಪರಿಚಯವಿದೆ. ಹಾಗಾಗಿ ಅದರಲ್ಲಿ ನಿಮ್ಮ ಹೆಸರು ಮುಂಚೂಣಿಗೆ ತರುತ್ತೆವೆಂದಿದ್ದರಂತೆ. ಹೀಗಾಗಿ ಆತನನ್ನು ನಂಬಿ ಟಿಕೆಟ್ ಆಕಾಂಕ್ಷಿಯ ಪತಿ, ವಿಶಾಲ್ ಬ್ಯಾಂಕ್ ಖಾತೆಗೆ 2 ಲಕ್ಷ ಹಾಗೂ ನಗದು 19 ಲಕ್ಷ ನೀಡಿದ್ದರಂತೆ. ಕೊನೆಗೆ ಟಿಕೆಟ್ ಸಿಗದೇ ಹಣವೂ ವಾಪಸ್ ಬಾರದ ಹಿನ್ನಲೆ ದೂರು ನೀಡಿದ್ದಾರೆ. ಇದೀಗ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ರಾಜ್ಯದಲ್ಲಿ ಬಿಜೆಪಿ ಟಿಕೆಟ್ಗಾಗಿ ಬಹುದೊಡ್ಡ ಡೀಲ್ ನಡೆದಿದೆಯಾ ಎಂಬ ಪ್ರಶ್ನೆ ಮೂಡಿದೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version