ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತ; ಸಿಎಂ, ಡಿಸಿಎಂ ಸೇರಿ 13 ಜನರ ವಿರುದ್ಧ ದೂರು ದಾಖಲಿಸಿದ ಟಿಜೆ ಅಬ್ರಾಹಂ

PPeepal Media Desk

Peepal Media Desk ಮೀಡಿಯಾ, ರಾಜ್ಯ

• 1 ನಿಮಿಷದ ಓದು

ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತ; ಸಿಎಂ, ಡಿಸಿಎಂ ಸೇರಿ 13 ಜನರ ವಿರುದ್ಧ ದೂರು ದಾಖಲಿಸಿದ ಟಿಜೆ ಅಬ್ರಾಹಂ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನರ ದುರ್ಮರಣ ಮತ್ತು 56 ಜನರು ಗಾಯಗೊಂಡ ಭೀಕರ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಆ ಸಂದರ್ಭದಲ್ಲಿ ನಗರದ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್ ಸೇರಿದಂತೆ 13 ಜನರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ದೂರು ನೀಡಿದ್ದಾರೆ.

ಗುರುವಾರ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಘಟನೆಗೆ ಸಂಬಂಧಿಸಿ 13 ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಡಿಪಿಎಆರ್ ಕಾರ್ಯದರ್ಶಿ ಸತ್ಯವತಿ, ಕೆಎಸ್‍ಸಿಎ, ಆರ್‌ಸಿಬಿ, ಅಮಾನತುಗೊಂಡ ಪೊಲೀಸ್ ಅಧಿಕಾರಿಗಳಾದ ವಿಕಾಸ್ ಕುಮಾರ್, ಶೇಖರ್ ತೆಕ್ಕಣನವರ್, ವಿಧಾನಸೌಧ ಡಿಸಿಪಿ ಕರಿಬಸನಗೌಡ ಮತ್ತಿತರರನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕೆಎಸ್‍ಸಿಎ ಮತ್ತು ಆರ್‌ಸಿಬಿ ಆಡಳಿತಾಧಿಕಾರಿಗಳು ಯಾವುದೇ ಪೂರ್ವ ಯೋಜನೆಯಿಲ್ಲದೆ ಕಾರ್ಯಕ್ರಮ ನಡೆಸಿದ್ದಾರೆ. ಕಾರ್ಯಕ್ರಮವನ್ನು 2 ದಿನ ಮುಂದೂಡಬಹುದಿತ್ತು. ಈ ದುರಂತಕ್ಕೆ ಕಾರಣರಾದವರ ಬಗ್ಗೆ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಈ ದುರಂತಕ್ಕೆ ನೇರವಾಗಿ ಸರ್ಕಾರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಈ ಸಾವುಗಳಿಗೆ ಸರಕಾರ ಉತ್ತರವನ್ನು ಕೊಡಬೇಕು ಎಂದು ದೂರಿನಲ್ಲಿ ಅಬ್ರಹಾಂ ಆಗ್ರಹಿಸಿದ್ದಾರೆ.

ಇದೊಂದು ಖಾಸಗಿ ತಂಡದ ವಿಜಯೋತ್ಸವವಾಗಿದ್ದು, ಇದರಲ್ಲಿ ಸರ್ಕಾರದ ಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದು ಅಸಂಬದ್ಧ. ಕಾರ್ಯಕ್ರಮದಲ್ಲಿ ಅವರುಗಳು ಭಾಗಿ ಆಗುವ ಅಗತ್ಯವೇನಿತ್ತು ಎಂದು ಟಿಜೇ ಅಬ್ರಾಹಂ ಸುದ್ದಿಗಾರರೊಂದಿಗೆ ಪ್ರಶ್ನಿಸಿದ್ದಾರೆ.

ಅಷ್ಟೇ ಅಲ್ಲದೆ ಐಪಿಎಲ್ ಪಂದ್ಯಾವಳಿಯೇ ಒಂದು ಫಿಕ್ಸಿಂಗ್ ಎಂಬ ಅನುಮಾನಗಳು ವ್ಯಕ್ತವಾಗಿದೆ ಎಂದು ಟಿಜೆ ಅಬ್ರಾಹಂ ಹೇಳಿದ್ದಾರೆ. ಯಾಕೆಂದರೆ ಐಪಿಎಲ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ನಡೆಸಿದ್ದ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಹಾಗಿದ್ದರೆ ಆರ್ಸಿಬಿ ಗೆಲ್ಲುವ ಬಗ್ಗೆ ಮುಂಚೆಯೇ ಮಾಹಿತಿ ಇತ್ತೇ, ಇದೊಂದು ಫಿಕ್ಸಿಂಗ್ ಇರಬಹುದೇ ಎಂದು ಟಿಜೆ ಅಬ್ರಾಹಂ ದೂರಿದ್ದಾರೆ.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು