ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಲಬುರಗಿ ನಗರವನ್ನು ಸ್ಮಾರ್ಟ್‌ ಸಿಟಿಯಾಗಿ ರೂಪಿಸಲು ಅಧಿಕಾರಿಗಳು ಶಾಸಕರೊಂದಿಗೆ ಪ್ರಿಯಾಂಕ್ ಖರ್ಗೆ ಚರ್ಚೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಕಲಬುರಗಿ ನಗರವನ್ನು ಸ್ಮಾರ್ಟ್‌ ಸಿಟಿಯಾಗಿ ರೂಪಿಸಲು ಅಧಿಕಾರಿಗಳು ಶಾಸಕರೊಂದಿಗೆ ಪ್ರಿಯಾಂಕ್ ಖರ್ಗೆ ಚರ್ಚೆ

ಕಲಬುರಗಿ ನಗರವನ್ನು ನಾಗರಿಕಸ್ನೇಹಿಯಾಗಿಸಲು ಸ್ಮಾರ್ಟ್‌ ಸಿಟಿಯಾಗಿ ರೂಪಿಸುವ ಸಲುವಾಗಿ ಯೋಜನೆಗಳನ್ನು ಹಮ್ಮಿಕೊಳ್ಳಲು ಪೂರ್ವಭಾವಿಯಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಶಾಸಕರು, ಅಧಿಕಾರಿಗಳು ಹಾಗೂ ಸಂಸ್ಥೆಗಳೊಂದಿಗೆ ಚರ್ಚೆ ನಡೆಸಿದರು.

ಬೆಂಗಳೂರಿನಲ್ಲಿ ತಮ್ಮ ಕಚೇರಿಗೆ ಆಗಮಿಸಿದ್ದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಅವರೊಂದಿಗೆ ಸಭೆ ನಡೆಸಿದ ಸಚಿವರು ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವಂತೆ ಕಾರ್ಯಕ್ರಮಗಳನ್ನು ರೂಪಿಸುವ ನಿಟ್ಟಿನಲ್ಲಿ ಹಲವಾರು ಸಲಹೆ, ಸೂಚನೆಗಳನ್ನು ನೀಡಿದರು. ವಿಡಿಯೋ ಸಂವಾದದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ ಹಾಗೂ ಕನಿಝಾ ಫಾತಿಮಾ ಹಾಗೂ ಕಲಬುರಗಿ ನಗರ ಪಾಲಿಕೆಯ ಆಯುಕ್ತರು, ನಗರ ಯೋಜನಾ ಸಂಸ್ಥೆಯಾದ ಐಐಹೆಚ್‌ಎಸ್‌ ಪ್ರತಿನಿಧಿಗಳು ಭಾಗವಹಿಸಿದ್ದರು.

ನಗರಕ್ಕೆ ಸುಸ್ಥಿರ ನೀರು ಸರಬರಾಜು, ಉತ್ತಮ ರಸ್ತೆ, ಉದ್ಯಾನವನ, ತ್ಯಾಜ್ಯ ಮರುಬಳಕೆ, ತ್ಯಾಜ್ಯ ವಿಲೇವಾರಿ, ಸುಗಮ ವಾಹನ ಸಂಚಾರ, ಆಕರ್ಷಕ ಹಾಗೂ ಅನುಕೂಲಕರ ಬಸ್‌  ತಂಗುದಾಣಗಳ ನಿರ್ಮಾಣ ಮುಂತಾದ ಮೂಲಭೂತ ಸೌಲಭ್ಯಗಳನ್ನು ಉತ್ತಮ ಪಡಿಸಿ ಕಲಬುರಗಿ ನಗರವನ್ನು ಸ್ಮಾರ್ಟ್‌ ಸಿಟಿಯನ್ನಾಗಿ ಪರಿವರ್ತನೆ ಮಾಡುವ ಗುರಿ ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು.

ನಗರ ಯೋಜನೆಯನ್ನು ರೂಪಿಸುವಲ್ಲಿ ಪರಿಣಿತ ಸಲಹಾ ಸಂಸ್ಥೆಯಾದ ಇಂಡಿಯನ್‌ ಇನ್ಸಿಟ್ಯೂಟ್‌ ಆಫ್‌ ಹ್ಯೂಮನ್‌ ಸೆಟಲ್ಮೆಂಟ್‌ ಸಂಸ್ಥೆಯು ಸ್ಥಳೀಯ ಶಾಸಕರು ಹಾಗೂ ನಗರಸಭೆ ಅಧಿಕಾರಿಗಳೊಂದಿಗೆ ಚರ್ಚಿಸಿ  ಕಲಬುರಗಿ ನಗರದ ಉತನ್ನತೀಕರಣಕ್ಕೆ ಸಂಬಂಧಿಸಿದಂತೆ ಉತ್ತಮ ಅಭ್ಯಾಸಗಳನ್ನು ಒಳಗೊಂಡ ವರದಿಯನ್ನು ಐದು ದಿನಗಳ ಒಳಗೆ ಸಲ್ಲಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು